Monday, 9th December 2024

ರಾಷ್ಟ್ರಪತಿಯವರಿಂದ ನರೇಂದ್ರ ಮೋದಿ ಕ್ರೀಡಾಂಗಣ ಉದ್ಘಾಟನೆ

ಅಹಮದಾಬಾದ್: ವಿಶ್ವದ ಅತಿದೊಡ್ಡ ಕ್ರೀಡಾಂಗಣ ಎಂಬ ಶ್ರೇಯ ಹೊಂದಿರುವ ಸರ್ದಾರ್ ಪಟೇಲ್‌ ಕ್ರೀಡಾಂಗಣವನ್ನು ಬುಧವಾರ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಉದ್ಘಾಟಿಸಿದರು. ಇನ್ನು ಮುಂದೆ ಕ್ರೀಡಾಂಗಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹೆಸರಿನಿಂದ ಕರೆಯಲಾಗುತ್ತದೆ.

ಕ್ರೀಡಾಂಗಣವನ್ನು ಇನ್ನು ಅವರ ಹೆಸರಿನಿಂದಲೇ ಕರೆಯಲು ನಿರ್ಧರಿಸಲಾಗಿದೆ’ ಎಂದು ಸಮಾರಂಭದಲ್ಲಿ ಪಾಲ್ಗೊಂಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದರು.

ಅತ್ಯಾಧುನಿಕ ಸೌಲಭ್ಯವುಳ್ಳ ಈ ಕ್ರೀಡಾಂಗಣವು 1.32 ಲಕ್ಷ ಪ್ರೇಕ್ಷಕರ ಸಾಮರ್ಥ್ಯದ್ದಾಗಿದೆ. ಫುಟ್‌ಬಾಲ್‌, ಹಾಕಿ, ಬ್ಯಾಸ್ಕೆಟ್‌ಬಾಲ್, ಕಬಡ್ಡಿ, ಬಾಕ್ಸಿಂಗ್, ಲಾನ್ ಟೆನಿಸ್ ಮುಂತಾದ ವಿಭಾಗಗಳುಳ್ಳ ಸರ್ದಾರ್ ಪಟೇಲ್ ಹೆಸರಿನ ಕ್ರೀಡಾ ಸಂಕೀರ್ಣವನ್ನು ಕೋವಿಂದ್‌ ಲೋಕಾರ್ಪಣೆ ಮಾಡಿದರು.

ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವಿನ ಟೆಸ್ಟ್ ಕ್ರಿಕೆಟ್‌ ಸರಣಿಯ ಮೂರನೇ ಪಂದ್ಯ ನಡೆಯುತ್ತಿದೆ. ಮಾರ್ಚ್‌ 4ರಿಂದ ನಡೆಯುವ ನಾಲ್ಕನೇ ಪಂದ್ಯಕ್ಕೂ ಈ ಕ್ರೀಡಾಂಗಣ ಆತಿಥ್ಯ ವಹಿಸಲಿದೆ. 63 ಎಕರೆ ವಿಸ್ತಾರವುಳ್ಳ ಈ ಕ್ರೀಡಾಂಗಣವನ್ನು ಅಂದಾಜು ₹ 800 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಕ್ರೀಡಾಂಗಣದ ಉದ್ಘಾಟನೆಯ ಸಂದರ್ಭದಲ್ಲಿ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಮತ್ತಿತರರಿದ್ದರು.