Thursday, 12th December 2024

ನಂ.1 ಟೆಸ್ಟ್ ಬೌಲರ್ ಪಟ್ಟಕ್ಕೆ ರವಿಚಂದ್ರನ್ ಅಶ್ವಿನ್ ಭಾಜನ

ಇಂದೋರ್‌: ನೂತನ ಐಸಿಸಿ ಟೆಸ್ಟ್ ಬೌಲರ್​ಗಳ ಶ್ರೇಯಾಂಕ ಬಿಡುಗಡೆಯಾಗಿದ್ದು, ಇಂಗ್ಲೆಂಡ್‌ನ ಅನುಭವಿ ವೇಗಿ ಜೇಮ್ಸ್ ಆಂಡರ್ಸನ್ ಅವರನ್ನು ಹಿಂದಿಕ್ಕಿ ವಿಶ್ವದ ನಂ.1 ಟೆಸ್ಟ್ ಬೌಲರ್ ಪಟ್ಟಕ್ಕೆ ರವಿಚಂದ್ರನ್ ಅಶ್ವಿನ್ ಭಾಜನರಾಗಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿಭಾರತದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಐಸಿಸಿ ಟೆಸ್ಟ್ ಬೌಲರ್‌ಗಳ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೆ ಏರಿದ್ದಾರೆ.

ಅಶ್ವಿನ್ 864 ಅಂಕಗಳೊಂದಿಗೆ ಇಂಗ್ಲೆಂಡ್ ದಂತಕಥೆ ಜೇಮ್ಸ್ ಆಂಡರ್ಸನ್ ಅವರನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೆ ಏರಿದ್ದಾರೆ. ಎಂಟು ವರ್ಷಗಳ ನಂತರ ಮತ್ತೊಮ್ಮೆ ಸ್ಥಾನ ಪಡೆದಿದ್ದಾರೆ.