ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಆರ್‌ಸಿಬಿ-ಗುಜರಾತ್‌ ಪಂದ್ಯಕ್ಕೂ ಮುನ್ನ ವಿಜಯ್‌ ಪ್ರಕಾಶ್‌ ಸಂಗೀತ ಕಾರ್ಯಕ್ರಮ

ಬಿಸಿಸಿಐ ಈ ಬಾರಿ ಐಪಿಎಲ್‌ಗೆ ಆತಿಥ್ಯ ವಹಿಸುವ ಎಲ್ಲಾ 13 ನಗರಗಳಲ್ಲೂ ಉದ್ಘಾಟನಾ ಸಮಾರಂಭ ನಡೆಸಲು ನಿರ್ಧರಿಸಿತ್ತು. ಅದರಂತೆ ಬೆಂಗಳೂರಲ್ಲೂ ಪಂದ್ಯಕ್ಕೂ ಮುನ್ನ ಅದ್ಧೂರಿ ಕಾರ್ಯಕ್ರಮ ನಡೆಯಲಿದೆ. ವಿಜಯ್‌ ಪ್ರಕಾಶ್‌ ಸಂಗೀತ ಸುಧೆ ಹರಿಸಲಿದ್ದಾರೆ ಎಂದು ಐಪಿಎಲ್‌ ಆಡಳಿತ ಮಂಡಳಿ ಸಾಮಾಜಿಕ ತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿಜಯ್‌ ಪ್ರಕಾಶ್‌ ಸಂಗೀತ ಸುಧೆ

Profile Abhilash BC Apr 2, 2025 11:22 AM

ಬೆಂಗಳೂರು: ಐಪಿಎಲ್(IPL 2025)​ 18ನೇ ಆವೃತ್ತಿಯಲ್ಲಿ ಭರ್ಜರಿ ಆರಂಭ ಕಂಡಿರುವ ರಾಯಲ್​ ಚಾಲೆಂಜರ್ಸ್​ ಬೆಂಗಳೂರು(RCB vs GT) ತಂಡ ತವರಿನ ಮೊದಲ ಪಂದ್ಯಕ್ಕೆ ಸಜ್ಜಾಗಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು(ಎ.2) ನಡೆಯಲಿರುವ ಹಾಲಿ ಆವೃತ್ತಿಯ ಮೊದಲ ಕಾದಾಟದಲ್ಲಿ ಗುಜರಾತ್​ ಟೈಟಾನ್ಸ್​ ಸವಾಲು ಎದುರಿಸಲಿರುವ ರಜತ್​ ಪಾಟೀದಾರ್​ ಪಡೆ, ಹ್ಯಾಟ್ರಿಕ್​ ಗೆಲುವಿನ ನಿರೀಕ್ಷೆಯಲ್ಲಿದೆ. ಪಂದ್ಯ ಆರಂಭಕ್ಕೂ ಮುನ್ನ ನಡೆಯುವ ಕಿರು ಆರಂಭೋತ್ಸವದಲ್ಲಿ ಕರ್ನಾಟಕದ ಖ್ಯಾತ ಗಾಯಕ ವಿಜಯ್​ ಪ್ರಕಾಶ್​(Vijay Prakash) ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಸಂಜೆ 6.30ರಿಂದ ಈ ಕಾರ್ಯಕ್ರಮ ನಡೆಯಲಿದೆ.

ಬಿಸಿಸಿಐ ಈ ಬಾರಿ ಐಪಿಎಲ್‌ಗೆ ಆತಿಥ್ಯ ವಹಿಸುವ ಎಲ್ಲಾ 13 ನಗರಗಳಲ್ಲೂ ಉದ್ಘಾಟನಾ ಸಮಾರಂಭ ನಡೆಸಲು ನಿರ್ಧರಿಸಿತ್ತು. ಅದರಂತೆ ಬೆಂಗಳೂರಲ್ಲೂ ಪಂದ್ಯಕ್ಕೂ ಮುನ್ನ ಅದ್ಧೂರಿ ಕಾರ್ಯಕ್ರಮ ನಡೆಯಲಿದೆ. ವಿಜಯ್‌ ಪ್ರಕಾಶ್‌ ಸಂಗೀತ ಸುಧೆ ಹರಿಸಲಿದ್ದಾರೆ ಎಂದು ಐಪಿಎಲ್‌ ಆಡಳಿತ ಮಂಡಳಿ ಸಾಮಾಜಿಕ ತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದೆ.



17 ವರ್ಷಗಳ ಪ್ರಶಸ್ತಿ ಬರ ನೀಗಿಸುವ ನಿಟ್ಟಿನಲ್ಲಿ ಆರ್​ಸಿಬಿ ಈ ಬಾರಿ ಚೇತೋಹಾರಿ ಆರಂಭವನ್ನೇ ಕಂಡಿದ್ದು, ತವರು ಅಭಿಮಾನಿಗಳ ಎದುರು ಆರ್​ಸಿಬಿ ತಂಡದಿಂದ ಇನ್ನಷ್ಟು ಬಲಿಷ್ಠ ನಿರ್ವಹಣೆಯ ನಿರೀಕ್ಷೆ ಇಡಲಾಗಿದೆ. ಸದ್ಯ ಆರ್‌ಸಿಬಿ ಆಡಿದ ಎರಡು ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದರೆ, ಶುಭಮನ್‌ ಗಿಲ್‌ ಪಡೆ ಒಂದು ಗೆಲುವು ಮತ್ತು ಸೋಲಿನಿಂದಿಗೆ ನಾಲ್ಕನೇ ಸ್ಥಾನದಲ್ಲಿದೆ.

ಇದನ್ನೂ ಓದಿ RCB vs GT: ಇಂದು ಆರ್‌ಸಿಬಿ-ಗುಜರಾತ್‌ ಪಂದ್ಯಕ್ಕೆ ಮಳೆ ಭೀತಿ ಇದೆಯೇ?

ಆರ್‌ಸಿಬಿಯಿಂದ ಬೇರ್ಪಟ್ಟು ಗುಜರಾತ್‌ ಸೇರಿರುವ ಮೊಹಮ್ಮದ್‌ ಸಿರಾಜ್‌ ತನ್ನ ಮಾಜಿ ತಂಡದ ವಿರುದ್ಧ ಹೇಗೆ ಪ್ರದರ್ಶನ ತೋರಲಿದ್ದಾರೆ ಎಂಬುದು ಕೂಡ ಪಂದ್ಯದ ಕುತೂಹಲಗಳಲ್ಲಿ ಒಂದಾಗಿದೆ. ಚಿನ್ನಸ್ವಾಮಿ ಮೈದಾನ ಚಿಕ್ಕದಾಗಿರುವುದರಿಂದ ಭಾರೀ ಪ್ರಮಾಣದ ರನ್‌ ಹರಿದು ಬರುವುದು ಸಾಮಾನ್ಯ. ಉಭಯ ತಂಡಗಳ ಬ್ಯಾಟಿಂಗ್‌ ಕೂಡ ಬಲಿಷ್ಠವಾಗಿದೆ. ಹೀಗಾಗಿ ಬೌಲರ್‌ಗಳು ಶಕ್ತಿ ಮೀರಿ ಪ್ರಯತ್ನ ನಡೆಸುವುದು ಅಗತ್ಯ.

ಸಂಭಾವ್ಯ ತಂಡಗಳು

ಆರ್‌ಸಿಬಿ: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ತ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿ.ಕೀ), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಯಶ್ ದಯಾಲ್.

ಇಂಪ್ಯಾಕ್ಟ್ ಆಟಗಾರ: ಸುಯಶ್ ಶರ್ಮಾ

ಗುಜರಾತ್‌ ಟೈಟಾನ್ಸ್‌: ಸಾಯಿ ಸುದರ್ಶನ್, ಶುಭಮನ್ ಗಿಲ್ (ನಾಯಕ), ಜೋಸ್ ಬಟ್ಲರ್ (ವಿ.ಕೀ.), ಶಾರುಖ್ ಖಾನ್, ಶೆರ್ಫೇನ್ ರುದರ್‌ಫೋರ್ಡ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಆರ್. ಸಾಯಿ ಕಿಶೋರ್, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್, ಇಶಾಂತ್ ಶರ್ಮಾ

ಇಂಪ್ಯಾಕ್ಟ್ ಪ್ಲೇಯರ್: ಪ್ರಸಿದ್ಧ್ ಕೃಷ್ಣ