ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಹುಬ್ಬಳ್ಳಿಯಲ್ಲಿ ಕರ್ನಾಟಕ vs ಜಮ್ಮು-ಕಾಶ್ಮೀರ ರಣಜಿ ಫೈನಲ್

Ranji Trophy 2025-26 final:‌ ಗುರುವಾರ ಮುಕ್ತಾಯಗೊಂಡ ಉತ್ತರಾಖಂಡ ತಂಡದ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡವು ಮೊದಲ ಇನಿಂಗ್ಸ್‌ನ ಬೃಹತ್ ಮುನ್ನಡೆಯ ನೆರವಿನಿಂದ ಫೈನಲ್‌ಗೆ ಲಗ್ಗೆ ಇಟ್ಟಿತು. ಮತ್ತು ಕಾಶ್ಮೀರ ತಂಡ ಬಂಗಾಳ ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಜಮ್ಮು ಮತ್ತು ಕಾಶ್ಮೀರ ತಂಡವು ರಣಜಿ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದೆ.

ಹುಬ್ಬಳ್ಳಿಯಲ್ಲಿ ಕರ್ನಾಟಕ vs ಜಮ್ಮು-ಕಾಶ್ಮೀರ ರಣಜಿ ಫೈನಲ್

Karnataka Ranji Team -

Abhilash BC
Abhilash BC Feb 20, 2026 10:48 AM

ಬೆಂಗಳೂರು, ಫೆ.20: 2025-26ರ ರಣಜಿ ಟ್ರೋಫಿ ಫೈನಲ್‌ನಲ್ಲಿ ಕರ್ನಾಟಕ ತಂಡವು ಜಮ್ಮು ಮತ್ತು ಕಾಶ್ಮೀರ (ಜೆ & ಕೆ) ತಂಡವನ್ನು ಎದುರಿಸಲಿದೆ. ಫೈನಲ್‌(Ranji Trophy 2025-26 final) ಪಂದ್ಯ ಫೆ.26ರಂದು ಆರಂಭವಾಗಲಿದೆ. ಪಂದ್ಯಕ್ಕೆ ಹುಬ್ಬಳ್ಳಿಯ ರಾಜನಗರದಲ್ಲಿರುವ ಕೆಎಸ್‌ಸಿಎ ಕ್ರೀಡಾಂಗಣ ಆತಿಥ್ಯವಹಿಸುವ ಸಾಧ್ಯತೆಯಿದೆ.

ಲಖನೌದಲ್ಲಿ ಗುರುವಾರ ಮುಕ್ತಾಯಗೊಂಡ ಉತ್ತರಾಖಂಡ ತಂಡದ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡವು ಮೊದಲ ಇನಿಂಗ್ಸ್‌ನ ಬೃಹತ್ ಮುನ್ನಡೆಯ ನೆರವಿನಿಂದ ಫೈನಲ್‌ಗೆ ಲಗ್ಗೆ ಇಟ್ಟಿತು. ಮತ್ತು ಕಾಶ್ಮೀರ ತಂಡ ಬಂಗಾಳ ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಜಮ್ಮು ಮತ್ತು ಕಾಶ್ಮೀರ ತಂಡವು ರಣಜಿ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದೆ.

ಕರ್ನಾಟಕ 15ನೇ ಬಾರಿ ಫೈನಲ್‌ಗೆ ಲಗ್ಗೆ ಇಟ್ಟಿದೆ. 2014-15ರ ಋತುವಿನ ನಂತರ ಮೊದಲ ಬಾರಿ ಈ ಸಾಧನೆ ಮಾಡಿದೆ. ಗೆಲ್ಲಲು 827 ರನ್ ಗುರಿ ಪಡೆದಿದ್ದ ಉತ್ತರಾಖಂಡ ತಂಡವು ಉಭಯ ನಾಯಕರು ಪಂದ್ಯವನ್ನು ಡ್ರಾಗೊಳಿಸಲು ನಿರ್ಧರಿಸಲು ಮುಂದಾದಾಗ 62 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ 260 ರನ್ ಗಳಿಸಿತ್ತು. ಶ್ರೇಯಸ್ ಗೋಪಾಲ್(3-83) ಹಾಗೂ ಪ್ರಸಿದ್ಧ ಕೃಷ್ಣ (2-17)ತಮ್ಮೊಳಗೆ ಐದು ವಿಕೆಟ್‌ಗಳನ್ನು ಹಂಚಿಕೊಂಡರು.

ರೋಹಿತ್‌ ಶರ್ಮ ದಾಖಲೆ ಮುರಿದ ಸಿಕಂದರ್ ರಜಾ

ಒಂದು ಹಂತದಲ್ಲಿ ಉತ್ತರಾಖಂಡ ತಂಡವು 6 ವಿಕೆಟ್‌ಗಳ ನಷ್ಟಕ್ಕೆ 156 ರನ್ ಗಳಿಸಿತ್ತು. ಏಳನೇ ವಿಕೆಟ್‌ಗೆ ಮುರಿಯದ ಜೊತೆಯಾಟದಲ್ಲಿ 104 ರನ್ ಸೇರಿಸಿದ ಅಭಯ್ ನೇಗಿ(ಔಟಾಗದೆ 57, 66 ಎಸೆತ, 5 ಬೌಂಡರಿ,3 ಸಿಕ್ಸರ್) ಹಾಗೂ ಸೌರಭ್ ರಾವತ್(ಔಟಾಗದೆ 53, 114 ಎಸೆತ, 4 ಬೌಂಡರಿ, 2 ಸಿಕ್ಸರ್) ಉತ್ತರಾಖಂಡ ತಂಡವನ್ನು ಅತ್ಯಂತ ಹೀನಾಯ ಸೋಲಿನಿಂದ ಪಾರು ಮಾಡಿದರು.

"ಫೆ. 24ರಿಂದ 5 ದಿನಗಳ ಕಾಲ ನಡೆಯಲಿರುವ ಕರ್ನಾಟಕ ಹಾಗೂ ಜಮ್ಮು ಮತ್ತು ಕಾಶ್ಮೀರ ತಂಡಗಳ ನಡುವಿನ ಫೈನಲ್ ಪಂದ್ಯವು ಹುಬ್ಬಳ್ಳಿಯ ರಾಜನಗರದಲ್ಲಿರುವ ಕೆಎಸ್‌ಸಿಎ ಕ್ರೀಡಾಂಗಣದಲ್ಲಿ ನಡೆಯಲಿದೆ" ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್‌ಸಿಎ) ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಎಂ. ಚಿನ್ನಸ್ವಾಮಿ ಕ್ರೀಡಾಂಗಣವು ದೇಶೀಯ, ಐಪಿಎಲ್ ಮತ್ತು ಅಂತರರಾಷ್ಟ್ರೀಯ ಪಂದ್ಯಗಳನ್ನು ಆಯೋಜಿಸಲು ಕರ್ನಾಟಕ ರಾಜ್ಯ ಸಚಿವ ಸಂಪುಟದಿಂದ ಷರತ್ತುಬದ್ಧ ಅನುಮೋದನೆಯನ್ನು ಪಡೆದುಕೊಂಡಿದೆ. ಇದರ ಹೊರತಾಗಿಯೂ ರಣಜಿ ಫೈನಲ್ ಪಂದ್ಯವನ್ನು ಹುಬ್ಬಳ್ಳಿಯಲ್ಲಿ ಆಯೋಜಿಸಲು ಕೆಎಸ್‌ಸಿಎ ನಿರ್ಧರಿಸಿದೆ.