Friday, 22nd November 2024

ಅಪಘಾತದಲ್ಲಿ ವಿಕೆಟ್ ಕೀಪರ್ ರಿಷಭ್ ಪಂತ್’ಗೆ ಗಂಭೀರ ಗಾಯ

ನವದೆಹಲಿ: ಹಮ್ಮದ್‌ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಶುಕ್ರವಾರ ಬೆಳಗ್ಗೆ ಕಾರೊಂದು ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಭಾರತದ ತಂಡದ ವಿಕೆಟ್ ಕೀಪರ್ ರಿಷಭ್ ಪಂತ್ ಗಂಭೀರ ಗಾಯಗೊಂಡಿದ್ದಾರೆ.

ಉತ್ತರಾಖಂಡದಿಂದ ದೆಹಲಿಗೆ ಹಿಂದಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆನ್ನಲಾಗಿದ್ದು, ಅವರನ್ನು ದೆಹಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರ ಪ್ರಕಾರ, ರಿಷಬ್ ಪಂತ್ ಅವರ ಹಣೆ ಮತ್ತು ಕಾಲಿಗೆ ಗಾಯಗಳಾಗಿವೆ. ಸದ್ಯ ರಿಷಬ್ ಪಂತ್ ಅವರ ಸ್ಥಿತಿ ಸ್ಥಿರವಾಗಿದ್ದು, ಅವರನ್ನು ರೂರ್ಕಿಯಿಂದ ದೆಹಲಿಗೆ ಕಳುಹಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.