ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಫ್ರಾಂಚೈಸಿ ಮಾರಾಟ ಮಾಡಲು ಮುಂದಾದ ಆರ್‌ಸಿಬಿ ಮಾಲೀಕರು

2008 ರಲ್ಲಿ ಕಿಂಗ್‌ಫಿಷರ್ ಏರ್‌ಲೈನ್ಸ್‌ನ ಮಾಲೀಕರಾಗಿದ್ದ ವಿಜಯ್ ಮಲ್ಯ ಅವರು ಆರ್‌ಸಿಬಿ ಫ್ರಾಂಚೈಸಿಯನ್ನು ಸ್ಥಾಪಿಸಿದ್ದರು. ಆದರೆ ಮಲ್ಯ ಸಾಲದ ಸುಳಿಯಲ್ಲಿ ಸಿಲುಕಿಕೊಂಡ ಬಳಿಕ ಅವರು ಫ್ರಾಂಚೈಸಿಯನ್ನು ಡಯಾಜಿಯೊಗೆ ಭಾರತದಲ್ಲಿನ ತನ್ನ ಅಂಗಸಂಸ್ಥೆಯಾದ ಯುನೈಟೆಡ್ ಸ್ಪಿರಿಟ್ಸ್‌ಗೆ ಮಾರಾಟ ಮಾಡಿದ್ದರು.

ಬೆಂಗಳೂರು: ಐಪಿಎಲ್‌ ಟೂರ್ನಿಯಲ್ಲಿ ಆರ್‌ಸಿಬಿ 18 ವರ್ಷಗಳ ಬಳಿಕ ಚೊಚ್ಚಲ ಟ್ರೋಫಿ ಗೆದ್ದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿಯಲ್ಲಿ ನಡೆದ ಕಾಲ್ತುಳಿತ(Bengaluru stampede) ಪ್ರಕರಣಕ್ಕೆ ಸಂಬಂಧಿಸಿ ಮುಂದಿನ ವರ್ಷದ ಐಪಿಎಲ್‌ನಿಂದ ಆರ್‌ಸಿಬಿ ಫ್ರಾಂಚೈಸಿ ನಿಷೇಧಕ್ಕೊಳಗಾಗಲಿದೆ(RCB Ban in IPL 2026) ಎಂಬ ಚರ್ಚೆಗಳ ಮಧ್ಯೆ ಮಾಲೀಕರು ಫ್ರಾಂಚೈಸಿಯನ್ನೇ(RCB Sell Franchise) ಮಾರಾಟ ಮಾಡಲು ಮುಂದಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

11 ಮಂದಿ ಸಾವಿಗೀಡಾಗಿರುವ ಹಿನ್ನೆಲೆಯಲ್ಲಿ ಆರ್‌ಸಿಬಿ, ಮನರಂಜನಾ ಸಂಸ್ಥೆ ಡಿಎನ್‌ಎ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) ವಿರುದ್ಧ ಈಗಾಗಲೇ ದೂರು ದಾಖಲಾಗಿದೆ. ಇದರ ಬೆನ್ನಲ್ಲೇ ಆರ್‌ಸಿಬಿ ಫ್ರಾಂಚೈಸಿಯನ್ನು ನಡೆಸುತ್ತಿರುವ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಈಗಾಗಲೇ ಸಂಭಾವ್ಯ ಹೂಡಿಕೆದಾರರೊಂದಿಗೆ ಮಾತುಕತೆ ನಡೆಸುತ್ತಿದೆ ಎನ್ನಲಾಗಿದೆ. ಫ್ರಾಂಚೈಸಿಯ ಮೌಲ್ಯಮಾಪನದ ಕುರಿತು ಯಾವುದೇ ಅಧಿಕೃತ ಮಾಹಿತಿ ಇನ್ನೂ ಬಂದಿಲ್ಲವಾದರೂ, ಸಂಪೂರ್ಣ ಮಾರಾಟಕ್ಕಾಗಿ ಮಾಲೀಕರು 2 ಬಿಲಿಯನ್ ಯುಎಸ್ ಡಾಲರ್ (ಸುಮಾರು16,834 ಕೋಟಿ) ವರೆಗಿನ ಬೆಲೆಗೆ ಬೇಡಿಕೆ ಇಡಬಹುದು ಎಂದು ಬ್ಲೂಮ್‌ಬರ್ಗ್ ವರದಿ ಮಾಡಿದೆ.

ಬ್ರಿಟಿಷ್ ಡಿಸ್ಟಿಲರಿ ಕಂಪನಿ ಮತ್ತು ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್‌ನ ಪೋಷಕ ಕಂಪನಿಯಾದ ಡಿಯಾಜಿಯೊ ಪಿಎಲ್‌ಸಿ, ರಾಯಲ್ ಚಾಲೆಂಜರ್ಸ್ ಬೆಂಗಳೂರಿನಲ್ಲಿ ಭಾಗಶಃ ಅಥವಾ ಪೂರ್ಣ ಪಾಲನ್ನು ಮಾರಾಟ ಮಾಡುವ ಆಯ್ಕೆಗಳನ್ನು ಮೌಲ್ಯಮಾಪನ ಮಾಡುತ್ತಿದೆ ಎನ್ನಲಾಗಿದೆ. ಕಾಲ್ತುಳಿತ ಪ್ರಕರಣದ ಬಳಿಕ ಯುನೈಟೆಡ್ ಸ್ಪಿರಿಟ್ಸ್ ಮತ್ತು ಡಿಯಾಜಿಯೊ ಪಿಎಲ್‌ಸಿ ಕಂಪೆನಿಗೆ ಅಂತಾರಾಷ್ಟ್ರೀಯ ವ್ಯವಹಾರದಲ್ಲಿ ಭಾರೀ ಹಿನ್ನಡೆಯಾಗುತ್ತಿದೆ ಎನ್ನಲಾಗಿದೆ. ಹೀಗಾಗಿ ಫ್ರಾಂಚೈಸಿಯನ್ನೇ ಮಾರಾಟ ನಡೆಸಲು ಮುಂದಾಗಿದೆ ಎಂದು ಫ್ರಾಂಚೈಸಿ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ RCB Team Banned: ಬ್ಯಾನ್‌ ಆಗಲಿದೆಯಾ ಆರ್‌ಸಿಬಿ ತಂಡ?

2008 ರಲ್ಲಿ ಕಿಂಗ್‌ಫಿಷರ್ ಏರ್‌ಲೈನ್ಸ್‌ನ ಮಾಲೀಕರಾಗಿದ್ದ ವಿಜಯ್ ಮಲ್ಯ ಅವರು ಆರ್‌ಸಿಬಿ ಫ್ರಾಂಚೈಸಿಯನ್ನು ಸ್ಥಾಪಿಸಿದ್ದರು. ಆದರೆ ಮಲ್ಯ ಸಾಲದ ಸುಳಿಯಲ್ಲಿ ಸಿಲುಕಿಕೊಂಡ ಬಳಿಕ ಅವರು ಫ್ರಾಂಚೈಸಿಯನ್ನು ಡಯಾಜಿಯೊಗೆ ಭಾರತದಲ್ಲಿನ ತನ್ನ ಅಂಗಸಂಸ್ಥೆಯಾದ ಯುನೈಟೆಡ್ ಸ್ಪಿರಿಟ್ಸ್‌ಗೆ ಮಾರಾಟ ಮಾಡಿದ್ದರು.