RBC vs GT: ಪಂದ್ಯದ ಪಿಚ್ ರಿಪೋರ್ಟ್, ಹವಾಮಾನ ವರದಿ ಹೇಗಿದೆ?
ರಾಜ್ಯದ ಕೆಲವಡೆ ಸೋಮವಾರ ಗುಡುಗು ಸಹಿತ ಮಳೆಯಾಗಿದೆ. ಅದೇ ರೀತಿ ಮುಂದಿನ 6 ದಿನಗಳ ರಾಜ್ಯದಲ್ಲಿ ಮಳೆ ಎಚ್ಚರಿಕೆ ನೀಡಲಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಆರೆಂಜ್ ಅಲರ್ಟ್ ಘೋಷಿಸಿದೆ. ಹೀಗಾಗಿ ಪಂದ್ಯಲ್ಲೆ ಮಳೆ ಭೀತಿ ತಪ್ಪಿದ್ದಲ್ಲ.


ಬೆಂಗಳೂರು: ಬುಧವಾರ ಆತಿಥೇಯ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB vs GT) ಮತ್ತು ಗುಜರಾತ್ ಟೈಟಾನ್ಸ್ ನಡುವೆ ಮಹತ್ವದ ಐಪಿಎಲ್ ಮುಖಾಮುಖಿ ನಡೆಯಲಿದೆ. ಆಡಿದ ಎರಡು ಪಂದ್ಯಗಳನ್ನು ಗೆದ್ದಿರುವ ಬೆಂಗಳೂರು(RCB) ತಂಡ ತವರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲೂ(M Chinnaswamy Stadium) ಇದೇ ಜೋಶ್‌ನಲ್ಲಿ ಆಡಿ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದೆ. ಈ ಪಂದ್ಯದ ಪಿಚ್ ರಿಪೋರ್ಟ್, ಹವಾಮಾನ ವರದಿ ಮತ್ತು ಇತ್ತಂಡಗಳ ಬಲಾಬಲ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
ಅಂಕಣ ಗುಟ್ಟು
ಚಿನ್ನಸ್ವಾಮಿ ಮೈದಾನ ಚಿಕ್ಕದಾಗಿರುವುದರಿಂದ ಭಾರೀ ಪ್ರಮಾಣದ ರನ್ ಹರಿದು ಬರುವುದು ಸಾಮಾನ್ಯ. ಉಭಯ ತಂಡಗಳ ಬ್ಯಾಟಿಂಗ್ ಕೂಡ ಬಲಿಷ್ಠವಾಗಿದೆ. ಹೀಗಾಗಿ ಬೌಲರ್‌ಗಳು ಶಕ್ತಿ ಮೀರಿ ಪ್ರಯತ್ನ ನಡೆಸುವುದು ಅಗತ್ಯ. ಮೊದಲು ಬ್ಯಾಟಿಂಗ್ ಮಾಡುವ ತಂಡಕ್ಕೆ ದೊಡ್ಡ ಮೊತ್ತ ಪೇರಿಸುವ ಸವಾಲಿರುತ್ತದೆ. ಸಾಮಾನ್ಯವಾಗಿ ಚಿನ್ನಸ್ವಾಮಿ ಸ್ನೇಹಿ ಪಿಚ್. ಹೀಗಾಗಿ ಈ ಪಂದ್ಯಕ್ಕೆ ತಂಡವೊಂದು ಕನಿಷ್ಠ ಮೂವರು ಸ್ಪಿನ್ನರ್‌ಗಳನ್ನು ಕಣಕ್ಕಿಳಿಸಬಹುದು.
ಮಳೆ ಭೀತಿ
ರಾಜ್ಯದ ಕೆಲವಡೆ ಸೋಮವಾರ ಗುಡುಗು ಸಹಿತ ಮಳೆಯಾಗಿದೆ. ಅದೇ ರೀತಿ ಮುಂದಿನ 6 ದಿನಗಳ ರಾಜ್ಯದಲ್ಲಿ ಮಳೆ ಎಚ್ಚರಿಕೆ ನೀಡಲಾಗಿದೆ. ಎಪ್ರಿಲ್ 1 ಮತ್ತು 2ರಂದು ಕರ್ನಾಟಕದ ಒಳನಾಡಿನಲ್ಲಿ ಗುಡುಗು, ಮಿಂಚು, ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಆರೆಂಜ್ ಅಲರ್ಟ್ ಘೋಷಿಸಿದೆ. ಹೀಗಾಗಿ ಪಂದ್ಯಲ್ಲೆ ಮಳೆ ಭೀತಿ ತಪ್ಪಿದ್ದಲ್ಲ.
ಬಲಾಬಲ
ಉಭಯ ತಂಡಗಳು ಐಪಿಎಲ್ ಇತಿಹಾಸದಲ್ಲಿ ಇದುವರೆಗೆ 5 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಆರ್‌ಸಿಬಿ ಮೂರು ಗೆಲುವು ಸಾಧಿಸಿದರೆ, ಗುಜರಾತ್ ಎರಡು ಗೆಲುವು ಕಂಡಿದೆ.
ಇದನ್ನೂ ಓದಿ IPL 2025 Points Table: ಕೊನೆಯ ಸ್ಥಾನಕ್ಕೆ ಕುಸಿದ ಹಾಲಿ ಚಾಂಪಿಯನ್ ಕೆಕೆಆರ್
ಸಂಭಾವ್ಯ ತಂಡಗಳು
ಆರ್‌ಸಿಬಿ: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ತ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿ.ಕೀ), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಯಶ್ ದಯಾಲ್.
ಇಂಪ್ಯಾಕ್ಟ್ ಆಟಗಾರ: ಸುಯಶ್ ಶರ್ಮಾ
ಗುಜರಾತ್ ಟೈಟಾನ್ಸ್: ಸಾಯಿ ಸುದರ್ಶನ್, ಶುಭಮನ್ ಗಿಲ್ (ನಾಯಕ), ಜೋಸ್ ಬಟ್ಲರ್ (ವಿ.ಕೀ.), ಶಾರುಖ್ ಖಾನ್, ಶೆರ್ಫೇನ್ ರುದರ್‌ಫೋರ್ಡ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಆರ್. ಸಾಯಿ ಕಿಶೋರ್, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್, ಇಶಾಂತ್ ಶರ್ಮಾ
ಇಂಪ್ಯಾಕ್ಟ್ ಪ್ಲೇಯರ್: ಪ್ರಸಿದ್ಧ್ ಕೃಷ್ಣ