Wednesday, 18th September 2024

ಆರ್‌ಸಿಬಿ ಮಹಿಳಾ ತಂಡಕ್ಕೆ ಸಿಎಂ ಸಿದ್ಧರಾಮಯ್ಯ, ಕೊಹ್ಲಿ, ಕ್ರಿಸ್‌ ಗೇಲ್, ದಿನೇಶ್ ಕಾರ್ತಿಕ್ ಅಭಿನಂದನೆ

ವದೆಹಲಿ: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 2024ರ ಮಹಿಳಾ ಪ್ರೀಮಿಯರ್ ಲೀಗ್ ಪ್ರಶಸ್ತಿಯ ಫೈನಲ್‌ನಲ್ಲಿ 8 ಪಂದ್ಯಗಳಿಂದ ಗೆದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೊಚ್ಚಲ ಮುಡಿಗೇರಿಸಿಕೊಂಡಿದೆ.

ಸ್ಮೃತಿ ಮಂಧಾನ ನಾಯಕತ್ವದ ಆರ್‌ಸಿಬಿ ಮಹಿಳಾ ತಂಡವನ್ನು ಸಿಎಂ ಸಿದ್ಧರಾಮಯ್ಯ, ವಿರಾಟ್‌ ಕೊಹ್ಲಿ, ಕ್ರಿಸ್‌ ಗೇಲ್, ದಿನೇಶ್ ಕಾರ್ತಿಕ್ ಸೇರಿದಂತೆ ದಿಗ್ಗಜರು ಅಭಿನಂದನೆ ಸಲ್ಲಿಸಿದ್ದಾರೆ.

ದೆಹಲಿಯ ಅರುಣ್‌ ಜೆಟ್ಲಿ ಕ್ರಿಕೆಟ್‌ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಫೈನಲ್‌ ಪಂದ್ಯ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಸೋಫಿ ಮೊಲಿನಕ್ಸ್‌ (20ಕ್ಕೆ 3) ಹಾಗೂ ಶ್ರೇಯಾಂಕ ಪಾಟೀಲ್‌ (12ಕ್ಕೆ 4) ಅವರ ಪರಿಣಾಮಕಾರಿ ಬೌಲಿಂಗ್‌ನಲ್ಲಿ 18.3ಕ್ಕೆ 113 ರನ್‌ಗಳಿಗೆ ಆಲ್‌ಔಟ್ ಆಯಿತು. ಡೆಲ್ಲಿ ಪರ ಶಫಾಲಿ ವರ್ಮಾ(44) ವೈಯಕ್ತಿಕ ಗರಿಷ್ಠ ಸ್ಕೋರ್‌ ಎನಿಸಿಕೊಂಡರು.

114 ರನ್‌ಗಳ ಗುರಿ ಹಿಂಬಾಲಿಸಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ, ಸೋಫಿ ಡಿವೈನ್‌(32), ಸ್ಮೃತಿ ಮಂಧಾನ(31) ಹಾಗೂ ಎಲಿಸ್‌ ಪೆರಿ(35*) ಅವರ ಬ್ಯಾಟಿಂಗ್‌ ಬಲದಿಂದ 19.3 ಓವರ್ ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ 115 ರನ್‌ ಗಳಿಸಿ ಗೆಲುವಿನ ದಡ ಸೇರಿತು. ಆ ಮೂಲಕ ವುಮೆನ್ಸ್ ಪ್ರೀಮಿಯರ್‌’ ಆರಂಭವಾಗಿ ಎರಡನೇ ಆವೃತ್ತಿಯಲ್ಲಿಯೇ ಆರ್‌ಸಿಬಿ ಚೊಚ್ಚಲ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

ಆರ್‌ಸಿಬಿ ಮಹಿಳಾ ತಂಡ ಚೊಚ್ಚಲ ವುಮೆನ್ಸ್ ಪ್ರೀಮಿಯರ್‌ ಲೀಗ್‌ ಗೆಲ್ಲುತ್ತಿದ್ದಂತೆ ಆರ್‌ಸಿಬಿ ಪುರುಷರ ತಂಡದ ಹಿರಿಯ ಬ್ಯಾಟ್ಸ್‌ಮನ್‌ ವಿರಾಟ್‌ ವಿಡಿಯೋ ಕರೆ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ವಿರಾಟ್‌ ಕೊಹ್ಲಿ ಮಹಿಳಾ ತಂಡದ ಜೊತೆ ಮಾತನಾಡುತ್ತಿರುವ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಬೆಂಗಳೂರು ತಂಡದ ಮಾಜಿ ಸ್ಪಿನ್ನರ್ ಯುಜ್ವೇಂದ್ರ ಚಾಹಲ್‌ “ಆನಂದ..ಪರಮಾನಂದ…ಪರಮಾನಂದ.. ನಮ್ಮ ಆರ್ಸಿಬಿ ತಂಡಕ್ಕೆ ಅಭಿನಂದನೆಗಳು,” ಎಂದು ಟ್ವೀಟ್ ಮಾಡಿದ್ದಾರೆ.

ಇಂದಿನ #TATAWPL ಫೈನಲ್ ಪಂದ್ಯದಲ್ಲಿ ಡೆಲ್ಲಿ ತಂಡವನ್ನು ಮಣಿಸಿ ಆರ್.ಸಿ.ಬಿ ತಂಡ ಚಾಂಪಿಯನ್‌ಶಿಪ್ ಅನ್ನು ಮುಡಿಗೇರಿಸಿಕೊಂಡಿದೆ. ಇಡೀ ಪಂದ್ಯಾಕೂಟದುದ್ದಕ್ಕೂ ಸಂಘಟಿತ ಪ್ರದರ್ಶನ ನೀಡಿರುವ ನಮ್ಮ ಹುಡುಗಿಯರ ಆಟ ಅಭಿನಂದನಾರ್ಹ. ಕ್ರಿಕೆಟ್ ಪ್ರೇಮಿಯಾದ ನನಗೆ ಈ ಗೆಲುವು ಅತ್ಯಂತ ಖುಷಿಕೊಟ್ಟಿದೆ. ಆರ್.ಸಿ.ಬಿ ಅಭಿಮಾನಿಗಳ ದಶಕಗಳ ಕನಸು ಇಂದು ಈಡೇರಿದೆ. ಐಪಿಎಲ್ ನಲ್ಲಿಯೂ ನಮ್ಮ ಹುಡುಗರು ಕಪ್ ಗೆಲ್ಲಲಿ ಎಂಬ ಹಾರೈಕೆ ನನ್ನದು. ಈ ಸಲ ಕಪ್ ನಮ್ದೆ…..ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

Leave a Reply

Your email address will not be published. Required fields are marked *