ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಭರ್ಜರಿ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದ ರಾಜಸ್ಥಾನ್‌

IPL 2026 Points Table: ಸನ್‌ರೈಸರ್ಸ್‌ ಹೈದರಾಬಾದ್‌ ತಂಡದ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ಆರು ಪಂದ್ಯಗಳಲ್ಲಿ 323 ರನ್ ಗಳಿಸಿ ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಹೆನ್ರಿಚ್ ಕ್ಲಾಸೆನ್ 320 ರನ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ಶುಭ್‌ಮನ್ ಗಿಲ್ 265 ರನ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

Ravindra Jadeja

ಲಖನೌ, ಎ.23: 2026ರ ಐಪಿಎಲ್ ಟೂರ್ನಿಯಲ್ಲಿ ರಾಜಸ್ಥಾನ್ ರಾಯಲ್ಸ್(LSG vs RR) ತಂಡವು ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು 40 ರನ್‌ಗಳಿಂದ ಸೋಲಿಸುವ ಮೂಲಕ ಅಂಕ(IPL 2026 Points Table)ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ. ಆಡಿದ 7 ಪಂದ್ಯಗಳಿಂದ 5 ಪಂದ್ಯ ಗೆದ್ದು 10 ಅಂಕ ಕಲೆಹಾಕಿದೆ. ಅಜೇಯ ತಂಡವಾಗಿರುವ ಪಂಜಾಬ್‌ ಕಿಂಗ್ಸ್‌ ತಂಡ 11 ಅಂಕದೊಂದಿಗೆ ಅಗ್ರಸ್ಥಾನಿಯಾಗಿದೆ.

ಮತ್ತೊಂದೆಡೆ,‌ ಸೋಲು ಲಕ್ನೋ ತಂಡವು 7 ಪಂದ್ಯಗಳಲ್ಲಿ 4 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದೆ. ಅವರ ರನ್‌ರೇಟ್‌ ದರ ಪ್ರಸ್ತುತ -1.277 ಆಗಿದ್ದು, ಮುಂಬರುವ ದಿನಗಳಲ್ಲಿ ಅವರು ದೊಡ್ಡ ಗೆಲುವು ಸಾಧಿಸದಿದ್ದರೆ ಅದನ್ನು ಸರಿಪಡಿಸುವುದು ಕಷ್ಟಕರವಾಗಿರುತ್ತದೆ. ಪ್ರಸ್ತುತ ಕೊನೆಯ ಸ್ಥಾನದಲ್ಲಿರುವ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಅವರಿಗಿಂತ ಉತ್ತಮ ರನ್‌ರೇಟ್ ಹೊಂದಿದೆ.

ಸನ್‌ರೈಸರ್ಸ್‌ ಹೈದರಾಬಾದ್‌ ತಂಡದ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ಆರು ಪಂದ್ಯಗಳಲ್ಲಿ 323 ರನ್ ಗಳಿಸಿ ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಹೆನ್ರಿಚ್ ಕ್ಲಾಸೆನ್ 320 ರನ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ಶುಭ್‌ಮನ್ ಗಿಲ್ 265 ರನ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

ಎಲ್‌ಎಸ್‌ಜಿ ವೇಗಿ ಪ್ರಿನ್ಸ್ ಯಾದವ್ ಏಳು ಪಂದ್ಯಗಳಲ್ಲಿ 13 ವಿಕೆಟ್‌ಗಳೊಂದಿಗೆ ಪರ್ಪಲ್ ಕ್ಯಾಪ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದರೆ. ಅನ್ಶುಲ್ ಕಾಂಬೋಜ್ 13 ವಿಕೆಟ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಆರು ಪಂದ್ಯಗಳಲ್ಲಿ 12 ವಿಕೆಟ್‌ಗಳೊಂದಿಗೆ ಇಶಾನ್ ಮಾಲಿಂಗ ಮೂರನೇ ಸ್ಥಾನ ಪಡೆದಿದ್ದಾರೆ.

RR vs LSG: ರಾಜಸ್ಥಾನ ರಾಯಲ್ಸ್ ಪರ ಹೊಸ ಐಪಿಎಲ್ ದಾಖಲೆ ನಿರ್ಮಿಸಿದ ಜೋಫ್ರಾ ಆರ್ಚರ್

ಏಕನಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ರಾಜಸ್ಥಾನ್‌ ರಾಯಲ್ಸ್‌ ತಂಡ 20 ಓವರ್‌ಗಳಲ್ಲಿ 6 ವಿಕೆಟ್‌ಗಳಿಗೆ 159 ರನ್‌ ಪೇರಿಸಿತು. ಸಾಧಾರಣ ಮೊತ್ತ ಬೆನ್ನಟ್ಟಿದ ಲಖನೌ ತಂಡವು ಬ್ಯಾಟಿಂಗ್‌ನಲ್ಲಿ ಮತ್ತೆ ವೈಫಲ್ಯ ಅನುಭವಿಸಿತು. ನಿರಂತರವಾಗಿ ವಿಕೆಟ್ ಕಳೆದುಕೊಂಡ ರಿಷಭ್ ಪಂತ್‌ ಪಡೆ 18 ಓವರ್‌ಗಳಲ್ಲಿ 119 ರನ್‌ಗಳಿಗೆ ಸರ್ವಪತನವಾಯಿತು. ಅದರೊಂದಿಗೆ, ಹಾಲಿ ಲೀಗ್‌ನಲ್ಲಿ ಸತತ ನಾಲ್ಕನೇ ಸೋಲು ಅನುಭವಿಸಿತು.

ಇಂದಿನ ಪಂದ್ಯ

ಇಂದು(ಗುರುವಾರ) ನಡೆಯುವ ಪಂದ್ಯದಲ್ಲಿ ತಲಾ 5 ಬಾರಿಯ ಚಾಂಪಿಯನ್‌ಗಳಾದ ಮುಂಬೈ ಇಂಡಿಯನ್ಸ್‌ ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ಮುಖಾಮುಖಿಯಾಗಲಿವೆ. ಪಂದ್ಯ ವಾಂಖೆಡೆ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆಯಲಿದೆ. ದಿಗ್ಗಜರಾದ ರೋಹಿತ್ ಶರ್ಮಾ ಮತ್ತು ಎಂ.ಎಸ್‌.ಧೋನಿ ಅವರ ಮರಳುವಿಕೆಗೆ ಈ ಪಂದ್ಯ ವೇದಿಕೆಯಾಗುವ ಸಾಧ್ಯತೆಯಿದೆ. ಮಂಡಿಯ ಸ್ನಾಯುರಜ್ಜು ನೋವಿನಿಂದ ರೋಹಿತ್ ಮತ್ತು ಮೀನಖಂಡದ ನೋವಿನಿಂದ ಧೋನಿ ಚೇತರಿಸಿಕೊಂಡಿದ್ದಾರೆ. ಅವರ ಪುನರಾಗಮನಕ್ಕೆ ಕ್ರಿಕೆಟ್‌ ಪ್ರೇಮಿಗಳು ಕಾತರರಾಗಿದ್ದಾರೆ.