ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕಾಲ್ತುಳಿತ ಸಂಭವಿಸಿ ಮೂರು ತಿಂಗಳ ಬಳಿಕ ಭಾವುಕ ಪೋಸ್ಟ್‌ ಮಾಡಿದ ಆರ್‌ಸಿಬಿ

RCB break silence: ಕಾಲ್ತುಳಿತ ನಡೆದ ಕೆಲ ದಿನಗಳಲ್ಲೇ ಭಾರತ-ದಕ್ಷಿಣ ಆಫ್ರಿಕಾ ‘ಎ’ ತಂಡಗಳ ನಡುವಿನ 3 ಪಂದ್ಯಗಳ ಏಕದಿನ ಸರಣಿಯನ್ನು ಚಿನ್ನಸ್ವಾಮಿಯಿಂದ ರಾಜ್‌ಕೋಟ್‌ಗೆ ಸ್ಥಳಾಂತರಿಸಿ ಬಿಸಿಸಿಐ ಆದೇಶಿಸಿತ್ತು. ಮಹಿಳಾ ವಿಶ್ವಕಪ್‌ನ ಪಂದ್ಯಗಳೂ ಕೂಡ ಮುಂಬೈಗೆ ಶಿಫ್ಟ್‌ ಆಗಿದೆ. ಮುಂದಿನ ಆವೃತ್ತಿಯ ಐಪಿಎಲ್‌ ಪಂದ್ಯಗಳು ಚಿನ್ನಸ್ವಾಮಿಯಲ್ಲಿ ನಡೆಯುವ ಸಾಧ್ಯತೆ ಬಗ್ಗೆ ಅನುಮಾನಗಳು ವ್ಯಕ್ತವಾಗುತ್ತಿವೆ.

ಬೆಂಗಳೂರು: ಕಳೆದ ಜೂನ್‌ನಲ್ಲಿ ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಉಂಟಾದ ಅತಿ ಭೀಕರ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದರು. ಈ ಘಟನೆ ಬಳಿಕ ಕ್ರೀಡಾಂಗಣದ ಹಣೆಬರಹವೇ ಬದಲಾಗಿದೆ. ಇಲ್ಲೀಗ ಪಂದ್ಯಗಳು ನಡೆಯುತ್ತಿಲ್ಲ. ಮಹತ್ವದ ಸರಣಿ, ಟೂರ್ನಿಗಳು ಬೇರೆಡೆಗೆ ಸ್ಥಳಾಂತರಗೊಳ್ಳುತ್ತಿವೆ. ಇದೀಗ ಮೂರು ತಿಂಗಳ ಬಳಿಕ ಮೊದಲ ಬಾರಿಗೆ ಸಾಮಾಜಿಕ ಜಾಲತಾಣದಲ್ಲಿ ಆರ್‌ಸಿಬಿ ತನ್ನ ಅಭಿಮಾನಿಗಳ ಕುರಿತು ಭಾವನಾತ್ಮಕ ಪೋಸ್ಟ್‌ ಹಂಚಿಕೊಂಡಿದೆ. ನಾವು ಸದಾ ನಿಮ್ಮೊಂದಿಗಿದ್ದೇವೆʼ ಎಂದು ಬರೆದು ಫೋಸ್ಟ್‌ ಮಾಡಿದೆ.

ಕನ್ನಡ ಮತ್ತು ಇಂಗ್ಲೀಷ್‌ನಲ್ಲಿ ಪೋಸ್ಟ್‌ ಮಾಡಿರುವ ಆರ್‌ಸಿಬಿ ಫ್ರಾಂಚೈಸಿ, ಮಹತ್ವದ ಮಾಹಿತಿ ಹಂಚಿಕೊಂಡಿದೆ. ʼನಾವು ಪೋಸ್ಟ್ ಮಾಡಿ ಸುಮಾರು ಮೂರು ತಿಂಗಳಕಾಲ ಕಳೆದಿದೆ. ನಮ್ಮ ಮೌನ, ಖಾಲಿತನದಿಂದಷ್ಟೇ ಅಲ್ಲ, ದುಃಖದಿಂದ ತುಂಬಿದ ತೀವ್ರವಾದ ಮೌನ. ಈ ಮಾಧ್ಯಮದ ಮುಖಾಂತರ ನೀವೆಲ್ಲಾ ಸಂತೋಷದಿಂದ ಸಂಭ್ರಮಿಸುವ ವಿಷಯಗಳನ್ನು ಮತ್ತು ಕ್ಷಣಗಳನ್ನು ಹಂಚಿಕೊಳ್ಳುತ್ತಿದ್ದೆವು. ಆದರೆ ಜೂನ್ 4ರ ಘಟನೆ ಎಲ್ಲವನ್ನೂ ಬದಲಾಯಿಸಿತು. ಆ ದಿನ ನಮ್ಮ ಹೃದಯವನ್ನು ಮುರಿಯಿತು.

ನಂತರದ ಮೌನವು ಕೇವಲ ನಿಶ್ಯಬ್ದವಲ್ಲ, ಅದು ಶ್ರದ್ಧೆಯಿಂದ ತುಂಬಿದ ಶಾಂತ ಶ್ರದ್ಧಾಂಜಲಿ. ಈ ಮೌನದೊಳಗೆ ನೋವನ್ನು ಅನುಭವಿಸುತ್ತಾ ನಾವು ಆಳವಾಗಿ ಯೋಚಿಸಿದ್ದೆವು ಮತ್ತು ಅನೇಕ ವಿಷಯಗಳನ್ನು ಕಲಿತೆವು. ನೋವನ್ನೇ ಶ್ರದ್ಧೆಯಾಗಿ, ನಂಬಿಕೆಯಾಗಿ ರೂಪಿಸಬೇಕೆಂದು ತೀರ್ಮಾನಿಸಿದ್ದೆವು. ಅದರ ಫಲವೇ RCB ಕೇರ್ಸ್. ನಮ್ಮ ಅಭಿಮಾನಿಗಳು ಮತ್ತು ಸಮುದಾಯಕ್ಕಾಗಿ ನಿಷ್ಠೆಯಿಂದ ರೂಪಿಸಿದ ಒಂದು ಯೋಜನೆ. ಇಂದು ನಾವು ಮರಳಿದ್ದೇವೆ. ನಿಮ್ಮೊಂದಿಗೆ ನಿಲ್ಲುವ ಭರವಸೆಯನ್ನು ನೀಡುತ್ತ, ಕರ್ನಾಟಕದ ಹೆಮ್ಮೆಯಾಗಿ ಮುಂದೆ ಸಾಗುತ್ತೇವೆ. ಇದು ನಮ್ಮ ಕಾಳಜಿ, ನಮ್ಮ ಪ್ರತಿಜ್ಞೆ. 'ಆರ್‌ಸಿಬಿ ಕೇರ್ಸ್' ನಾವು ಸದಾ ನಿಮ್ಮೊಂದಿಗಿದ್ದೇವೆʼ ಎಂದು ಬರೆದು ಫೋಸ್ಟ್‌ ಮಾಡಿದೆ. "ಆರ್‌ಸಿಬಿ ಕೇರ್" (RCB Care) ಎಂಬ ನಿಧಿ ಅಭಿಮಾನಿಗಳಿಗೆ ಚಿಕಿತ್ಸೆ ನೀಡಲು ಸಹಾಯ ಮಾಡುತ್ತದೆ.



ಕಾಲ್ತುಳಿತ ನಡೆದ ಕೆಲ ದಿನಗಳಲ್ಲೇ ಭಾರತ-ದಕ್ಷಿಣ ಆಫ್ರಿಕಾ ‘ಎ’ ತಂಡಗಳ ನಡುವಿನ 3 ಪಂದ್ಯಗಳ ಏಕದಿನ ಸರಣಿಯನ್ನು ಚಿನ್ನಸ್ವಾಮಿಯಿಂದ ರಾಜ್‌ಕೋಟ್‌ಗೆ ಸ್ಥಳಾಂತರಿಸಿ ಬಿಸಿಸಿಐ ಆದೇಶಿಸಿತ್ತು. ಮಹಿಳಾ ವಿಶ್ವಕಪ್‌ನ ಪಂದ್ಯಗಳೂ ಕೂಡ ಮುಂಬೈಗೆ ಶಿಫ್ಟ್‌ ಆಗಿದೆ. ಮುಂದಿನ ಆವೃತ್ತಿಯ ಐಪಿಎಲ್‌ ಪಂದ್ಯಗಳು ಚಿನ್ನಸ್ವಾಮಿಯಲ್ಲಿ ನಡೆಯುವ ಸಾಧ್ಯತೆ ಬಗ್ಗೆ ಅನುಮಾನಗಳು ವ್ಯಕ್ತವಾಗುತ್ತಿವೆ.

ಇದನ್ನೂ ಓದಿ IPL Final 2025: ವೀಕ್ಷಣೆಯಲ್ಲಿ ದಾಖಲೆ ಬರೆದ ಆರ್‌ಸಿಬಿ-ಪಂಜಾಬ್‌ ಫೈನಲ್‌ ಪಂದ್ಯ