ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

RCB Team Banned: ಬ್ಯಾನ್‌ ಆಗಲಿದೆಯಾ ಆರ್‌ಸಿಬಿ ತಂಡ?

ಪೊಲೀಸರಿಗೆ ಸರಿಯಾದ ಮಾಹಿತಿ ನೀಡದೆ ಉಚಿತ ಪಾಸ್‌ ನೀಡುವುದಾಗಿ ಹೇಳಿ ಲಕ್ಷಾಂತರ ಅಭಿಮಾನಿಗಳು ಸೇರುವಂತೆ ಮಾಡಿ ಗೊಂದಲ ಸೃಷ್ಟಿಸಿ, ಕಾಲ್ತುಳಿತದಲ್ಲಿ 11 ಮಂದಿ ಮೃತರಾಗಲು ಆರ್‌ಸಿಬಿ ಫ್ರಾಂಚೈಸಿ ಕಾರಣ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಸಂಬಂಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ.

ಬ್ಯಾನ್‌ ಆಗಲಿದೆಯಾ ಆರ್‌ಸಿಬಿ ತಂಡ?

Profile Abhilash BC Jun 6, 2025 9:56 AM

ಬೆಂಗಳೂರು: 18ನೇ ಆವೃತ್ತಿ ಐಪಿಎಲ್‌ ಟ್ರೋಫಿ ಗೆದ್ದ ಬಳಿಕ ಆರ್‌ಸಿಬಿ ಆಟಗಾರರು ಬುಧವಾರ ನಡೆಸಿದ ಸಂಭ್ರಮಾಚರಣೆ(RCB victory parade stamped) ವೇಳೆ ಉಂಟಾದ ಕಾಲ್ತುಳಿತ 11 ಜನರನ್ನು ಬಲಿ ತೆಗೆದುಕೊಂಡಿದೆ. ಈ ಘಟನೆಗೆ ಆರ್‌ಸಿಬಿ(RCB) ಫ್ರಾಂಚೈಸಿ, ರಾಜ್ಯ ಕ್ರಿಕೆಟ್‌ ಸಂಸ್ಥೆ ನೇರ ಹೊಣೆ ಎಂಬ ಆರೋಪಗಳು ಕೇಳಿಬರುತ್ತಿವೆ. ಈಗಾಗಲೇ ಲೋಪದ ಕುರಿತ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ಆರ್‌ಸಿಬಿ ಮ್ಯಾನೇಜ್ಮೆಂಟ್(rcb management) ಸಿಬ್ಬಂದಿ ನಿಖಲ್ ಸೋಸಲೆ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇದರ ಬೆನ್ನಲ್ಲೇ ಆರ್‌ಸಿಬಿ ತಂಡವನ್ನು ಐಪಿಎಲ್‌ನಿಂದ ಬ್ಯಾನ್‌(RCB Team Banned) ಮಾಡುವಂತೆ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನವೊಂದು ಆರಂಭವಾಗಿದೆ. ಜತೆಗೆ ತಂಡವನ್ನು ಬ್ಯಾನ್‌ ಮಾಡುವಂತೆ ಬಿಸಿಸಿಐಗೆ ಆಗ್ರಹಿಸಿದ್ದಾರೆ.

ಜೂ.4ರ ಬೆಳಗ್ಗೆಯಿಂದಲೇ ಆರ್‌ಸಿಬಿ ಫ್ರಾಂಚೈಸಿಯವರು ಯಾವುದೇ ಅನುಮತಿ ಪಡೆಯದೆ ಅಧಿಕೃತ ಟ್ವಿಟರ್‌ ಖಾತೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ನಗರದಲ್ಲಿ ಆರ್‌ಸಿಬಿ ವಿಜಯೋತ್ಸವ ಹಾಗೂ ವಿಕ್ಟರಿ ಪರೇಡ್‌ ನಡೆಸುವ ಬಗ್ಗೆ ಏಕಪಕ್ಷೀಯವಾಗಿ ಟ್ವಿಟ್‌ ಮಾಡಿ ಮಾಹಿತಿ ನೀಡಿದ್ದರು. ಜತೆಗೆ ಸಾರ್ವಜನಿಕರು ಹಾಗೂ ಅಭಿಮಾನಿಗಳು ಭಾಗವಹಿಸುವಂತೆ ಆಹ್ವಾನಿಸಿದ್ದರು.

ಪೊಲೀಸರಿಗೆ ಸರಿಯಾದ ಮಾಹಿತಿ ನೀಡದೆ ಉಚಿತ ಪಾಸ್‌ ನೀಡುವುದಾಗಿ ಹೇಳಿ ಲಕ್ಷಾಂತರ ಅಭಿಮಾನಿಗಳು ಸೇರುವಂತೆ ಮಾಡಿ ಗೊಂದಲ ಸೃಷ್ಟಿಸಿ, ಕಾಲ್ತುಳಿತದಲ್ಲಿ 11 ಮಂದಿ ಮೃತರಾಗಲು ಆರ್‌ಸಿಬಿ ಫ್ರಾಂಚೈಸಿ ಕಾರಣ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಸಂಬಂಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ.

ಬಿಸಿಸಿಐಗೂ ಯಾವುದೇ ಮಾಹಿತಿ ನೀಡದೆ ಸಂಭ್ರಮಾಚರಣೆ ಮಾಡಿ 11 ಜನರ ಸಾವಿಗೆ ಕಾರಣವಾದ ಫ್ರಾಂಚೈಸಿ ವಿರುದ್ಧ ಐಪಿಎಲ್‌ ಅಧ್ಯಕ್ಷ ಅರುಣ್‌ ಧುಮಾಲ್‌ ಸೇರಿ ಬಿಸಿಸಿಐ ಕೂಡ ಗರಂ ಆಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಈ ಸಾವಿಗೆ ಫ್ರಾಂಚೈಸಿಯೇ ಕಾರಣ ಎಂದಿದೆ. ಒಂದೊಮ್ಮೆ ತಂಡವನ್ನು ಕೆಲ ವರ್ಷಗಳ ಕಾಲ ಬ್ಯಾನ್‌ ಮಾಡಿದರೂ ಅಚ್ಚರಿಯಿಲ್ಲ.

ಇದನ್ನೂ ಓದಿ Bengaluru Stampede: ಬೆಂಗಳೂರು ಕಾಲ್ತುಳಿತ ದುರಂತ; RCB ಮ್ಯಾನೇಜ್ಮೆಂಟ್‌ನ ಇಬ್ಬರ ಬಂಧನ

ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಿಸಿದ ಆರ್‌ಸಿಬಿ

ಮೃತಪಟ್ಟವರ ಕುಟುಂಬಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದು ಗಾಯಗೊಂಡವರಿಗೆ ಸಹಾಯ ನಿಧಿಯನ್ನು ಸ್ಥಾಪಿಸುವುದಾಗಿ ತಿಳಿಸಿದೆ.

"ಬೆಂಗಳೂರಿನಲ್ಲಿ ನಡೆದ ದುರದೃಷ್ಟಕರ ಘಟನೆ ಆರ್‌ಸಿಬಿ ಕುಟುಂಬಕ್ಕೆ ತೀವ್ರ ನೋವನ್ನುಂಟು ಮಾಡಿದೆ. ಗೌರವ ಮತ್ತು ಒಗ್ಗಟ್ಟಿನ ಸಂಕೇತವಾಗಿ, ಮೃತರ ಹನ್ನೊಂದು ಕುಟುಂಬಗಳಿಗೆ ತಲಾ 10 ಲಕ್ಷ ರೂ.ಗಳ ಆರ್ಥಿಕ ಸಹಾಯವನ್ನು ಆರ್‌ಸಿಬಿ ಘೋಷಿಸಿದೆ. ಇದಲ್ಲದೆ, ಈ ದುರಂತ ಘಟನೆಯಲ್ಲಿ ಗಾಯಗೊಂಡ ಅಭಿಮಾನಿಗಳನ್ನು ಬೆಂಬಲಿಸಲು 'ಆರ್‌ಸಿಬಿ ಕೇರ್ಸ್' ಎಂಬ ನಿಧಿಯನ್ನು ಸಹ ರಚಿಸಲಾಗುತ್ತಿದೆ. ನಮ್ಮ ಅಭಿಮಾನಿಗಳು ನಾವು ಮಾಡುವ ಎಲ್ಲದರಲ್ಲೂ ಯಾವಾಗಲೂ ಹೃದಯಭಾಗದಲ್ಲಿ ಇರುತ್ತಾರೆ. ನಾವು ದುಃಖದಲ್ಲಿ ಒಗ್ಗಟ್ಟಿನಿಂದ ಇರುತ್ತೇವೆ" ಎಂದು ಆರ್‌ಸಿಬಿ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.