Rohit Sharma: ಕೊಹ್ಲಿ ಜತೆ ಎಲೈಟ್ ಪಟ್ಟಿ ಸೇರಿದ ರೋಹಿತ್ ಶರ್ಮ
ರೋಹಿತ್ ಶರ್ಮ(Rohit Sharma) ಅವರು ಟಿ20 ಕ್ರಿಕೆಟ್‌ನಲ್ಲಿ ವಿಶೇಷ ಮೈಲುಗಲ್ಲೊಂದನ್ನು ನೆಟ್ಟಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ 12 ಸಾವಿರ ರನ್ ಪೂರೈಸಿದ 2ನೇ ಭಾರತೀಯ ಹಾಗೂ ಒಟ್ಟಾರೆ 8ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಭಾರತೀಯ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ.


ಹೈದರಾಬಾದ್: 9 ವರ್ಷಗಳ ಬಳಿಕ ಐಪಿಎಲ್(IPL 2025)ನಲ್ಲಿ ಸಿಡಿಸಿದ ಸತತ 2ನೇ ಅರ್ಧಶತಕದ ಮೂಲಕ ರೋಹಿತ್ ಶರ್ಮ(Rohit Sharma) ಅವರು ಟಿ20 ಕ್ರಿಕೆಟ್‌ನಲ್ಲಿ ವಿಶೇಷ ಮೈಲುಗಲ್ಲೊಂದನ್ನು ನೆಟ್ಟಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ 12 ಸಾವಿರ ರನ್ ಪೂರೈಸಿದ 2ನೇ ಭಾರತೀಯ ಹಾಗೂ ಒಟ್ಟಾರೆ 8ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಭಾರತೀಯ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ವಿರಾಟ್ ಕೊಹ್ಲಿ (13,208) ರನ್ ಬಾರಿಸಿದ್ದಾರೆ. ವಿಶ್ವ ದಾಖಲೆ ಕ್ರಿಸ್ ಗೇಲ್ (14,562) ಹೆಸರಿನಲ್ಲಿದೆ.
ಚೇಸಿಂಗ್ ವೇಳೆ ಮುಂಬೈ ಪರ ಅಬ್ಬರದ ಬ್ಯಾಟಿಂಗ್ ನಡೆಸಿದ ರೋಹಿತ್ ಶರ್ಮ, 46 ಎಸೆತಗಳಿಂದ 8 ಬೌಂಡರಿ ಮತ್ತು 3 ಸಿಕ್ಸರ್‌ನೊಂದಿಗೆ 70 ರನ್ ಗಳಿಸಿದರು. ಗೆಲುವಿಗೆ 14 ರನ್ ಇದ್ದಾಗ ವಿಕೆಟ್ ಕಳೆದುಕೊಂಡರು. ಅಂತಿಮವಾಗಿ ಸೂರ್ಯಕುಮಾರ್ ಯಾದವ್ 19 ಎಸೆತಗಳಿಂದ ಅಜೇಯ 40 ರನ್ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.
ರಾಜೀವ್ ಗಾಂಧಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಬುಧವಾರ ನಡೆದಿದ್ದ ಈ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಸನ್‌ರೈಸರ್ಸ್ ಹೈದರಾಬಾದ್ ತಂಡ ಟ್ರೆಂಟ್ ಬೌಲ್ಟ್ ಘಾತಕ ದಾಳಿಗೆ ನಲುಗಿ 8 ವಿಕೆಟ್‌ಗೆ 143 ರನ್ ಗಳಿಸಲಷ್ಟೇ ಶಕ್ತವಾಯಿತು. ಜವಾಬಿತ್ತ ಮುಂಬೈ ಇಂಡಿಯನ್ಸ್ ತಂಡ ಈ ಸಾಧಾರಣ ಮೊತ್ತವನ್ನು 15.4 ಓವರ್‌ನಲ್ಲಿ 3 ವಿಕೆಟ್ ನಷ್ಟಕ್ಕೆ 146 ರನ್ ಬಾರಿಸಿ ಗೆಲುವಿನ ನಗೆ ಬೀರಿತು.
No introduction needed 😎#MumbaiIndians #PlayLikeMumbai #TATAIPL #SRHvMIpic.twitter.com/fHwaUBKZ9Z
— Mumbai Indians (@mipaltan) April 23, 2025
ಮುಂಬೈ ಪರ ಕರಾರುವಾಕ್ ಬೌಲಿಂಗ್ ಪ್ರದರ್ಶನ ತೋರಿದ ಎಡಗೈ ವೇಗಿ ಟ್ರೆಂಟ್ ಬೌಲ್ಟ್ 4 ಓವರ್‌ಗಳಿಂದ ಕೇವಲ 26 ರನ್ ನೀಡಿ 4 ವಿಕೆಟ್ ಉರುಳಿಸಿದರು. ಇವರಿಗೆ ಉತ್ತಮ ಸಾಥ್ ನೀಡಿದ ದೀಪಕ್ ಚಹರ್ 12 ರನ್ ವೆಚ್ಚದಲ್ಲಿ 2 ವಿಕೆಟ್ ಉರುಳಿಸಿದರು. ಉಳಿದಂತೆ ಜಸ್‌ಪ್ರೀತ್ ಬುಮ್ರಾ ಮತ್ತು ನಾಯಕ ಹಾರ್ದಿಕ್ ಪಾಂಡ್ಯ ತಲಾ ಒಂದು ವಿಕೆಟ್ ಪಡೆದರು.
𝗦𝗔𝗟𝗔𝗔𝗠 𝗥𝗢𝗛𝗜𝗧 𝗕𝗛𝗔𝗜 🫡🔥#MumbaiIndians #PlayLikeMumbai #TATAIPL #SRHvMI pic.twitter.com/MT6CzBlv9q
— Mumbai Indians (@mipaltan) April 23, 2025
ಜಸ್‌ಪ್ರೀತ್ ಬುಮ್ರಾ ಅವರು ಒಂದು ವಿಕೆಟ್ ಕೀಳುವ ಮೂಲಕ ಟಿ20 ಕ್ರಿಕೆಟ್‌ನಲ್ಲಿ 300 ವಿಕೆಟ್ ಪೂರೈಸಿದ 5ನೇ ಭಾರತೀಯ ಬೌಲರ್ ಎಂಬ ದಾಖಲೆ ನಿರ್ಮಿಸಿದರು. ಈ ಸಾಧನೆ ಮಾತ್ರವಲ್ಲದೆ, ಮುಂಬೈ ಇಂಡಿಯನ್ಸ್ ಪರ ಗರಿಷ್ಠ ವಿಕೆಟ್ ಪಡೆದ ಲಸಿತ್ ಮಾಲಿಂಗ ದಾಖಲೆಯನ್ನು ಕೂಡ ಬುಮ್ರಾ ಸರಿಗಟ್ಟಿದರು. ಉಭಯ ಆಟಗಾರರು ಸದ್ಯ 170 ವಿಕೆಟ್ ಕಿತ್ತಿದ್ದಾರೆ.
ಇದನ್ನೂ ಓದಿ IPL 2025 Points Table: ದ್ವಿತೀಯ ಸ್ಥಾನದಲ್ಲೇ ಮುಂದುವರಿದ ಡೆಲ್ಲಿ ಕ್ಯಾಪಿಟಲ್ಸ್