ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಇಂದು ಐಪಿಎಲ್‌ ಉದ್ಘಾಟನ ಪಂದ್ಯ; ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ವಾಹನ ನಿಲುಗಡೆ ನಿಷೇಧ

IPL 2026 Bengaluru Traffic Advisory: ಈ ಬಾರಿ ಟೂರ್ನಿ ಬೆಂಗಳೂರು ಸೇರಿದಂತೆ ಒಟ್ಟು 13 ನಗರಗಳಲ್ಲಿ ನಡೆಯಲಿವೆ. ಅಹಮದಾಬಾದ್‌, ಚೆನ್ನೈ, ಮುಂಬೈ, ಕೋಲ್ಕತಾ, ನವದೆಹಲಿ, ಧರ್ಮಶಾಲಾ, ಗುವಾಹಟಿ, ಹೈದರಾಬಾದ್‌, ಜೈಪುರ, ಲಖನೌ, ಮುಲ್ಲಾನ್‌ಪುರ, ರಾಯ್ಪುರದಲ್ಲೂ ಪಂದ್ಯಗಳು ಆಯೋಜನೆಗೊಳ್ಳಲಿವೆ.

ಇಂದು ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ವಾಹನ ನಿಲುಗಡೆ ನಿಷೇಧ

m chinnaswamy stadium -

Abhilash BC
Abhilash BC Mar 28, 2026 7:57 AM

ಬೆಂಗಳೂರು, ಮಾ.28: 19ನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್(IPL 2026) ಆರಂಭಕ್ಕೆ ಕ್ಷಣಗಣೆ ಶುರುವಾಗಿದೆ. ಇಂದು ಎಂ.ಚಿನ್ನಸ್ವಾಮಿ ಕ್ರೀಡಾಂಗಣ(m chinnaswamy stadium)ದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದೆ. ಹಾಲಿ ಚಾಂಪಿಯನ್‌ ಬೆಂಗಳೂರು ಮತ್ತು ಸನ್‌ರೈಸರ್ಸ್‌ ಹೈದರಾಬಾದ್‌(RCB vs SRH) ತಂಡಗಳು ಈ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಕ್ರೀಡಾಂಗಣದ ಸುತ್ತಮುತ್ತಲ ರಸ್ತೆಗಳು, ಜಂಕ್ಷನ್‌ಗಳಲ್ಲಿ ವಾಹನ ನಿಲುಗಡೆ ನಿಷೇಧ ಮಾಡಲಾಗಿದೆ.

ಕ್ರೀಡಾಂಗಣದ ವ್ಯಾಪ್ತಿ ಸಂಚಾರ ವ್ಯವಸ್ಥೆ ಬದಲಾವಣೆ ಮಾಡಲಾಗಿದೆ. ಭದ್ರತೆ ದೃಷ್ಟಿಯಿಂದ ಪೊಲೀಸರ ಸೂಚನೆಗಳನ್ನು ಪ್ರೇಕ್ಷಕರಿಗೆ ಕಡ್ಡಾಯವಾಗಿ ಪಾಲನೆ ಮಾಡಬೇಕು. ಯಾವುದೇ ರೀತಿಯ ನಿಯಮ ಉಲ್ಲಂಘಿಸಿದರೆ ಸಹಿಸುವುದಿಲ್ಲ. ಕಾಲ್ತುಳಿತ ದುರಂತದ ಬಳಿಕ ಬಂದೋಬಸ್ತ್ ವ್ಯವಸ್ಥೆಯಲ್ಲಿ ಭಾರಿ ಸುಧಾರಣೆ ತರಲಾಗಿದೆ.

ವಾಹನಗಳ ನಿಲುಗಡೆ ನಿಷೇಧ ಇರುವ ರಸ್ತೆಗಳು

ಕ್ವೀನ್ಸ್‌ ರಸ್ತೆಯ ಎರಡೂ ಬದಿಯಲ್ಲಿ ಹಾಗೂ ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್‌ ವೃತ್ತದ ವರೆಗೆ. ಕ್ವೀನ್ಸ್‌ ವೃತ್ತದಿಂದ ಸಿ.ಟಿ.ಒ ಜಂಕ್ಷನ್ ವರೆಗೆ

ಎಂ.ಜಿ. ರಸ್ತೆಯಲ್ಲಿ ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ಮತ್ತು ಕ್ವೀನ್ಸ್‌ ರಸ್ತೆಯಿಂದ ಅನಿಲ್ ಕುಂಬ್ಳೆ ಜಂಕ್ಷನ್‌ವರೆಗೆ ರಸ್ತೆಯ ಎರಡೂ ಕಡೆ

ಲಿಂಕ್ ರಸ್ತೆ– ಎಂ.ಜಿ ರಸ್ತೆಯಿಂದ ಕಬ್ಬನ್‌ ರಸ್ತೆವರೆಗೆ

ರಾಜಭವನ ರಸ್ತೆ, ಟಿ.ಚೌಡಯ್ಯ ರಸ್ತೆ ಮತ್ತು ರೇಸ್‌ ಕೋರ್ಸ್ ರಸ್ತೆ

ಸೆಂಟ್ರಲ್ ಸ್ಟ್ರೀಟ್ ರಸ್ತೆಯಲ್ಲಿ ರಸ್ತೆಯ ಎರಡೂ ಕಡೆ

ಕಬ್ಬನ್‌ ರಸ್ತೆಯಲ್ಲಿ, ಸಿ.ಟಿ.ಒ ವೃತ್ತದಿಂದ ಡಿಕನ್ಸನ್‌ ರಸ್ತೆ ಜಂಕ್ಷನ್‌ವರೆಗೆ ರಸ್ತೆಯ ಎರಡೂ ಕಡೆ. ಕಬ್ಬನ್ ರಸ್ತೆಯಲ್ಲಿ ಕಾಮರಾಜ ರಸ್ತೆ ಜಂಕ್ಷನ್‌ನಿಂದ ಡಿಕನ್ಸನ್‌ ರಸ್ತೆ ಜಂಕ್ಷನ್‌ವರೆಗೆ ಬಿಎಂಟಿಸಿ ಬಸ್‌ಗಳನ್ನು ಹೊರತುಪಡಿಸಿ, ಇತರೆ ಎಲ್ಲಾ ತರಹದ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ

ಸೇಂಟ್ ಮಾರ್ಕ್ಸ್ ರಸ್ತೆಯಲ್ಲಿ, ಕ್ಯಾಶ್ ಫಾರ್ಮಸಿ ಜಂಕ್ಷನ್‌ನಿಂದ ಅನಿಲ್ ಕುಂಬ್ಳೆ ವೃತ್ತದವರೆಗೆ

ಮ್ಯೂಸಿಯಂ ರಸ್ತೆಯಲ್ಲಿ, ಎಂ.ಜಿ ರಸ್ತೆಯಿಂದ ಸೇಂಟ್ ಮಾರ್ಕ್ಸ್ ರಸ್ತೆವರೆಗೆ ಹಾಗೂ ಆಶೀರ್ವಾದಂ ವೃತ್ತದವರೆಗೆ

ಕಸ್ತೂರಬಾ ರಸ್ತೆಯಲ್ಲಿ, ಕ್ವೀನ್ಸ್‌ ವೃತ್ತದಿಂದ ಹಡ್ಸನ್‌ ವೃತ್ತದ ವರೆಗೆ ಹಾಗೂ ಮಲ್ಯ ಆಸ್ಪತ್ರೆ ರಸ್ತೆಯಲ್ಲಿ ಸಿದ್ದಲಿಂಗಯ್ಯ ವೃತ್ತದಿಂದ ಆ‌ರ್‌ಆ‌ರ್‌ಎಂಆರ್ ವೃತ್ತದವರೆಗೆ

ಕಬ್ಬನ್‌ ಪಾರ್ಕ್ ಒಳಭಾಗದ ಕಿಂಗ್ ರಸ್ತೆ, ಪ್ರೆಸ್‌ಕ್ಲಬ್ ಮುಂಭಾಗ, ಬಾಲಭವನ ಮುಂಭಾಗ, ಫೌಂಟೇನ್ ರಸ್ತೆಗಳಲ್ಲಿ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ

ಲ್ಯಾವೆಲ್ಲೆ ರಸ್ತೆಯಲ್ಲಿ ಕ್ವೀನ್ಸ್‌ ವೃತ್ತದಿಂದ ವಿಠಲ್‌ಮಲ್ಯ ರಸ್ತೆ ಜಂಕ್ಷನ್‌ವರೆಗೆ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ

ವಿಠಲ್ ಮಲ್ಯ ರಸ್ತೆ, ಸಿದ್ದಲಿಂಗಯ್ಯ ವೃತ್ತದಿಂದ ಸೇಂಟ್‌ ಮಾರ್ಕ್ಸ್ ರಸ್ತೆಯ ಬಿಷಪ್ ಕಾಟನ್ ಬಾಲಕಿಯರ ಶಾಲೆಯವರೆಗೆ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ

ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಿರುವ ಸ್ಥಳಗಳು (ಬೆಳಿಗ್ಗೆ 11ರಿಂದ ರಾತ್ರಿ 9ರ ವರೆಗೆ)

ಸೇಂಟ್ ಜೋಸೆಫ್ಸ್‌ ಇಂಡಿಯನ್ ಹೈಸ್ಕೂಲ್ ಮೈದಾನ, ಸಿದ್ದಲಿಂಗಯ್ಯ ವೃತ್ತ

ಸೇಂಟ್ ಜೋಸೆಫ್ಸ್‌ ಯುರೋಪಿಯನ್ ಸ್ಕೂಲ್ ಮೈದಾನ, ಮ್ಯೂಸಿಯಂ ರಸ್ತೆ

ಫ್ರೀಡಂ ಪಾರ್ಕ್‌ ಎಂಎಲ್‌ಸಿಪಿ ಪಾರ್ಕಿಂಗ್‌ ಸ್ಥಳ

ಗರುಡ ಮಾಲ್‌ನ ವಾಹನ ನಿಲುಗಡೆಯ ಸ್ಥಳ

ಶಿವಾಜಿನಗರ ಬಸ್‌ ನಿಲ್ದಾಣದ ಒಂದನೇ ಮಹಡಿ

ಯುಬಿಸಿಟಿ ವಾಹನ ನಿಲುಗಡೆಯ ಸ್ಥಳ

IPL 2026 Tickets: ಐಪಿಎಲ್ ಟಿಕೆಟ್ ಕೇಳ್ತಿರುವ ಶಾಸಕರಿಗೆ ನಾಚಿಕೆ ಆಗಬೇಕು: ಯತ್ನಾಳ್‌ ಕಿಡಿ

ಈ ಬಾರಿ ಟೂರ್ನಿ ಬೆಂಗಳೂರು ಸೇರಿದಂತೆ ಒಟ್ಟು 13 ನಗರಗಳಲ್ಲಿ ನಡೆಯಲಿವೆ. ಅಹಮದಾಬಾದ್‌, ಚೆನ್ನೈ, ಮುಂಬೈ, ಕೋಲ್ಕತಾ, ನವದೆಹಲಿ, ಧರ್ಮಶಾಲಾ, ಗುವಾಹಟಿ, ಹೈದರಾಬಾದ್‌, ಜೈಪುರ, ಲಖನೌ, ಮುಲ್ಲಾನ್‌ಪುರ, ರಾಯ್ಪುರದಲ್ಲೂ ಪಂದ್ಯಗಳು ಆಯೋಜನೆಗೊಳ್ಳಲಿವೆ.