RCB vs DC: ಆರ್‌ಸಿಬಿ-ಡೆಲ್ಲಿ ಪಂದ್ಯದ ಪಿಚ್ ರಿಪೋರ್ಟ್, ಸಂಭಾವ್ಯ ತಂಡ ಹೀಗಿದೆ
IPL 2025: ಆರ್‌ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಇದುವರೆಗಿನ ಐಪಿಎಲ್‌ನಲ್ಲಿ ಒಟ್ಟು 31 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ಆರ್‌ಸಿಬಿ 19 ಪಂದ್ಯ ಗೆದ್ದರೆ, ಡೆಲ್ಲಿ 11 ಪಂದ್ಯ ಜಯಸಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ. ಕಳೆದ ಎರಡು ಮುಖಾಮುಖಿಯಲ್ಲಿಯೂ ಆರ್‌ಸಿಬಿ ಗೆಲುವು ಕಂಡಿತ್ತು.


ಬೆಂಗಳೂರು: ತವರಿನಾಚೆ ಆಡಿದ ಮೂರು ಪಂದ್ಯಗಳಲ್ಲಿ ಅಮೋಘ ಗೆಲುವುಗಳನ್ನು ಸಾಧಿಸಿ, ತವರಿನಲ್ಲಿ ಸೋಲು ಕಂಡಿರುವ ಆರ್‌ಸಿಬಿ(RCB vs DC) ಇದೀಗ ಮತ್ತೊಂದು ತವರಿನ ಪಂದ್ಯವನ್ನಾಡಲು ಸಜ್ಜಾಗಿದೆ. ಗುರುವಾರ ನಡೆಯುವ ಪಂದ್ಯದಲ್ಲಿ(IPL 2025) ಅಜೇಯ ಡೆಲ್ಲಿ ತಂಡದ ಸವಾಲು ಎದುರಿಸಲಿದೆ. ಈ ಪಂದ್ಯದ ಪಿಚ್ ರಿಪೋರ್ಟ್, ಹವಾಮಾನ ವರದಿ)Weather And Pitch Report Of M. Chinnaswamy Stadium) ಮತ್ತು ಸಂಭಾವ್ಯ ತಂಡಗಳ ಮಾಹಿತಿ ಹೀಗಿದೆ.
ಪಿಚ್ ರಿಪೋರ್ಟ್
ಐಪಿಎಲ್‌ನಲ್ಲಿ ದೊಡ್ಡ ಪ್ರಮಾಣದ ರನ್ಮಳೆಯನ್ನೇ ಕಂಡಿರುವ ಚಿನ್ನಸ್ವಾಮಿ ಸ್ಟೇಡಿಯಂನ ಪಿಚ್ ಬ್ಯಾಟಿಂಗ್ ಸ್ನೇಹಿಯಾಗಿದೆ. ಹೀಗಾಗಿ ಬೌಲರ್ಗಳಿಗೆ ನಿಜವಾದ ಸತ್ವಪರೀಕ್ಷೆ ಎದುರಾಗಲಿದೆ. ಕಿರು ಬೌಂಡರಿ ಮತ್ತು ವೇಗವಾದ ಔಟ್ಫೀಲ್ಡ್ ಹೊಂದಿರುವ ಸ್ಟೇಡಿಯಂನಲ್ಲಿ ಬೌಲರ್‌ಗಳು ಯಶಸ್ಸು ಸಾಧಿಸಬೇಕಾದರೆ ಶಕ್ತಿಗಿಂತ ಯುಕ್ತಿ ಪ್ರದರ್ಶನ ತೋರಬೇಕಿದೆ.
ಹವಾಮಾನ ವರದಿ
ಪಂದ್ಯಕ್ಕೆ ಯಾವುದೇ ಮಳೆ ಅಡ್ಡಿಪಡಿಸುವ ಸಾಧ್ಯತೆಯಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ಪಂದ್ಯದ ವೇಳೆ ತಾಪಮಾನವು ಗರಿಷ್ಠ 34 ಡಿಗ್ರಿ ಮತ್ತು ಕನಿಷ್ಠ 22 ಡಿಗ್ರಿ ಇರಬಹುದೆಂದು ಊಹಿಸಲಾಗಿದೆ. ಒಂದೊಮ್ಮೆ ಪಂದ್ಯ ನಡೆಯುವ ಸಮಯದಲ್ಲಿ ಎಷ್ಟೇ ಜೋರಾಗಿ ಮಳೆ ಬಂದರೂ 15 ರಿಂದ 20 ನಿಮಿಷದೊಳಗೆ ಮತ್ತೆ ಪಂದ್ಯ ಮುಂದುವರಿಯಲು ಅವಕಾಶ ಮಾಡಿಕೊಡುವ ಸಬ್ ಏರ್ ಸಿಸ್ಟಂ ತಂತ್ರಜ್ಞಾನ ಸೌಲಭ್ಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿದೆ. ಆದ್ದರಿಂದ ಮಳೆಯಿಂದಾಗಿ ಪಂದ್ಯ ರದ್ದಾಗುವುದು ತೀರಾ ವಿರಳ.
ಇದನ್ನೂ ಓದಿ IPL 2025: ತಮ್ಮ ಬ್ಯಾಟಿಂಗ್ ಯಶಸ್ಸಿನ ಶ್ರೇಯ ಬ್ರಿಯಾನ್ ಲಾರಾಗೆ ಸಲ್ಲಬೇಕೆಂದ ಶಶಾಂಕ್ ಸಿಂಗ್!
ಮುಖಾಮುಖಿ
ಆರ್‌ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಇದುವರೆಗಿನ ಐಪಿಎಲ್‌ನಲ್ಲಿ ಒಟ್ಟು 31 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ಆರ್‌ಸಿಬಿ 19 ಪಂದ್ಯ ಗೆದ್ದರೆ, ಡೆಲ್ಲಿ 11 ಪಂದ್ಯ ಜಯಸಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ. ಕಳೆದ ಎರಡು ಮುಖಾಮುಖಿಯಲ್ಲಿಯೂ ಆರ್‌ಸಿಬಿ ಗೆಲುವು ಕಂಡಿತ್ತು.
ಸಂಭಾವ್ಯ ತಂಡಗಳು
ಆರ್‌ಸಿಬಿ: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿ.ಕೀ.), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಯಶ್ ದಯಾಲ್, ಜೋಶ್ ಹ್ಯಾಜಲ್‌ವುಡ್.
ಇಂಪ್ಯಾಕ್ಟ್ ಪ್ಲೇಯರ್: ಸುಯಶ್ ಶರ್ಮ
ಡೆಲ್ಲಿ ಕ್ಯಾಪಿಟಲ್ಸ್: ಫಾಫ್ ಡು ಪ್ಲೆಸಿಸ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಅಭಿಷೇಕ್ ಪೊರೆಲ್, ಕೆ.ಎಲ್ ರಾಹುಲ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಅಶುತೋಷ್ ಶರ್ಮಾ, ವಿಪ್ರಜ್ ನಿಗಮ್, ಮಿಚೆಲ್ ಸ್ಟಾರ್ಕ್, ಕುಲ್ದೀಪ್ ಯಾದವ್, ಮುಖೇಶ್ ಕುಮಾರ್.
ಇಂಪ್ಯಾಕ್ಟ್ ಪ್ಲೇಯರ್: ಮೋಹಿತ್ ಶರ್ಮಾ