ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

RCB vs KKR: ನಾಳಿನ ಆರ್‌ಸಿಬಿ-ಕೆಕೆಆರ್‌ ಪಂದ್ಯದ ಪಿಚ್‌ ರಿಪೋರ್ಟ್‌, ಹವಾಮಾನ ವರದಿ ಹೇಗಿದೆ?

Bengaluru Weather: ಉದ್ಯಾನನಗರಿಯಲ್ಲಿ ಕಳೆದ ಮೂರು ದಿನಗಳಿಂದ ಸಂಜೆ ಮಳೆಯಾಗಿದ್ದು, ಶನಿವಾರವೂ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪಂದ್ಯದ ಸಮಯದಲ್ಲಿ ಶೇ. 65 ರಷ್ಟು ಮಳೆಯಾಗುವ ಸಾಧ್ಯತೆ ಇರಲಿದೆ ಎಂದು ತಿಳಿಸಿದೆ.

ನಾಳಿನ ಆರ್‌ಸಿಬಿ-ಕೆಕೆಆರ್‌ ಪಂದ್ಯದ ಪಿಚ್‌ ರಿಪೋರ್ಟ್‌ ಹೇಗಿದೆ?

Profile Abhilash BC May 16, 2025 11:52 AM

ಬೆಂಗಳೂರು: ಭರ್ಜರಿ ಗೆಲುವಿನ ಲಯದಲ್ಲಿರುವ ರಾಯಲ್​ ಚಾಲೆಂಜರ್ಸ್​ ಬೆಂಗಳೂರು(RCB vs KKR) ತಂಡ ಶನಿವಾರ ಚಿನ್ನಸ್ವಾಮಿ ಸ್ಟೇಡಿಯಂ(M. Chinnaswamy)ನಲ್ಲಿ ನಡೆಯುವ ಐಪಿಎಲ್‌(IPL 2025) ಪಂದ್ಯದಲ್ಲಿ ಕೋಲ್ಕತ್ತಾ ನೈಟ್‌ರೈಡರ್ಸ್‌ ತಂಡದ ವಿರುದ್ಧ ಸೆಣಸಾಟ ನಡೆಸಲಿದೆ. ಈ ಪಂದ್ಯದ ಪಿಚ್‌ ರಿಪೋರ್ಟ್‌, ಹವಾಮಾನ ವರದಿ(bengaluru weather) ಮತ್ತು ಸಂಭಾವ್ಯ ತಂಡಗಳ ಮಾಹಿತಿ ಹೀಗಿದೆ.

ಪಿಚ್‌ ರಿಪೋರ್ಟ್‌

ಚಿನ್ನಸ್ವಾಮಿ ಸ್ಟೇಡಿಯಂ ಪಿಚ್​ ಕಳೆದ ಕೆಲ ಆವೃತ್ತಿಗಳಲ್ಲಿ ಬ್ಯಾಟಿಂಗ್​ ಸ್ನೇಹಿಯಾಗಿ ರನ್​ಮಳೆಗೆ ಸಾಯಾಗುತಿತ್ತು. ಆದರೆ ಈ ಬಾರಿ ಕೇವಲ 2 ಬಾರಿ ಮಾತ್ರ 200 ಪ್ಲಸ್​ ಮೊತ್ತ ದಾಖಲಾಗಿದೆ. ಉದ್ಯಾನನಗರಿಯಲ್ಲಿ ಕಳೆದ ಕೆಲ ದಿನಗಳಿಂದ ಮಳೆಯಾದ ಕಾರಣ ಪಂದ್ಯದ ವೇಳೆ ಪಿಚ್​ ಸಂಪೂರ್ಣ ಬೌಲಿಂಗ್​ ಸ್ನೇಹಿಯಾಗುವ ಸಾಧ್ಯತೆ ಇದೆ.

ಮಳೆ ಭೀತಿ

ಉದ್ಯಾನನಗರಿಯಲ್ಲಿ ಕಳೆದ ಮೂರು ದಿನಗಳಿಂದ ಸಂಜೆ ಮಳೆಯಾಗಿದ್ದು, ಶನಿವಾರವೂ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪಂದ್ಯದ ಸಮಯದಲ್ಲಿ ಶೇ. 65 ರಷ್ಟು ಮಳೆಯಾಗುವ ಸಾಧ್ಯತೆ ಇರಲಿದೆ ಎಂದು ತಿಳಿಸಿದೆ. ಪಂದ್ಯ ರದ್ದಾದರು ಆರ್‌ಸಿಬಿ ಯಾವುದೇ ನಷ್ಟ ಸಂಭವಿಸುವುದಿಲ್ಲ. ಕಾರಣ ಒಂದು ಅಂಕ ಲಭಿಸಲಿದೆ. ಈ ಒಂದು ಅಂಕದ ಬಲದಿಂದ ಆರ್‌ಸಿಬಿ ಪ್ಲೇಆಫ್‌ಗೆ ನೇರವಾಗಿ ಪ್ರವೇಶ ಪಡೆಯಲಿದೆ.

ಮುಖಾಮುಖಿ

ಇತ್ತಂಡಗಳು ಇದುವರೆಗೆ ಐಪಿಎಲ್‌ನಲ್ಲಿ ಒಟ್ಟು 35 ಪಂದ್ಯಗಳನ್ನು ಆಡಿದೆ. ಈ ಪೈಕಿ ಕೆಕೆಆರ್‌ ಗರಿಷ್ಠ 20 ಪಂದ್ಯ ಗೆದ್ದಿದ್ದರೆ, ಆರ್‌ಸಿಬಿ 15 ಪಂದ್ಯಗಳಲ್ಲಿ ಜಯಿಸಿದೆ. ಹಾಲಿ ಆವೃತ್ತಿಯ ಮೊದಲ ಮುಖಾಮುಖಿಯಲ್ಲಿ ಆರ್‌ಸಿಬಿ 7 ವಿಕೆಟ್‌ ಅಂತರದಿಂದ ಗೆಲುವು ಸಾಧಿಸಿತ್ತು.

ಇದನ್ನೂ ಓದಿ RCB vs KKR: ಕೆಕೆಆರ್‌ ಮಣಿಸಿ ಪ್ಲೇ-ಆಫ್‌ಗೇರಲು ಆರ್‌ಸಿಬಿ ಸಜ್ಜು; ನಾಳೆ ಚಿನ್ನಸ್ವಾಮಿಯಲ್ಲಿ ಕಾದಾಟ

ಸಂಭಾವ್ಯ ತಂಡ

ಆರ್‌ಸಿಬಿ: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್‌, ಜಿತೇಶ್ ಶರ್ಮಾ (ವಿ.ಕೀ.), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಭುವನೇಶ್ವರ್ ಕುಮಾರ್, ಲುಂಗಿ ಎನ್‌ಗಿಡಿ, ಯಶ್ ದಯಾಲ್.

ಕೆಕೆಆರ್‌: ರಹಮಾನುಲ್ಲಾ ಗುರ್ಬಾಜ್ (ವಿ.ಕೀ), ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಅಜಿಂಕ್ಯ ರಹಾನೆ (ನಾಯಕ), ಮನೀಶ್ ಪಾಂಡೆ, ರಿಂಕು ಸಿಂಗ್, ಆಂಡ್ರೆ ರಸೆಲ್, ಅನ್ರಿಚ್ ನಾರ್ಟ್ಜೆ, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವೈಭವ್ ಅರೋರಾ.