ನವದೆಹಲಿ: ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧು ಅವರಿಗೆ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತದ ಧ್ವಜ ಹಿಡಿಯುವ ದೇಶ ವನ್ನು ಪ್ರತಿನಿಧಿಸುವ ಅವಕಾಶ ಸಿಕ್ಕಿದೆ.
ನೀರಜ್ ಚೋಪ್ರಾ ಗಾಯದಿಂದಾಗಿ ಹಿಂದೆ ಸರಿದ ನಂತರ ಸಿಡಬ್ಲ್ಯೂಜಿ ಉದ್ಘಾಟನಾ ಸಮಾರಂಭದಲ್ಲಿ ಪಿವಿ ಸಿಂಧು ಭಾರತದ ಧ್ವಜಧಾರಿಯಾಗಿ ಆಯ್ಕೆಯಾಗಿದ್ದಾರೆ.
ಬರ್ಮಿಂಗ್ಹ್ಯಾಮ್ -2022 ಕಾಮನ್ವೆಲ್ತ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಟೀಮ್ ಇಂಡಿಯಾದ ಧ್ವಜಧಾರಿಯಾಗಿ ಎರಡು ಬಾರಿ ಒಲಿಂಪಿಕ್ ಪದಕ ವಿಜೇತ ಶಟ್ಲರ್ ಪಿ.ವಿ. ಸಿಂಧು ಅವರು ಭಾಗವಹಿಸ ಲಿದ್ದಾರೆ ಎಂದು ಭಾರತೀಯ ಒಲಿಂಪಿಕ್ ಸಂಸ್ಥೆ(ಐಒಎ) ತಿಳಿಸಿದೆ.