ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

RCB vs DC: ವಾಹನ ಸವಾರರೇ ಗಮನಿಸಿ, ಇಂದು ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ

bengaluru traffic advisory: ಕ್ರಿಕೆಟ್‌ ಪಂದ್ಯ ನೋಡಲು ಬರುವ ಕ್ರಿಕೆಟ್‌ ಪ್ರೇಮಿಗಳಿಗಾಗಿಮೆಟ್ರೋ ಮತ್ತು ಬಿಎಂಟಿಸಿ ವಿಶೇಷ ಬಸ್ ಸೇವೆಗಳನ್ನು ಕಲ್ಪಿಸಿದೆ. ಹೀಗಾಗಿ ಕ್ರಿಕೆಟ್‌ ನೋಡಲು ಬರುವವರು, ಕ್ರೀಡಾಂಗಣ ತಲುಪುವ ವಿಚಾರದಲ್ಲಿ ಯಾವುದೇ ಚಿಂತೆ ಮಾಡಬೇಕಾಗಿಲ್ಲ.

bengaluru traffic advisory

ಬೆಂಗಳೂರು, ಎ.18: ಕನ್ನಡಿಗರ ನೆಚ್ಚಿನ ತಂಡವಾದ, ಹಾಲಿ ಚಾಂಪಿಯನ್‌ ಆರ್​ಸಿಬಿ(Royal Challengers Bengaluru) ಇಂದು (ಎ. 18) ತವರು ಮೈದಾನ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (chinnaswamy stadium) ಡೆಲ್ಲಿ ಕ್ಯಾಪಿಟಲ್ಸ್‌(RCB vs DC)​ ವಿರುದ್ಧ ಕಣಕ್ಕಿಳಿಯಲಿದೆ. ಕ್ರಿಕೆಟ್ ಪಂದ್ಯಾವಳಿಯ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ(bengaluru traffic advisory) ಬೆಂಗಳೂರು ಟ್ರಾಫಿಕ್ ಪೊಲೀಸರು ಸೂಕ್ತ ಸಂಚಾರ ವ್ಯವಸ್ಥೆಯನ್ನು ಮಾಡಿಲಾಗಿದ್ದು ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಪೂರ್ಣವಾಗಿ ಪಾರ್ಕಿಂಗ್ ನಿಷೇಧ ಮಾಡಲಾಗಿದೆ. ಶನಿವಾರ ಬೆಳಗ್ಗೆಯಿಂದಲೇ ರಾತ್ರಿ ರವರೆಗೆ ಈ ವ್ಯತ್ಯಾಸಗಳು ಜಾರಿಯಲ್ಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ.

ಕ್ರಿಕೆಟ್‌ ಪಂದ್ಯ ನೋಡಲು ಬರುವ ಕ್ರಿಕೆಟ್‌ ಪ್ರೇಮಿಗಳಿಗಾಗಿ ಮೆಟ್ರೋ ರೈಲು ವಿಶೇಷ ಓಡಾಟಕ್ಕೆ ಅನುಮತಿ ನೀಡಿವೆ. ಹೀಗಾಗಿ ಕ್ರಿಕೆಟ್‌ ನೋಡಲು ಬರುವವರು, ಕ್ರೀಡಾಂಗಣ ತಲುಪುವ ವಿಚಾರದಲ್ಲಿ ಯಾವುದೇ ಚಿಂತೆ ಮಾಡಬೇಕಾಗಿಲ್ಲ. ಪಂದ್ಯ ವೀಕ್ಷಣೆಗಾಗಿ ಬರುವ ಪ್ರಯಾಣಿಕರ ಅನುಕೂಲಕ್ಕಾಗಿ ಎಲ್ಲಾ ನಾಲ್ಕು ಟರ್ಮಿನಲ್ ಮೆಟ್ರೋ ನಿಲ್ದಾಣಗಳಿಂದ ಕೊನೆಯ ರೈಲು ಸೇವೆಗಳನ್ನು ರಾತ್ರಿ 11.30ಕ್ಕೆ ವಿಸ್ತರಿಸಲಾಗಿದೆ.

ವಿಶೇಷ ಮೆಟ್ರೋ, ಬಸ್‌ ಸೇವೆ

ಕ್ರಿಕೆಟ್‌ ಪಂದ್ಯ ನೋಡಲು ಬರುವ ಕ್ರಿಕೆಟ್‌ ಪ್ರೇಮಿಗಳಿಗಾಗಿಮೆಟ್ರೋ ಮತ್ತು ಬಿಎಂಟಿಸಿ ವಿಶೇಷ ಬಸ್ ಸೇವೆಗಳನ್ನು ಕಲ್ಪಿಸಿದೆ. ಹೀಗಾಗಿ ಕ್ರಿಕೆಟ್‌ ನೋಡಲು ಬರುವವರು, ಕ್ರೀಡಾಂಗಣ ತಲುಪುವ ವಿಚಾರದಲ್ಲಿ ಯಾವುದೇ ಚಿಂತೆ ಮಾಡಬೇಕಾಗಿಲ್ಲ.

ವಾಹನಗಳ ನಿಲುಗಡೆ ನಿಷೇಧ ಇರುವ ರಸ್ತೆಗಳು

ಕ್ವೀನ್ಸ್‌ ರಸ್ತೆಯ ಎರಡೂ ಬದಿಯಲ್ಲಿ ಹಾಗೂ ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್‌ ವೃತ್ತದ ವರೆಗೆ. ಕ್ವೀನ್ಸ್‌ ವೃತ್ತದಿಂದ ಸಿ.ಟಿ.ಒ ಜಂಕ್ಷನ್ ವರೆಗೆ

ಎಂ.ಜಿ. ರಸ್ತೆಯಲ್ಲಿ ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ಮತ್ತು ಕ್ವೀನ್ಸ್‌ ರಸ್ತೆಯಿಂದ ಅನಿಲ್ ಕುಂಬ್ಳೆ ಜಂಕ್ಷನ್‌ವರೆಗೆ ರಸ್ತೆಯ ಎರಡೂ ಕಡೆ

ಲಿಂಕ್ ರಸ್ತೆ– ಎಂ.ಜಿ ರಸ್ತೆಯಿಂದ ಕಬ್ಬನ್‌ ರಸ್ತೆವರೆಗೆ

ರಾಜಭವನ ರಸ್ತೆ, ಟಿ.ಚೌಡಯ್ಯ ರಸ್ತೆ ಮತ್ತು ರೇಸ್‌ ಕೋರ್ಸ್ ರಸ್ತೆ

ಸೆಂಟ್ರಲ್ ಸ್ಟ್ರೀಟ್ ರಸ್ತೆಯಲ್ಲಿ ರಸ್ತೆಯ ಎರಡೂ ಕಡೆ

ಕಬ್ಬನ್‌ ರಸ್ತೆಯಲ್ಲಿ, ಸಿ.ಟಿ.ಒ ವೃತ್ತದಿಂದ ಡಿಕನ್ಸನ್‌ ರಸ್ತೆ ಜಂಕ್ಷನ್‌ವರೆಗೆ ರಸ್ತೆಯ ಎರಡೂ ಕಡೆ. ಕಬ್ಬನ್ ರಸ್ತೆಯಲ್ಲಿ ಕಾಮರಾಜ ರಸ್ತೆ ಜಂಕ್ಷನ್‌ನಿಂದ ಡಿಕನ್ಸನ್‌ ರಸ್ತೆ ಜಂಕ್ಷನ್‌ವರೆಗೆ ಬಿಎಂಟಿಸಿ ಬಸ್‌ಗಳನ್ನು ಹೊರತುಪಡಿಸಿ, ಇತರೆ ಎಲ್ಲಾ ತರಹದ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ

ಸೇಂಟ್ ಮಾರ್ಕ್ಸ್ ರಸ್ತೆಯಲ್ಲಿ, ಕ್ಯಾಶ್ ಫಾರ್ಮಸಿ ಜಂಕ್ಷನ್‌ನಿಂದ ಅನಿಲ್ ಕುಂಬ್ಳೆ ವೃತ್ತದವರೆಗೆ

ಮ್ಯೂಸಿಯಂ ರಸ್ತೆಯಲ್ಲಿ, ಎಂ.ಜಿ ರಸ್ತೆಯಿಂದ ಸೇಂಟ್ ಮಾರ್ಕ್ಸ್ ರಸ್ತೆವರೆಗೆ ಹಾಗೂ ಆಶೀರ್ವಾದಂ ವೃತ್ತದವರೆಗೆ

ಕಸ್ತೂರಬಾ ರಸ್ತೆಯಲ್ಲಿ, ಕ್ವೀನ್ಸ್‌ ವೃತ್ತದಿಂದ ಹಡ್ಸನ್‌ ವೃತ್ತದ ವರೆಗೆ ಹಾಗೂ ಮಲ್ಯ ಆಸ್ಪತ್ರೆ ರಸ್ತೆಯಲ್ಲಿ ಸಿದ್ದಲಿಂಗಯ್ಯ ವೃತ್ತದಿಂದ ಆ‌ರ್‌ಆ‌ರ್‌ಎಂಆರ್ ವೃತ್ತದವರೆಗೆ

GT vs KKR: ಕೋಲ್ಕತಾಗೆ 5ನೇ ಸೋಲು, ಗುಜರಾತ್‌ ಟೈಟನ್ಸ್‌ಗೆ ಗೆಲುವು ತಂದುಕೊಟ್ಟ ರಬಾಡ, ಗಿಲ್!

ಕಬ್ಬನ್‌ ಪಾರ್ಕ್ ಒಳಭಾಗದ ಕಿಂಗ್ ರಸ್ತೆ, ಪ್ರೆಸ್‌ಕ್ಲಬ್ ಮುಂಭಾಗ, ಬಾಲಭವನ ಮುಂಭಾಗ, ಫೌಂಟೇನ್ ರಸ್ತೆಗಳಲ್ಲಿ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ

ಲ್ಯಾವೆಲ್ಲೆ ರಸ್ತೆಯಲ್ಲಿ ಕ್ವೀನ್ಸ್‌ ವೃತ್ತದಿಂದ ವಿಠಲ್‌ಮಲ್ಯ ರಸ್ತೆ ಜಂಕ್ಷನ್‌ವರೆಗೆ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ

ವಿಠಲ್ ಮಲ್ಯ ರಸ್ತೆ, ಸಿದ್ದಲಿಂಗಯ್ಯ ವೃತ್ತದಿಂದ ಸೇಂಟ್‌ ಮಾರ್ಕ್ಸ್ ರಸ್ತೆಯ ಬಿಷಪ್ ಕಾಟನ್ ಬಾಲಕಿಯರ ಶಾಲೆಯವರೆಗೆ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ

ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಿರುವ ಸ್ಥಳಗಳು (ಬೆಳಿಗ್ಗೆ 11ರಿಂದ ರಾತ್ರಿ 9ರ ವರೆಗೆ)

ಸೇಂಟ್ ಜೋಸೆಫ್ಸ್‌ ಇಂಡಿಯನ್ ಹೈಸ್ಕೂಲ್ ಮೈದಾನ, ಸಿದ್ದಲಿಂಗಯ್ಯ ವೃತ್ತ

ಸೇಂಟ್ ಜೋಸೆಫ್ಸ್‌ ಯುರೋಪಿಯನ್ ಸ್ಕೂಲ್ ಮೈದಾನ, ಮ್ಯೂಸಿಯಂ ರಸ್ತೆ

ಫ್ರೀಡಂ ಪಾರ್ಕ್‌ ಎಂಎಲ್‌ಸಿಪಿ ಪಾರ್ಕಿಂಗ್‌ ಸ್ಥಳ

ಗರುಡ ಮಾಲ್‌ನ ವಾಹನ ನಿಲುಗಡೆಯ ಸ್ಥಳ

ಶಿವಾಜಿನಗರ ಬಸ್‌ ನಿಲ್ದಾಣದ ಒಂದನೇ ಮಹಡಿ

ಯುಬಿಸಿಟಿ ವಾಹನ ನಿಲುಗಡೆಯ ಸ್ಥಳ