RCB vs SRH: ಟಿ20ಯಲ್ಲಿ ನೂತನ ದಾಖಲೆ ಬರೆಯಲು ಸಜ್ಜಾದ ಕಿಂಗ್ ಕೊಹ್ಲಿ
ಹಾಲಿ ಆವೃತ್ತಿಯ ಐಪಿಎಲ್‌ನಲ್ಲಿ ವಿರಾಟ್ ಕೊಹ್ಲಿ 11 ಪಂದ್ಯಗಳನ್ನು ಆಡಿ 505* ರನ್ ಬಾರಿಸಿದ್ದಾರೆ. ಅತ್ಯಧಿಕ ರನ್ ಗಳಿಸಿದ ಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದ್ದಾರೆ. ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಹೇಳಿದ ಬಳಿಕ ಆಡುತ್ತಿರುವ ಮೊದಲ ಪಂದ್ಯ ಇದಾದ ಕಾರಣ ಇಂದು ಅಭಿಮಾನಿಗಳು ಸ್ಟೇಡಿಯಂನಲ್ಲಿ ಕಿಕ್ಕಿರಿದು ಸೇರುವ ನಿರೀಕ್ಷೆ ಇದೆ.


ಲಕ್ನೋ: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB vs SRH) ತಂಡ ಇಂದು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ(Virat Kohli)ಗೆ ದಾಖಲೆಯೊಂದನ್ನು ಬರೆಯುವ ಅವಕಾಶವಿದೆ. ಕೊಹ್ಲಿ ಈ ಪಂದ್ಯದಲ್ಲಿ 67 ರನ್ ಬಾರಿಸಿದರೆ ಟಿ20 ಇತಿಹಾಸದಲ್ಲಿ ಒಂದೇ ತಂಡದ ಪರ 9,000 ರನ್ ಗಳಿಸಿದ ಮೊದಲ ಕ್ರಿಕೆಟಿಗ ಎನಿಸಿಕೊಳ್ಳಲಿದ್ದಾರೆ. ಪ್ರಸ್ತುತ ದಾಖಲೆ ಕೂಡ ಕೊಹ್ಲಿ ಹೆಸರಿನಲ್ಲಿದೆ. ಕೊಹ್ಲಿ ಆರ್‌ಸಿಬಿ ಪರ 8933* ರನ್ ಬಾರಿಸಿದ್ದಾರೆ.
ಹಾಲಿ ಆವೃತ್ತಿಯ ಐಪಿಎಲ್‌ನಲ್ಲಿ ವಿರಾಟ್ ಕೊಹ್ಲಿ 11 ಪಂದ್ಯಗಳನ್ನು ಆಡಿ 505* ರನ್ ಬಾರಿಸಿದ್ದಾರೆ. ಅತ್ಯಧಿಕ ರನ್ ಗಳಿಸಿದ ಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದ್ದಾರೆ. ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಹೇಳಿದ ಬಳಿಕ ಆಡುತ್ತಿರುವ ಮೊದಲ ಪಂದ್ಯ ಇದಾದ ಕಾರಣ ಇಂದು ಅಭಿಮಾನಿಗಳು ಸ್ಟೇಡಿಯಂನಲ್ಲಿ ಕಿಕ್ಕಿರಿದು ಸೇರುವ ನಿರೀಕ್ಷೆ ಇದೆ. ಕಳೆದ ಶನಿವಾರ ಆರ್‌ಸಿಬಿ ಬೆಂಗಳೂರಿನಲ್ಲಿ ಕೆಕೆಆರ್ ವಿರುದ್ಧ ಆಡಬೇಕಿತ್ತು. ಆದರೆ ಪಂದ್ಯ ಮಳೆಯಿಂದ ರದ್ದುಗೊಂಡಿತ್ತು.
ಟಿ20 ಕ್ರಿಕೆಟ್‌ನಲ್ಲಿ ಒಂದೇ ತಂಡಕ್ಕೆ ಅತಿ ಹೆಚ್ಚು ರನ್‌ಗಳು
ವಿರಾಟ್ ಕೊಹ್ಲಿ (ಆರ್‌ಸಿಬಿ): 8933* ರನ್
ರೋಹಿತ್ ಶರ್ಮಾ(ಮುಂಬೈ): 6036* ರನ್
ಜೇಮ್ಸ್ ವಿನ್ಸ್ (ಹ್ಯಾಂಪ್‌ಶೈರ್): 5934 ರನ್
ಸುರೇಶ್ ರೈನಾ (ಚೆನ್ನೈ): 5529 ರನ್
ಎಂ.ಎಸ್ ಧೋನಿ (ಚೆನ್ನೈ): 5314* ರನ್
ಇದನ್ನೂ ಓದಿ IPL 2025: ಚೊಚ್ಚಲ ಶತಕ ಬಾರಿಸಿ ದಾಖಲೆ ಬರೆದ ಮಿಚೆಲ್ ಮಾರ್ಷ್
ಸಂಭಾವ್ಯ ತಂಡಗಳು
ಆರ್‌ಸಿಬಿ: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿ.ಕೀ.), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಭುವನೇಶ್ವರ್ ಕುಮಾರ್, ಲುಂಗಿ ಎನ್‌ಗಿಡಿ, ಯಶ್ ದಯಾಲ್.
ಹೈದರಾಬಾದ್: ಅಭಿಷೇಕ್ ಶರ್ಮಾ, ಇಶಾನ್ ಕಿಶನ್ (ವೀ.ಕೀ.), ನಿತೀಶ್ ಕುಮಾರ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್, ಅನಿಕೇತ್ ವರ್ಮಾ, ಕಮಿಂದು ಮೆಂಡಿಸ್, ಪ್ಯಾಟ್ ಕಮಿನ್ಸ್ (ನಾಯಕ), ಹರ್ಷಲ್ ಪಟೇಲ್, ಹರ್ಷ್ ದುಬೆ, ಜೀಶನ್ ಅನ್ಸಾರಿ, ಈಶಾನ್ ಮಾಲಿಂಗ.