RCB vs MI: ವಾಂಖೇಡೆ ಮೈದಾನದಲ್ಲಿ ಆರ್‌ಸಿಬಿ ದಾಖಲೆ ಹೇಗಿದೆ?
IPL 2025: ಆರ್‌ಸಿಬಿ ತಂಡ ಮುಂಬೈನ ವಾಂಖೇಡೆ ಮೈದಾನದಲ್ಲಿ ಕಳೆದ 10 ವರ್ಷಗಳಲ್ಲಿ ಒಂದೂ ಪಂದ್ಯ ಗೆದ್ದಿಲ್ಲ. ಇಲ್ಲಿ ಕೊನೆಯ ಬಾರಿಗೆ ಗೆದ್ದದ್ದು 2015ರಲ್ಲಿ. ಆ ಬಳಿಕ ತಂಡಕ್ಕೆ ಗೆಲುವು ಸಿಕ್ಕಿಲ್ಲ. ಒಟ್ಟಾರೆಯಾಗಿ ವಾಂಖೇಡೆ ಸ್ಟೇಡಿಯಂನಲ್ಲಿ ಮುಂಬೈ ವಿರುದ್ಧ ಆರ್‌ಸಿಬಿ 11 ಪಂದ್ಯಗಳನ್ನಾಡಿ ಕೇವಲ 3 ಗೆಲುವು 8 ಸೋಲು ಕಂಡಿದೆ.


ಮುಂಬಯಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB vs MI) ತಂಡವು ಐದು ಬಾರಿಯ ಐಪಿಎಲ್(IPL 2025) ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಸೋಮವಾರ ಎದುರಿಸಲಿದೆ. ಆರ್‌ಸಿಬಿ(RCB) ಕಳೆದ ತವರಿನಲ್ಲೇ ನಡೆದಿದ್ದ ಪಂದ್ಯದಲ್ಲಿ ಸೋಲು ಕಂಡಿತ್ತು. ಇದೀಗ ಮತ್ತೆ ಗೆಲುವಿನ ಹಳಿ ಏರುವ ವಿಶ್ವಾಸದೊಂದಿಗೆ ಕಣಕ್ಕಿಳಿಯಲಿದೆ. ಆದರೆ ವಾಂಖೇಡೆ ಮೈದಾನ(Wankhede Stadium) ಆರ್‌ಸಿಬಿಗೆ ಅಷ್ಟು ಅದೃಷ್ಟ ತಂದಿಲ್ಲ. ಉಭಯ ತಂಡಗಳಿಗೂ ಜಯದ ಹಳಿಗೆ ಮರಳುವ ಛಲ ಇರುವುದರಿಂದ ರೋಚಕ ಹಣಾಹಣಿಯ ನಿರೀಕ್ಷೆ ಗರಿಗೆದರಿದೆ.
10 ವರ್ಷದಿಂದ ಗೆದ್ದಿಲ್ಲ
ಹೌದು ಆರ್‌ಸಿಬಿ ತಂಡ ಮುಂಬೈನ ವಾಂಖೇಡೆ ಮೈದಾನದಲ್ಲಿ ಕಳೆದ 10 ವರ್ಷಗಳಲ್ಲಿ ಒಂದೂ ಪಂದ್ಯ ಗೆದ್ದಿಲ್ಲ. ಇಲ್ಲಿ ಕೊನೆಯ ಬಾರಿಗೆ ಗೆದ್ದದ್ದು 2015ರಲ್ಲಿ. ಆ ಬಳಿಕ ತಂಡಕ್ಕೆ ಗೆಲುವು ಸಿಕ್ಕಿಲ್ಲ. ಒಟ್ಟಾರೆಯಾಗಿ ವಾಂಖೇಡೆ ಸ್ಟೇಡಿಯಂನಲ್ಲಿ ಮುಂಬೈ ವಿರುದ್ಧ ಆರ್‌ಸಿಬಿ 11 ಪಂದ್ಯಗಳನ್ನಾಡಿ ಕೇವಲ 3 ಗೆಲುವು 8 ಸೋಲು ಕಂಡಿದೆ. ಇತ್ತೀಚೆಗೆ ಬರೋಬ್ಬರಿ 17 ವರ್ಷಗಳ ಬಳಿಕ ಚೆನ್ನೈ ಕ್ರೀಡಾಂಗಣದಲ್ಲಿ ಆರ್‌ಸಿಬಿ ಗೆಲುವಿನ ನಗೆ ಬೀರಿತ್ತು. ಹೀಗಾಗಿ ಇದೀಗ ಮುಂಬೈ ಸವಾಲನ್ನು ಕೂಡ ಗೆಲ್ಲಬಹುದು ಎಂದು ನಿರೀಕ್ಷೆ ಮಾಡಲಾಗಿದೆ. ಅನುಭವಿ ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ನಾಯಕ ರಜತ್ ಅವರು ದೇವದತ್ತ ಪಡಿಕ್ಕಲ್ ತಮ್ಮ ಲಯಕ್ಕೆ ಮರಳಿದರೆ ದೊಡ್ಡ ಮೊತ್ತ ಗಳಿಸುವುದು ಸುಲಭವಾಗಲಿದೆ.
ಇತ್ತಂಡಗಳು ಇದುವರೆಗೆ ಐಪಿಎಲ್‌ನಲ್ಲಿ ಒಟ್ಟು 33 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ಮುಂಬೈ 19 ಪಂದ್ಯ ಗೆದ್ದರೆ, ಆರ್‌ಸಿಬಿ 14 ಪಂದ್ಯ ಜಯಿಸಿದೆ. ಕಳೆದ ಆವೃತ್ತಿಯಲ್ಲಿ ನಡೆದಿದ್ದ ಪಂದ್ಯದಲ್ಲಿ ಮುಂಬೈ ತಂಡ 7 ವಿಕೆಟ್ ಅಂತರದಿಂದ ಗೆದ್ದು ಬೀಗಿತ್ತು. ಈ ಬಾರಿ ಆರ್‌ಸಿಬಿ ಮುಯ್ಯಿ ತೀರಿಸಿಕೊಳ್ಳುವ ತವಕದಲ್ಲಿದೆ.
𝓖𝓻𝓮𝓪𝓽𝓼 of the game in a single frame! 📸🫡
— Royal Challengers Bengaluru (@RCBTweets) April 7, 2025
Good Morning, 12th Man Army! 🫶#PlayBold #ನಮ್ಮRCB #IPL2025 pic.twitter.com/tmPk9KUw1Z
ಸಂಭಾವ್ಯ ತಂಡಗಳು
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ರಿಯಾನ್ ರಿಕಲ್ಟನ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ನಮನ್ ಧೀರ್, ಹಾರ್ದಿಕ್ ಪಾಂಡ್ಯ(ನಾಯಕ), ದೀಪಕ್ ಚಾಹರ್, ಜಸ್‌ಪ್ರೀತ್ ಬುಮ್ರಾ, ಟ್ರೆಂಟ್ ಬೌಲ್ಟ್, ಮಿಚೆಲ್ ಸ್ಯಾಂಟ್ನರ್, ವಿಘ್ನೇಶ್ ಪುತ್ತೂರ್.
ಇದನ್ನೂ ಓದಿ IPL 2025: ಐಪಿಎಲ್‌ನಲ್ಲಿ 100 ವಿಕೆಟ್ ಪೂರ್ತಿಗೊಳಿಸಿದ ಸಿರಾಜ್
ಆರ್‌ಸಿಬಿ: ಫಿಲಿಪ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ತ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ, ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಯಶ್ ದಯಾಲ್.
ಆರಂಭ: ರಾತ್ರಿ 7.30
ನೇರಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಜಿಯೋಹಾಟ್‌ಸ್ಟಾರ್.