IND vs ENG: ಇಂಗ್ಲೆಂಡ್ ಟೆಸ್ಟ್ ಸರಣಿಗೆ ರೋಹಿತ್ ಅನುಮಾನ
ಸರಣಿ ಆರಂಭಕ್ಕೂ ಮುನ್ನ ಇಂಗ್ಲೆಂಡ್‌ನಲ್ಲಿ ಭಾರತ ಎ ತಂಡ 3 ಚತುರ್ದಿನ ಪಂದ್ಯಗಳಲ್ಲಿ ಆಡಲಿದೆ. ಈ ತಂಡದೊಂದಿಗೆ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಕೂಡ ತೆರಳಲಿದ್ದಾರೆ ಎನ್ನಲಾಗಿದೆ. ಮುಂಚಿತವಾಗಿಯೇ ಇಂಗ್ಲೆಂಡ್ ಪರಿಸ್ಥಿತಿಯನ್ನು ಅಧ್ಯಯನ ಮಾಡುವುದು, ಮೀಸಲು ಕ್ರಿಕೆಟಿಗರ ಪ್ರತಿಭೆಗಳನ್ನು ತಿಳಿದುಕೊಳ್ಳುವುದು ಗಂಭೀರ್ ಉದ್ದೇಶ ಎನ್ನಲಾಗಿದೆ.


ನವದೆಹಲಿ: 18ನೇ ಆವೃತ್ತಿಯ ಐಪಿಎಲ್ ಟೂರ್ನಿ ಮುಕ್ತಾಯದ ಬೆನ್ನಲ್ಲೇ ಭಾರತ(IND vs ENG) ತಂಡ ಜೂ 20ರಿಂದ ಇಂಗ್ಲೆಂಡ್‌ನಲ್ಲಿ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲಿದೆ. ಈ ಸರಣಿಯಲ್ಲಿ(India’s Test series against England) ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ(Rohit Sharma) ಆಡುವುದು ಅನುಮಾನ ಎನ್ನಲಾಗಿದೆ. ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಕಳಪೆ ಪ್ರದರ್ಶನ ನೀಡಿದ ನಂತರ ರೋಹಿತ್ ಟೆಸ್ಟ್ ಸರಣಿಯಲ್ಲಿ ಆಡದಿರಲು ನಿರ್ಧರಿಸಿದ್ದಾರೆ ಎಂದು ಮೂಲಗಳು ಇಂಡಿಯಾ ಟುಡೇಗೆ ತಿಳಿಸಿವೆ.
ಆದಾಗ್ಯೂ, ವಿರಾಟ್ ಕೊಹ್ಲಿ ಟೆಸ್ಟ್ ತಂಡದಲ್ಲಿ ತಮ್ಮ ಸ್ಥಾನವನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಕೊಹ್ಲಿ ಮತ್ತು ರೋಹಿತ್ ಇಬ್ಬರೂ ಆಸ್ಟ್ರೇಲಿಯಾ ಸರಣಿಯಲ್ಲಿ ಘೋರ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದರು. ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆದ ಹೊಸ ವರ್ಷದ ಟೆಸ್ಟ್‌ನಿಂದ ರೋಹಿತ್ ಹೊರಗುಳಿದಿದ್ದರು. ಆಸೀಸ್ ವಿರುದ್ಧ ಆಡಿದ್ದ ಮೂರು ಪಂದ್ಯಗಳಲ್ಲಿ ರೋಹಿತ್ 6.20 ಸರಾಸರಿಯಲ್ಲಿ ಕೇವಲ 31 ರನ್ ಗಳಿಸಿದ್ದರು.
ಭಾರತದ ಇಂಗ್ಲೆಂಡ್ ಪ್ರವಾಸವು ಜೂನ್ 20 ರಂದು ಲೀಡ್ಸ್‌ನ ಹೆಡಿಂಗ್ಲಿಯಲ್ಲಿ ಆರಂಭಿಕ ಟೆಸ್ಟ್‌ನೊಂದಿಗೆ ಆರಂಭವಾಗಲಿದೆ. ಎಡ್ಜ್‌ಬಾಸ್ಟನ್, ಲಾರ್ಡ್ಸ್, ಓಲ್ಡ್ ಟ್ರಾಫರ್ಡ್ ಮತ್ತು ಕೆನ್ನಿಂಗ್ಟನ್ ಓವಲ್ ಉಳಿದ ನಾಲ್ಕು ಟೆಸ್ಟ್‌ಗಳನ್ನು ಆಯೋಜಿಸಲಿವೆ.
ಸರಣಿ ಆರಂಭಕ್ಕೂ ಮುನ್ನ ಇಂಗ್ಲೆಂಡ್‌ನಲ್ಲಿ ಭಾರತ ಎ ತಂಡ 3 ಚತುರ್ದಿನ ಪಂದ್ಯಗಳಲ್ಲಿ ಆಡಲಿದೆ. ಈ ತಂಡದೊಂದಿಗೆ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಕೂಡ ತೆರಳಲಿದ್ದಾರೆ ಎನ್ನಲಾಗಿದೆ. ಮುಂಚಿತವಾಗಿಯೇ ಇಂಗ್ಲೆಂಡ್ ಪರಿಸ್ಥಿತಿಯನ್ನು ಅಧ್ಯಯನ ಮಾಡುವುದು, ಮೀಸಲು ಕ್ರಿಕೆಟಿಗರ ಪ್ರತಿಭೆಗಳನ್ನು ತಿಳಿದುಕೊಳ್ಳುವುದು ಗಂಭೀರ್ ಉದ್ದೇಶ ಎನ್ನಲಾಗಿದೆ.
ಇದನ್ನೂ ಓದಿ IPL 2025 Points Table: ಕೆಕೆಆರ್ ಗೆಲುವಿನ ಬಳಿಕ ಅಂಕಪಟ್ಟಿ ಹೇಗಿದೆ?
ಮಾರ್ಚ್ 29ಕ್ಕೆ ಬಿಸಿಸಿಐ ಸಭೆ
ಮಾರ್ಚ್ 29 ರ ಶನಿವಾರ ಗುವಾಹಟಿಯಲ್ಲಿ ಬಿಸಿಸಿಐ ಸಭೆ ನಡೆಯಲಿದೆ ಎಂದು ತಿಳಿದುಬಂದಿದೆ. ಈ ಸಭೆಯಲ್ಲಿ ಮುಂಬರುವ ಋತುವಿಗೆ ಕೇಂದ್ರ ಒಪ್ಪಂದ ಪಟ್ಟಿ ಮತ್ತು ಸಂಭಾವ್ಯ ಟೆಸ್ಟ್ ನಾಯಕನನ್ನು ಅಂತಿಮಗೊಳಿಸಲು ಬಿಸಿಸಿಐ ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಜತೆ ಚರ್ಚಿಸಲಿದೆ ಎನ್ನಲಾಗಿದೆ. ಸಭೆಯಯಲ್ಲಿ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಮತ್ತು ಇತರ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.