Saturday, 14th December 2024

ಸಂಘಟಿತ ಹೋರಾಟದಿಂದ ಗೆದ್ದ ಆರ್‌ಸಿಬಿ: ಅಂಕಪಟ್ಟಿಯಲ್ಲಿ ಪ್ರಮೋಷನ್‌

ದುಬೈ : ಚೆನ್ನೈ ಸೂಪರ್‌ ಕಿಂಗ್ಸ್‌ ಎದುರಿನ ಶನಿವಾರದ ಐಪಿಎಲ್‌ ಮುಖಾಮುಖಿಯಲ್ಲಿ ರಾಯಲ್‌ ಚಾಲೆಂಜರ‍್ಸ್ ಬೆಂಗಳೂರು ತಂಡ ಪಂದ್ಯವನ್ನು 37 ರನ್ನುಗಳಿಂದ ಗೆದ್ದುಕೊಂಡಿದೆ.

ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಎಲ್ಲಾ ವಿಭಾಗಗಳಲ್ಲೂ ಭರ್ಜರಿ ಪ್ರದರ್ಶನ ನೀಡಿದ ಕೊಹ್ಲಿ ಪಡೆ ಮತ್ತೊಂದು ಗೆಲುವು ಸಂಪಾದಿಸುವಲ್ಲಿ ಯಶಸ್ವಿಯಾಗಿದೆ.

170 ರನ್ ಗಳ ಗೆಲುವಿನ ಗುರಿ ಬೆನ್ನತ್ತಿದ ಚೆನ್ನೈ 20 ಓವರ್ ನಲ್ಲಿ 8 ವಿಕೆಟ್ ಕಳೆದುಕೊಂಡು 132 ರನ್ ಗಳಿಸಿ ಬೆಂಗಳೂರು ತಂಡಕ್ಕೆ ಶರಣಾಯಿತು. ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ಬೆಂಗಳೂರು ನಾಯಕ ವಿರಾಟ್‌ ಕೊಹ್ಲಿ ಬ್ಯಾಟಿಂಗ್‌ ಬಲದಿಂದ ಉತ್ತಮ ಮೊತ್ತ ದಾಖಲಿಸಿತು. 20 ಓವರ್‌ಗಳಲ್ಲಿ 4 ವಿಕೆಟ್‌ಗೆ 169 ರನ್‌ ಗಳಿಸಿತು.

ಮೊದಲು ಬ್ಯಾಟಿಂಗ್ ಮಾಡಿದ ವಿರಾಟ್ ಕೊಹ್ಲಿ ಪಡೆ 4 ವಿಕೆಟ್ ಕಳೆದುಕೊಂಡು ನಿಗದಿತ 20 ಓವರ್‌ಗಳಲ್ಲಿ 169 ರನ್ ಗಳಿಸಿತು. ಈ ಮೊತ್ತವನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 132 ರನ್ ಗಳಿಸಲಷ್ಟೇ ಶಕ್ತವಾ ಯಿತು. ಈ ಮೂಲಕ ಧೋನಿ ಪಡೆ ಟೂರ್ನಿಯಲ್ಲಿ 5ನೇ ಸೋಲುಕಂಡಿದೆ.

ಆರ್‌‌ಸಿಬಿ ನಾಯಕ ವಿರಾಟ್ ಕೊಹ್ಲಿ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು. ಅವರು ಅಜೇಯ ೯೦ ರನ್‌ ಬಾರಿಸಿದ್ದರು. ಇದರಲ್ಲಿ ನಾಲ್ಕು ಬೌಂಡರಿ ಹಾಗೂ ಅಷ್ಟೇ ಸಿಕ್ಸರ್‌ ಒಳಗೊಂಡಿತ್ತು.