Sunday, 8th September 2024

ಇಂಗ್ಲೆಂಡ್ ಟೆಸ್ಟ್ ಸರಣಿ: ಟೀಂ ಇಂಡಿಯಾಕ್ಕೆ ಪೃಥ್ವಿ ಶಾ, ಸೂರ್ಯಕುಮಾರ್ ಯಾದವ್ ಸೇರ್ಪಡೆ

ಲಂಡನ್: ಇಂಗ್ಲೆಂಡ್ ವಿರುದ್ಧದ ಐದು ಟೆಸ್ಟ್ ಪಂದ್ಯಗಳ ಸರಣಿಗೆ ಮುಂಚಿತವಾಗಿ ಪೃಥ್ವಿ ಶಾ ಮತ್ತು ಸೂರ್ಯಕುಮಾರ್ ಯಾದವ್ ಅವರನ್ನ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ.

ವಾಷಿಂಗ್ಟನ್ ಸುಂದರ್, ಅವೇಶ್ ಖಾನ್ ಮತ್ತು ಶುಭ್ಮನ್ ಗಿಲ್ ಅವರು ಗಾಯಾಳು ಯಾದಿಗೆ ಸೇರ್ಪಡೆ ಯಾದ ಹಿನ್ನೆಲೆಯಲ್ಲಿ ಶಾ ಮತ್ತು ಸೂರ್ಯಕುಮಾರ್ ಅವರ ಸೇರ್ಪಡೆಯಾಗಿದೆ. ‘ವಾಷಿಂಗ್ಟನ್ ಸುಂದರ್, ಬೌಲರ್ ಅವೇಶ್ ಖಾನ್, ಬ್ಯಾಟ್ಸ್ ಮನ್ ಶುಬ್ಮನ್ ಗಿಲ್ ಪ್ರವಾಸದಿಂದ ಹೊರಗುಳಿದಿದ್ದಾರೆ ಮತ್ತು ಭಾರತಕ್ಕೆ ಮರಳಿದ್ದಾರೆ’ ಎಂದು ಪ್ರಕಟಣೆ ತಿಳಿಸಿದೆ. ಏತನ್ಮಧ್ಯೆ, ವಿಕೆಟ್ ಕೀಪರ್-ಬ್ಯಾಟ್ಸ್ ಮನ್ ರಿಷಬ್ ಪಂತ್ ಕೋವಿಡ್-19ನಿಂದ ಚೇತರಿಸಿ ಕೊಂಡಿದ್ದಾರೆ.

ಭಾರತ ತಂಡ: ರೋಹಿತ್ ಶರ್ಮಾ, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ (ಉಪನಾಯಕ), ಹನುಮ ವಿಹಾರಿ, ರಿಷಬ್ ಪಂತ್ (ವಿಕೆಟ್ ಕೀಪರ್), ಆರ್.ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ, ಮೊಹಮ್ಮದ್‌ ಶಮಿ, ಎಂ.ಸಿರಾಜ್, ಶಾರ್ದೂಲ್ ಠಾಕೂರ್, ಉಮೇಶ ಯಾದವ್, ಕೆ.ಎಲ್.ರಾಹುಲ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಅಭಿಮನ್ಯು ಈಶ್ವರನ್, ಪೃಥ್ವಿ ಶಾ, ಸೂರ್ಯಕುಮಾರ್ ಯಾದವ್.

Leave a Reply

Your email address will not be published. Required fields are marked *

error: Content is protected !!