ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಟಿ20 ಕ್ರಿಕೆಟ್‌ನಲ್ಲಿ 4 ಸಾವಿರ ರನ್, 200 ವಿಕೆಟ್ ಪಡೆದು ದಾಖಲೆ ಬರೆದ ರವೀಂದ್ರ ಜಡೇಜಾ

Ravindra Jadeja: 2008 ರಲ್ಲಿ ರಾಯಲ್ಸ್ ತಂಡಕ್ಕೆ ಪ್ರಶಸ್ತಿ ಗೆದ್ದ ನಂತರ, ಜಡೇಜಾ ಐಪಿಎಲ್‌ನಲ್ಲಿ 173 ವಿಕೆಟ್‌ಗಳನ್ನು ಪಡೆದಿದ್ದಾರೆ. ರಾಜಸ್ಥಾನ ರಾಯಲ್ಸ್ ಜೊತೆಗೆ ಮಾತ್ರವಲ್ಲದೆ ಅವರು ಚೆನ್ನೈ ಸೂಪರ್ ಕಿಂಗ್ಸ್, ಕೊಚ್ಚಿ ಟಸ್ಕರ್ಸ್ ಮತ್ತು ಗುಜರಾತ್ ಲಯನ್ಸ್ ತಂಡಗಳನ್ನು ಸಹ ಪ್ರತಿನಿಧಿಸಿದ್ದಾರೆ.

Ravindra Jadeja

ಗುವಾಹಟಿ, ಎ.11: ಶುಕ್ರವಾರ ನಡೆದ ಐಪಿಎಲ್ 2026(IPL 2026)ರ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್(RCB vs RR) ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಆರು ವಿಕೆಟ್‌ಗಳ ಜಯ ಸಾಧಿಸಿತು. ಈ ಪಂದ್ಯದಲ್ಲಿ ರವೀಂದ್ರ ಜಡೇಜಾ(Ravindra Jadeja) ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ 4000 ರನ್ ಮತ್ತು 200 ವಿಕೆಟ್‌ಗಳ ಮೈಲಿಗಲ್ಲು ತಲುಪಿದ ಎರಡನೇ ಭಾರತೀಯ ಆಲ್‌ರೌಂಡರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಗುವಾಹಟಿಯ ಎಸಿಎ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್‌ಆರ್‌ನ ಚೇಸಿಂಗ್‌ ವೇಳೆ ಅಜೇಯ 24 ರನ್‌ಗ ಬಾರಿಸಿದ ವೇಳೆ ಜಡೇಜಾ ಈ ಮೈಲಿಗಲ್ಲನ್ನು ತಲುಪಿದರು. ಟಿ20 ಕ್ರಿಕೆಟ್‌ನಲ್ಲಿ ಈಗಾಗಲೇ 238 ವಿಕೆಟ್‌ಗಳನ್ನು ಪಡೆದಿರುವ ಎಡಗೈ ಆಲ್‌ರೌಂಡರ್ ಈಗ 4016* ರನ್‌ಗಳನ್ನು ಗಳಿಸಿದ್ದಾರೆ. ಈ ಸಾಧನೆ ಮಾಡಿದ ಮತ್ತೊಬ್ಬ ಭಾರತೀಯ ಬೌಲರ್ ಹಾರ್ದಿಕ್ ಪಾಂಡ್ಯ, ಅತಿ ಕಡಿಮೆ ಅವಧಿಯ ಕ್ರಿಕೆಟ್‌ನಲ್ಲಿ 6165 ರನ್‌ಗಳನ್ನು ಗಳಿಸಿ 227 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

2008 ರಲ್ಲಿ ರಾಯಲ್ಸ್ ತಂಡಕ್ಕೆ ಪ್ರಶಸ್ತಿ ಗೆದ್ದ ನಂತರ, ಜಡೇಜಾ ಐಪಿಎಲ್‌ನಲ್ಲಿ 173 ವಿಕೆಟ್‌ಗಳನ್ನು ಪಡೆದಿದ್ದಾರೆ. ರಾಜಸ್ಥಾನ ರಾಯಲ್ಸ್ ಜೊತೆಗೆ ಮಾತ್ರವಲ್ಲದೆ ಅವರು ಚೆನ್ನೈ ಸೂಪರ್ ಕಿಂಗ್ಸ್, ಕೊಚ್ಚಿ ಟಸ್ಕರ್ಸ್ ಮತ್ತು ಗುಜರಾತ್ ಲಯನ್ಸ್ ತಂಡಗಳನ್ನು ಸಹ ಪ್ರತಿನಿಧಿಸಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಜಡೇಜಾ(173 ವಿಕೆಟ್‌) ಒಂಬತ್ತನೇ ಸ್ಥಾನದಲ್ಲಿದ್ದಾರೆ. ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ (ಟಿ20ಐ) 37 ವರ್ಷದ ಜಡೇಜಾ 515 ರನ್ ಗಳಿಸಿದ್ದಾರೆ ಮತ್ತು ಭಾರತಕ್ಕಾಗಿ 54 ವಿಕೆಟ್‌ಗಳನ್ನು ಪಡೆದಿದ್ದಾರೆ.

IPL 2026: ರಾಜಸ್ಥಾನ್‌ ವಿರುದ್ಧ ಸೋತರೂ ಚೆನ್ನೈ ಸೂಪರ್‌ ಕಿಂಗ್ಸ್‌ ದಾಖಲೆ ಸರಿಗಟ್ಟಿದ ಆರ್‌ಸಿಬಿ

ಧೋನಿ, ರೋಹಿತ್‌ ಜತೆ ಎಲೈಟ್‌ ಪಟ್ಟಿ ಸೇರ್ಪಡೆ

ಆರ್‌ಸಿಬಿ ವಿರುದ್ಧ ಕಣಕ್ಕಿಳಿಯುವ ಮೂಲಕ ರವೀಂದ್ರ ಜಡೇಜಾ ಅವರು ಟಿ20 ಕ್ರಿಕೆಟ್‌ನಲ್ಲಿ 350ನೇ ಪಂದ್ಯಗಳನ್ನು ಆಡಿದ ಗೌರವಕ್ಕೆ ಭಾಜನರಾದರು. ಜಡೇಜಾ ಅವರು 74 ಅಂತರರಾಷ್ಟ್ರೀಯ ಟಿ20 ಹಾಗೂ 257 ಐಪಿಎಲ್‌ ಪಂದ್ಯಗಳನ್ನು ಆಡಿದ್ದಾರೆ. ಲೀಸ್ಟ್‌ ಎ ಸೇರಿದಂತೆ 350 ಪಂದ್ಯದಲ್ಲಿ ಕಣಕ್ಕಿಳಿದಿದ್ದಾರೆ. ಆ ಮೂಲಕ 350ಕ್ಕೂ ಹೆಚ್ಚು ಟಿ20 ಪಂದ್ಯಗಳನ್ನು ಆಡಿರುವ ಭಾರತೀಯ ಆಟಗಾರರಾದ ರೋಹಿತ್ ಶರ್ಮಾ, ಧೋನಿ ಹಾಗೂ ವಿರಾಟ್ ಕೊಹ್ಲಿ ಅವರೊಂದಿಗೆ ಎಲೈಟ್ ಪಟ್ಟಿಗೆ ಸೇರಿದ್ದಾರೆ.