ಚೆನ್ನೈ ಪಂದ್ಯಕ್ಕೂ ಮುನ್ನ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ ಆರ್‌ಸಿಬಿ ನಾಯಕ
IPL 2026: ಸತತ ಎರಡು ಸೋಲು ಕಂಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯ. ಆದರೆ ಬಲಿಷ್ಠ ಆರ್‌ಸಿಬಿಯನ್ನು ಸೋಲಿಸುವುದು ಅಷ್ಟು ಸುಲಭ ಮಾತಲ್ಲ. ತಂಡ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗದಲ್ಲಿಯೂ ಸಮರ್ಥವಾಗಿದೆ.
Rajat Patidar -
ಬೆಂಗಳೂರು, ಎ.4: ಐಪಿಎಲ್(IPL 2026) ಉದ್ಘಾಟನ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಹಾಲಿ ಚಾಂಪಿಯನ್ ಆರ್‌ಸಿಬಿ(RCB vs CSK) ತಂಡ ದ್ವಿತೀಯ ಪಂದ್ಯವನ್ನಾಡಲು ಸಜ್ಜಾಗಿದೆ. ಭಾನುವಾರ(ಎ.5) ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬದ್ಧ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೆಣಸಾಟ ನಡೆಸಲಿದೆ. ಈ ಪಂದ್ಯಕ್ಕೂ ಮುನ್ನ ಆರ್‌ಸಿಬಿ ನಾಯ ರಜತ್ ಪಾಟೀದಾರ್ ಮತ್ತು ಜಿತೇಶ್ ಶರ್ಮ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಉಭಯ ಆಟಗಾರರು ತಿರುಪತಿ ತಿರುಮಲ ದೇವಸ್ಥಾನ(Tirumala Tirupati Temple)ಕ್ಕೆ ಭೇಟಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸತತ ಎರಡು ಸೋಲು ಕಂಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯ. ಆದರೆ ಬಲಿಷ್ಠ ಆರ್‌ಸಿಬಿಯನ್ನು ಸೋಲಿಸುವುದು ಅಷ್ಟು ಸುಲಭ ಮಾತಲ್ಲ. ತಂಡ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗದಲ್ಲಿಯೂ ಸಮರ್ಥವಾಗಿದೆ.
#WATCH | Tirupati, Andhra Pradesh: Indian cricketers Rajat Patidar and Jitesh Sharma offered prayers to Lord Venkateswara at Tirumala Tirupati Devasthanam in Tirupati district. pic.twitter.com/SU5ip1d68j
— ANI (@ANI) April 4, 2026
ಪಂದ್ಯದ ದಿನ ಬೆಂಗಳೂರು ಮೆಟ್ರೋ ಮತ್ತು ಬಿಎಂಟಿಸಿ ವಿಶೇಷ ಬಸ್ ಸೇವೆಗಳನ್ನು ಕಲ್ಪಿಸಿದೆ. ಪ್ರಯಾಣಿಕರಿಗೆ ಸುಲಭ ಮತ್ತು ಸುರಕ್ಷಿತ ಪ್ರಯಾಣಕ್ಕೆ ಮೆಟ್ರೋ ಸೇವೆಯನ್ನು ರಾತ್ರಿ 11 ಗಂಟೆಯಿಂದ ಮುಂದಿನ ದಿನ ಮಧ್ಯರಾತ್ರಿ 2 ಗಂಟೆವರೆಗೆ ವಿಸ್ತರಿಸಿದೆ.
ವೈಟ್‌ಫೀಲ್ಡ್(ಕಾಡುಗೋಡಿ)ಯಿಂದ ರಾತ್ರಿ 12.30ಕ್ಕೆ ಮತ್ತು ಚಲ್ಲಘಟ್ಟದಿಂದ ರಾತ್ರಿ 12.45ಕ್ಕೆ. ರೇಷ್ಮೆ ಸಂಸ್ಥೆ ಹಾಗೂ ಮಾದಾವರದಿಂದ 12.45ಕ್ಕೆ. ಬೊಮ್ಮಸಂದ್ರ ದಿಂದ ರಾತ್ರಿ 1ಕ್ಕೆ ಹಾಗೂ ಆರ್.ವಿ. ರಸ್ತೆಯಿಂದ ರಾತ್ರಿ 2ಕ್ಕೆ. ಕೆಂಪೇಗೌಡ ನಿಲ್ದಾಣ-ಮೆಜೆಸ್ಟಿಕ್‌ನಿಂದ ನಾಲ್ಕು ದಿಕ್ಕುಗಳಿಗೆ 1.30ಕ್ಕೆ ಕೊನೆಯ ರೈಲು ಹೊರಡಲಿದೆ.
ಆ ಒಂದು ತಪ್ಪಿಗೆ ಪಂಜಾಬ್ ಕಿಂಗ್ಸ್ ತಂಡಕ್ಕೆ ಭಾರೀ ದಂಡ ವಿಧಿಸಿದ ಬಿಸಿಸಿಐ
ಎಚ್‌ಎಎಲ್ ರಸ್ತೆ ಮೂಲಕ ಕಾಡುಗೋಡಿ ಬಸ್ ನಿಲ್ದಾಣಕ್ಕೆ, ಹೊಸೂರು ರಸ್ತೆ ಮೂಲಕ ಎಲೆಕ್ಟ್ರಾನಿಕ್ ಸಿಟಿಗೆ, ನಾಗವಾರ–ಟ್ಯಾನರಿ ರಸ್ತೆ ಮೂಲಕ ಆರ್.ಕೆ. ಹೆಗಡೆ ನಗರಕ್ಕೆ, ಮಾಗಡಿ ರಸ್ತೆ ಮೂಲಕ ಜನಪ್ರಿಯ ಟೌನ್‌ಶಿಪ್‌ಗೆ ಸಂಚರಿಸಲಿವೆ. ಸರ್ಜಾಪುರ, ಬನ್ನೇರುಘಟ್ಟ ಮೃಗಾಲಯ, ಹೊಸಕೋಟೆ, ಬನಶಂಕರಿ ನಿಲ್ದಾಣಗಳಿಗೆ ಬಸ್ ಇರಲಿದೆ.