Wednesday, 11th December 2024

ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಪಿ.ವಿ.ಸಿಂಧು ಧ್ವಜಧಾರಿ: ಐಒಎ

ನವದೆಹಲಿ: ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧು ಅವರಿಗೆ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತದ ಧ್ವಜ ಹಿಡಿಯುವ ದೇಶ ವನ್ನು ಪ್ರತಿನಿಧಿಸುವ ಅವಕಾಶ ಸಿಕ್ಕಿದೆ.

ನೀರಜ್ ಚೋಪ್ರಾ ಗಾಯದಿಂದಾಗಿ ಹಿಂದೆ ಸರಿದ ನಂತರ ಸಿಡಬ್ಲ್ಯೂಜಿ ಉದ್ಘಾಟನಾ ಸಮಾರಂಭದಲ್ಲಿ ಪಿವಿ ಸಿಂಧು ಭಾರತದ ಧ್ವಜಧಾರಿಯಾಗಿ ಆಯ್ಕೆಯಾಗಿದ್ದಾರೆ.

ಬರ್ಮಿಂಗ್ಹ್ಯಾಮ್ -2022 ಕಾಮನ್ವೆಲ್ತ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಟೀಮ್ ಇಂಡಿಯಾದ ಧ್ವಜಧಾರಿಯಾಗಿ ಎರಡು ಬಾರಿ ಒಲಿಂಪಿಕ್ ಪದಕ ವಿಜೇತ ಶಟ್ಲರ್ ಪಿ.ವಿ. ಸಿಂಧು ಅವರು ಭಾಗವಹಿಸ ಲಿದ್ದಾರೆ ಎಂದು ಭಾರತೀಯ ಒಲಿಂಪಿಕ್ ಸಂಸ್ಥೆ(ಐಒಎ) ತಿಳಿಸಿದೆ.

ಕಾಮನ್‌ವೆಲ್ತ್ ಗೇಮ್ಸ್ ಜು.28 ರಿಂದ ಪ್ರಾರಂಭವಾಗಲಿದ್ದು, ಇದನ್ನು ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ನಲ್ಲಿ ಆಯೋಜಿಸ ಲಾಗಿದೆ.