ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

RCB vs GT: ಇಂದು ಆರ್‌ಸಿಬಿ-ಗುಜರಾತ್‌ ಪಂದ್ಯಕ್ಕೆ ಮಳೆ ಭೀತಿ ಇದೆಯೇ?

ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣ(M.Chinnaswamy Stadium)ದಲ್ಲಿ ನಡೆಯಲಿರುವ ಆರ್‌ಸಿಬಿ(RCB vs GT) ಮತ್ತು ಗುಜರಾತ್‌ ಪಂದ್ಯದ ಸನ್ನಿವೇಶ ವಿಭಿನ್ನವಾಗಿದೆ. ಈ ಪಂದ್ಯ ಸುಸೂತ್ರವಾಗಿ ನಡೆಯಲು ಮಳೆಯು( Rain threat RCB-GT clash) ಅವಕಾಶ ಕೊಡುವುದೇ ಎಂಬ ಮಾತುಕತೆಗಳು ಜೋರಾಗಿವೆ.

ಇಂದು ಆರ್‌ಸಿಬಿ-ಗುಜರಾತ್‌ ಪಂದ್ಯಕ್ಕೆ ಮಳೆ ಭೀತಿ ಇದೆಯೇ?

Profile Abhilash BC Apr 2, 2025 8:37 AM

ಬೆಂಗಳೂರು: ಇಂದು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು(RCB vs GT) ಮತ್ತು ಗುಜರಾತ್‌ ಟೈಟಾನ್ಸ್‌ ನಡುವೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ(M Chinnaswamy Stadium) ಮಹತ್ವದ ಐಪಿಎಲ್‌ ಮುಖಾಮುಖಿ ನಡೆಯಲಿದೆ. ಆಡಿದ ಎರಡು ಪಂದ್ಯಗಳನ್ನು ಗೆದ್ದಿರುವ ಬೆಂಗಳೂರು(RCB) ತಂಡ ತವರಿನಲ್ಲಿ ಆಡುತ್ತಿರುವ ಮೊದಲ ಪಂದ್ಯ ಇದಾಗಿದೆ. ಆದರೆ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ.

ಮಳೆ ಭೀತಿ

ರಾಜ್ಯದ ಕೆಲವಡೆ ಮಂಗಳವಾರ ಗುಡುಗು ಸಹಿತ ಮಳೆಯಾಗಿದೆ. ಅದೇ ರೀತಿ ಮುಂದಿನ 6 ದಿನಗಳ ರಾಜ್ಯದಲ್ಲಿ ಮಳೆ ಎಚ್ಚರಿಕೆ ನೀಡಲಾಗಿದೆ. ಬುಧವಾರ ಬೆಂಗಳೂರಿನಲ್ಲಿ ಶೇ.30ರಷ್ಟು ಮಳೆಯಾಗುವ ಸಾಧ್ಯತೆ ಇದೆ. ಎಪ್ರಿಲ್‌ 1 ಮತ್ತು 2ರಂದು ಕರ್ನಾಟಕದ ಒಳನಾಡಿನಲ್ಲಿ ಗುಡುಗು, ಮಿಂಚು, ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಆರೆಂಜ್‌ ಅಲರ್ಟ್‌ ಘೋಷಿಸಿದೆ.

ಪಂದ್ಯಕ್ಕೆ ಅಡ್ಡಿಯಿಲ್ಲ

ಪಂದ್ಯ ನಡೆಯುವ ಸಮಯದಲ್ಲಿ ಎಷ್ಟೇ ಜೋರಾಗಿ ಮಳೆ ಬಂದರೂ 15 ರಿಂದ 20 ನಿಮಿಷದೊಳಗೆ ಮತ್ತೆ ಪಂದ್ಯ ಮುಂದುವರಿಯಲು ಅವಕಾಶ ಮಾಡಿಕೊಡುವ ಸಬ್‌ ಏರ್ ಸಿಸ್ಟಂ ತಂತ್ರಜ್ಞಾನ ಸೌಲಭ್ಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿದೆ. ಆದ್ದರಿಂದ ಮಳೆಯಿಂದಾಗಿ ಪಂದ್ಯ ರದ್ದಾಗುವುದು ತೀರಾ ವಿರಳ. ಒಂದೊಮ್ಮೆ ಮಳೆ ಎಡೆಬಿಡದೆ ಸುರಿದರೆ ಆಗ ಪಂದ್ಯ ರದ್ದಾಗಲಿದೆ.

ಇದನ್ನೂ ಓದಿ IPL 2025: 27 ಕೋಟಿ ರೂ ಕೊಟ್ಟಿದ್ದೇಕೆ? 2 ರನ್‌ಗೆ ವಿಕೆಟ್‌ ಒಪ್ಪಿಸಿದ ರಿಷಭ್‌ ಪಂತ್‌ ವಿರುದ್ದ ಫ್ಯಾನ್ಸ್‌ ಗರಂ!

ಮುಖಾಮುಖಿ

ಉಭಯ ತಂಡಗಳು ಐಪಿಎಲ್ ಇತಿಹಾಸದಲ್ಲಿ ಇದುವರೆಗೆ 5 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಆರ್‌ಸಿಬಿ ಮೂರು ಗೆಲುವು ಸಾಧಿಸಿದರೆ, ಗುಜರಾತ್‌ ಎರಡು ಗೆಲುವು ಕಂಡಿದೆ.

ಸಂಭಾವ್ಯ ತಂಡಗಳು

ಆರ್‌ಸಿಬಿ: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ತ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿ.ಕೀ), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಯಶ್ ದಯಾಲ್.

ಇಂಪ್ಯಾಕ್ಟ್ ಆಟಗಾರ: ಸುಯಶ್ ಶರ್ಮಾ

ಗುಜರಾತ್‌ ಟೈಟಾನ್ಸ್‌: ಸಾಯಿ ಸುದರ್ಶನ್, ಶುಭಮನ್ ಗಿಲ್ (ನಾಯಕ), ಜೋಸ್ ಬಟ್ಲರ್ (ವಿ.ಕೀ.), ಶಾರುಖ್ ಖಾನ್, ಶೆರ್ಫೇನ್ ರುದರ್‌ಫೋರ್ಡ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಆರ್. ಸಾಯಿ ಕಿಶೋರ್, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್, ಇಶಾಂತ್ ಶರ್ಮಾ

ಇಂಪ್ಯಾಕ್ಟ್ ಪ್ಲೇಯರ್: ಪ್ರಸಿದ್ಧ್ ಕೃಷ್ಣ