ಪರ್ತ್: ಆಸ್ಟ್ರೇಲಿಯಾ(AUS ODI series) ವಿರುದ್ಧದ ಏಕದಿನ ಸರಣಿಗಾಗಿ ಬುಧವಾರ ಪರ್ತ್ ತಲಿಪಿರುವ ಟೀಮ್ ಇಂಡಿಯಾ(IND vs AUS) ಆಟಗಾರರು ಇದೀಗ ನೆಟ್ ಅಭ್ಯಾಸದಲ್ಲಿ ನಿರತರಾಗಿದ್ದಾರೆ. 7 ತಿಂಗಳ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮರಳಿರುವ ವಿರಾಟ್ ಕೊಹ್ಲಿ(Virat Kohli) ಮತ್ತು ರೋಹಿತ್ ಶರ್ಮಾ(Rohit Sharma) ಅವರು ಅಕ್ಕ-ಪಕ್ಕದ ನೆಟ್ಸ್‌ನಲ್ಲಿ ದೀರ್ಘ ಕಾಲ ಬ್ಯಾಟಿಂಗ್ ನಡೆಸಿದರು. ಅಭ್ಯಾಸ ನಡೆಸಿದ ಫೋಟೊ ಮತ್ತು ವಿಡಿಯೊಗಳು ವೈರಲ್ ಆಗಿದೆ.
ನಾಯಕ ಶುಭ್ಮನ್ ಗಿಲ್ ಮತ್ತು ಯಶಸ್ವಿ ಜೈಸ್ವಾಲ್ ಸೇರಿದಂತೆ ಹತ್ತು ಆಟಗಾರರು ವಿಶ್ರಾಂತಿ ಪಡೆದರು. ಪ್ರಯಾಣ ಮತ್ತು ವೆಸ್ಟ್ ಇಂಡೀಸ್ ಸರಣಿಯ ಆಯಾಸದಿಂದಾಗಿ, ಅವರು ಪೂಲ್‌ನಲ್ಲಿ ಸಮಯ ಕಳೆದರು. ಫೆಬ್ರವರಿ-ಮಾರ್ಚ್‌ನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ಸಂದರ್ಭದಲ್ಲಿ ಟೀಂ ಇಂಡಿಯಾ ಪರ ಕೊನೆಯದಾಗಿ ಆಡಿದ್ದ ಮಾಜಿ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.
ಕೊಹ್ಲಿ-ರೋಹಿತ್ ಅಭ್ಯಾಸದ ವಿಡಿಯೊ
ರೋಹಿತ್ ಮತ್ತು ಕೊಹ್ಲಿ ನೆಟ್ಸ್‌ನಲ್ಲಿ ಸುಮಾರು 30 ನಿಮಿಷಗಳ ಕಾಲ ತರಬೇತಿ ಪಡೆದರು. ನಂತರ ಕೋಚ್ ಗಂಭೀರ್ ಕೋಚ್ ಅವರೊಂದಿಗೆ ಕೆಲ ಕಾಲ ಚರ್ಚೆಗಳನ್ನು ನಡೆಸಿದರು. ಭಾನುವಾರ ನಡೆಯಲಿರುವ ಮೊದಲ ಏಕದಿನ ಪಂದ್ಯಕ್ಕೂ ಮುನ್ನ ಶುಕ್ರವಾರ ಮತ್ತು ಶನಿವಾರ ಭಾರತೀಯ ಆಟಗಾರರಿಗೆ ತರಬೇತಿ ಅವಧಿ ನಿಗದಿಯಾಗಿದೆ.
ಇದನ್ನೂ ಓದಿ IND vs AUS: ಏಕದಿನ ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸುವ ಆಟಗಾರನನ್ನು ಆರಿಸಿದ ಮೈಕಲ್ ಕ್ಲಾರ್ಕ್!
ಭಾರತ ಏಕದಿನ ತಂಡ
ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಅಕ್ಸರ್ ಪಟೇಲ್, ಕೆಎಲ್ ರಾಹುಲ್ (ವಿ.ಕೀ.), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್. ಸಿರಾಜ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಧ್ರುವ್ ಜುರೆಲ್ (ವಿ.ಕೀ.), ಯಶಸ್ವಿ ಜೈಸ್ವಾಲ್.