ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Shidlaghatta News: ಕ್ರೀಡಾಕೂಟದಲ್ಲಿ ಮಿಂಚಿದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು

ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಅರ್ಹತೆ ಪಡೆಯುವ ನಿಟ್ಟಿನಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು. ಸೆ.15ರಿಂದ ನಡೆಯಲಿರುವ ಜಿಲ್ಲಾಮಟ್ಟದ ಕ್ರೀಡಾ ಕೂಟದಲ್ಲಿ ಶಿಡ್ಲಘಟ್ಟ ತಾಲ್ಲೂಕಿನಿಂದ 100ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸುವ ನಿರೀಕ್ಷೆ ಯಿದ್ದು, ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಪರ್ಧೆಗಳಿಗೆ ಆಯ್ಕೆಯಾಗುವ ವಿಶ್ವಾಸ ವ್ಯಕ್ತವಾಗಿದೆ

ಕ್ರೀಡಾಕೂಟದಲ್ಲಿ ಮಿಂಚಿದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು

-

Profile
Ashok Nayak Sep 1, 2026 9:47 PM

ಶಿಡ್ಲಘಟ್ಟ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವ ಬೆಳೆಸುವುದರ ಜೊತೆಗೆ ನಿರಂತರ ಅಭ್ಯಾಸಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ನಗರದ ನೆಹರೂ ಕ್ರೀಡಾಂಗಣದಲ್ಲಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟದ ಉಳಿಕೆ ಮೂರು ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸಲಾಯಿತು.

ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ನಗರದ ಡಾಲ್ಫಿನ್ ಪಿಯು ಕಾಲೇಜು, ಅಕ್ಷರ ಪಿಯು ಕಾಲೇಜು, ಬಿಜಿಎಸ್ ಕಾಲೇಜು, ಯೂನಿವರ್ಸಲ್ ಕಾಲೇಜು ಹಾಗೂ ಸ್ವಾಮಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ವಿವಿಧ ಕ್ರೀಡಾ ಚಟುವಟಿಕೆಗಳಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಿದರು.

ಇದನ್ನೂ ಓದಿ: Shidlaghatta News: ನರಸಿಂಹಸ್ವಾಮಿ ಕೃಪೆಯಿಂದ ಗ್ರಾಮ ಸುಭಿಕ್ಷವಾಗಲಿ: ಪುಟ್ಟು ಆಂಜಿನಪ್ಪ

ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಅರ್ಹತೆ ಪಡೆಯುವ ನಿಟ್ಟಿನಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು. ಸೆ.15ರಿಂದ ನಡೆಯಲಿರುವ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಶಿಡ್ಲಘಟ್ಟ ತಾಲ್ಲೂಕಿನಿಂದ 100ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸುವ ನಿರೀಕ್ಷೆಯಿದ್ದು, ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಪರ್ಧೆಗಳಿಗೆ ಆಯ್ಕೆಯಾಗುವ ವಿಶ್ವಾಸ ವ್ಯಕ್ತವಾಗಿದೆ.

ವಿದ್ಯಾರ್ಥಿಗಳು ಕ್ರೀಡಾ ಮನೋಭಾವದೊಂದಿಗೆ ನಿರಂತರ ಅಭ್ಯಾಸ ನಡೆಸಿ ಕಾಲೇಜು ಹಾಗೂ ತಾಲ್ಲೂಕಿಗೆ ಕೀರ್ತಿ ತರುವಂತಾಗಬೇಕು ಎಂಬ ಆಶಯವೂ ಕಾರ್ಯಕ್ರಮದಲ್ಲಿ ವ್ಯಕ್ತವಾಯಿತು.

ಕಾರ್ಯಕ್ರಮದಲ್ಲಿ ನಗರದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವೆಂಕಟಶಿವಾರೆಡ್ಡಿ, ಡಾಲ್ಫಿನ್ ಪಿಯು ಕಾಲೇಜಿನ ಪ್ರಾಂಶುಪಾಲ ಶ್ರೀನಿವಾಸ್, ಉಪನ್ಯಾಸಕ ಲಕ್ಷ್ಮಯ್ಯ ಹಾಗೂ ನೆಹರೂ ಕ್ರೀಡಾಂಗಣದ ಕರಾಟೆ ತರಬೇತುದಾರ ಶ್ರೀನಿವಾಸ್ ಉಪಸ್ಥಿತರಿದ್ದರು.