ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Yash Dayal: ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಮಹಿಳೆ ವಿರುದ್ಧ ದೂರು ನೀಡಿದ ಯಶ್ ದಯಾಳ್

RCB Star Yash Dayal: ಮೂರು ಪುಟಗಳ ದೂರಿನಲ್ಲಿ, ಯಶ್ ದಯಾಳ್ ಅವರು ಮಹಿಳೆ ಮತ್ತು ಅವರ ಕುಟುಂಬದ ಇಬ್ಬರು ಸದಸ್ಯರು ಮತ್ತು ಇತರ ಹಲವರ ವಿರುದ್ಧ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದ್ದಾರೆ. ಮಹಿಳೆ ತನ್ನ ದೂರಿನಲ್ಲಿ ಯಶ್ ಕಳೆದ ಐದು ವರ್ಷಗಳಿಂದ ತನ್ನೊಂದಿಗೆ ಸಂಬಂಧ ಹೊಂದಿದ್ದು, ಲೈಂಗಿಕ ಶೋಷಣೆಗೆ ಗುರಿಯಾಗಿದ್ದೇನೆ ಎಂದು ಆರೋಪಿಸಿದ್ದರು.

ಮಹಿಳೆ ವಿರುದ್ಧ ವಂಚನೆ ಆರೋಪ ಮಾಡಿದ ಯಶ್‌ ದಯಾಳ್

Profile Abhilash BC Jul 9, 2025 1:15 PM

ಗಾಜಿಯಾಬಾದ್‌: ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಅಡಿಯಲ್ಲಿ ಗಾಜಿಯಾಬಾದ್‌ನ ಇಂದಿರಾಪುರಂ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಸೆಕ್ಷನ್ 69ರ ಅಡಿಯಲ್ಲಿ ಎಫ್‌ಐಆರ್(FIR against Yash Dayal) ದಾಖಲಾಗಿದ ಬಳಿಕ ಆರ್‌ಸಿಬಿ ತಂಡದ ಆಟಗಾರ ಯಶ್ ದಯಾಳ್(Yash Dayal) ಈ ವಿಷಯದ ಬಗ್ಗೆ ಮೊದಲ ಬಾರಿಗೆ ಮೌನ ಮುರಿದಿದ್ದಾರೆ. ಅಲ್ಲದೆ ಮಹಿಳೆಯ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಪ್ರಯಾಗ್‌ರಾಜ್ ಪೊಲೀಸರಿಗೆ ದೂರು ನೀಡಿದ್ದಾರೆ.

27 ವರ್ಷದ ಯಶ್ ದಯಾಳ್ ತನ್ನ ವಿರುದ್ಧ ಆರೋಪ ಮಾಡಿರುವ ಮಹಿಳೆಯ ವಿರುದ್ಧ ಪ್ರಕರಣ ದಾಖಲಿಸುವಂತೆ ಖುಲ್ದಾಬಾದ್ ಪೊಲೀಸ್ ಠಾಣೆಗೆ ಮನವಿ ಮಾಡಿದ್ದಾರೆ. ದೂರಿನಲ್ಲಿ, ಮಹಿಳೆ ಐಫೋನ್ ಮತ್ತು ಲ್ಯಾಪ್‌ಟಾಪ್ ಕದ್ದಿದ್ದಾರೆ ಎಂದು ದಯಾಳ್ ಆರೋಪಿಸಿದ್ದಾರೆ.

2021 ರಲ್ಲಿ ಇನ್‌ಸ್ಟಾಗ್ರಾಮ್ ಮೂಲಕ ಆ ಮಹಿಳೆಯ ಪರಿಚಯವಾಯಿತು ನಂತರ ಅವರು ಪರಸ್ಪರ ಸಂವಹನ ನಡೆಸಲು ಪ್ರಾರಂಭಿಸಿದರು. ಇದಾಗಿ ಶಾಪಿಂಗ್‌ಗಾಗಿ ಅವಳು ಪದೇ ಪದೇ ತನ್ನಿಂದ ಹಣವನ್ನು ಸಾಲವಾಗಿ ಪಡೆದಿದ್ದಳು. ಇದಕ್ಕೆ ತನ್ನ ಬಳಿ ಪುರಾವೆಗಳಿವೆ ಎಂದು ದಯಾಳ್ ಆರೋಪಿಸಿದ್ದಾರೆ. ಈ ಮಹಿಳೆ ತನ್ನ ವಿರುದ್ಧ ಗಾಜಿಯಾಬಾದ್ ಪೊಲೀಸರಿಗೆ ದೂರು ನೀಡಿದ್ದಾಳೆಂದು ತಿಳಿದಾಗ, ಆಕೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ನಿರ್ಧರಿಸಿದ್ದಾಗಿ ದಯಾಳ್ ಹೇಳಿದ್ದಾರೆ.

ಇದನ್ನೂ ಓದಿ Yash Dayal: ಲೈಂಗಿಕ ದೌರ್ಜನ್ಯ ಆರೋಪ; ಯಶ್ ದಯಾಳ್ ವಿರುದ್ಧ ಎಫ್ಐಆರ್‌!

ಮೂರು ಪುಟಗಳ ದೂರಿನಲ್ಲಿ, ಯಶ್ ದಯಾಳ್ ಅವರು ಮಹಿಳೆ ಮತ್ತು ಅವರ ಕುಟುಂಬದ ಇಬ್ಬರು ಸದಸ್ಯರು ಮತ್ತು ಇತರ ಹಲವರ ವಿರುದ್ಧ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದ್ದಾರೆ. ಮಹಿಳೆ ತನ್ನ ದೂರಿನಲ್ಲಿ ಯಶ್ ಕಳೆದ ಐದು ವರ್ಷಗಳಿಂದ ತನ್ನೊಂದಿಗೆ ಸಂಬಂಧ ಹೊಂದಿದ್ದು, ಲೈಂಗಿಕ ಶೋಷಣೆಗೆ ಗುರಿಯಾಗಿದ್ದೇನೆ ಎಂದು ಆರೋಪಿಸಿದ್ದರು.