Wednesday, 11th December 2024

ರಾಯಭಾರಿಯಾಗಿ ಕ್ರಿಕೆಟ್ ಆಟಗಾರ ರಾಬಿನ್ ಉತ್ತಪ್ಪ ನೇಮಕ

ಬೆಂಗಳೂರು: ಅಂತರಾಷ್ಟ್ರೀಯ ಕ್ರಿಕೆಟ್ ಆಟಗಾರ ರಾಬಿನ್ ಉತ್ತಪ್ಪ ಅವರನ್ನು, ರಾಜ್ಯ ಬ್ರೆನ್ ಹೆಲ್ತ್ ಇನಿಶಿಯೇಟಿವ್ ಮತ್ತು ಮಾನಸಿಕ ಆರೋಗ್ಯ ರಾಯಭಾರಿಯಾಗಿ ಸರ್ಕಾರ ನೇಮಕ ಮಾಡಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಈ ಬಗ್ಗೆ ಆದೇಶ ಹೊರಡಿಸಿದ್ದು, ಬ್ರೆನ್ ಹೆಲ್ತ್ ಇನಿಶಿಯೇಟಿವ್ ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕೇಂದ್ರ ಸರ್ಕಾರದ ನೀತಿ ಆಯೋಗ ಮತ್ತು ನಿಮ್ಹಾನ್ಸ್ ಇವರ ನಡುವಿನ ಸಹಯೋಗದ ಹೊಸ ಕಾರ್ಯಕ್ರಮ ವಾಗಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯಾಧ್ಯಂತ ನಗರಗಳು, ಪಟ್ಟಣಗಳು ಮತ್ತು ದೂರದ ಹಳ್ಳಿಗಳಲ್ಲಿನ ದುರ್ಬಲ ಜನರ ಮೆದುಳು ಮತ್ತು ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಸಾರ್ವತ್ರಿಕವಾಗಿ ಮೆಚ್ಚುಗೆ ಮತ್ತು ವಿಶ್ವಾಸಾರ್ಹವಾಗಿರುವ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕ್ರಿಕೆಟ್ ಆಟಗಾರರಾದ ರಾಬಿನ್ ಉತ್ತಪ್ಪರನ್ನು ಮೆದುಳಿನ ಆರೋಗ್ಯದ ಬಗ್ಗೆ ಅರಿವು ಮೂಡಿಸಲು ಸರ್ಕಾರದ ರಾಯಭಾರಿಯನ್ನಾಗಿ ನೇಮಿಸಿರುವುದಾಗಿ ತಿಳಿಸಿದ್ದಾರೆ.