ಗೌರಿಬಿದನೂರು: ನಗರದ ನೇತಾಜೀ ಕ್ರೀಡಾಂಗಣದಲ್ಲಿ ಅಮೆಚೂರ್ ರೋಲ್ ಸ್ಕೇಟಿಂಗ್ ಅಸೋಸಿಯೇಷನ್ ವತಿಯಿಂದ ಜಿಲ್ಲಾಮಟ್ಟದ ಪಂದ್ಯಾವಳಿಗಳನ್ನು ಏರ್ಪಡಿಸಲಾಗಿತ್ತು.ಪಂದ್ಯಾವಳಿಗಳಲ್ಲಿ ಒಟ್ಟು ನಲವತೈದು ಕ್ರೀಡಾಪಟುಗಳು ಭಾಗವಹಿಸಿದ್ದರು.
ರೋಲ್ ಸ್ಕೇಟಿಂಗ್ ಪಂದ್ಯಾವಳಿಗೆ ದೀಪಬೆಳಗುವ ಮೂಲಕ ಚಾಲನೆ ನೀಡಿದ ಅಮೆಚೂರ್ ರೋಲ್ ಸ್ಕೇಟಿಂಗ್ ಅಸೋಸಿಯೇಷನ್ ಅಧ್ಯಕ್ಷ ಮಾರ್ಕೆಟ್ ಮೋಹನ್ ಮಕ್ಕಳು ಕ್ರೀಡೆಗಳಲ್ಲಿ ಭಾಗವಹಿಸಿದರೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಡರಾಗುತ್ತಾರೆ. ಪೋಷಕರು ತಮ್ಮ ಮಕ್ಕಳಿಗೆ ಶಿಕ್ಷಣದ ಜೊತೆ ಕ್ರೀಡೆಗಳಲ್ಲಿಯೂ ಭಾಗವಹಿಸಲು ಪ್ರೇರೇಪಿಸಬೇಕೆಂದು ಹೇಳಿದರು.
ಇದೇ ವೇಳೆ ಅಸೋಸಿಯೇಷನ್ ಸಂಸ್ಥಾಪಕ ಚಂದ್ರಶೇಖರ್ ಮಾತನಾಡಿ ಕ್ರೀಡೆ ವಿದ್ಯಾರ್ಥಿಗಳ ಭವಿಷತ್ತಿಗೆೆ ಅಡಿಪಾಯವಾಗಲಿದ್ದು,ಪೋಷಕರು ಕೂಡ ಮಕ್ಕಳಿಗೆ ಈ ನಿಟ್ಟಿನಲ್ಲಿ ಪ್ರೋತ್ಸಾಹಿಸಬೇಕು ಎಂದು ತಿಳಿಸಿದರು.
ಪಂದ್ಯಾವಳಿಗಳು ಮುಕ್ತಾಯವಾದ ನಂತರ ವಿಜೇತರಾದ ಕ್ರೀಡಾಪಟುಗಳಿಗೆ ಪದಕ ಮತ್ತು ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು ಬಹುಮಾನಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ರೋಲ್ ಸ್ಕೇಟಿಂಗ್ ಅಸೋಸಿಯೇಷನ್ ಕಾರ್ಯದರ್ಶಿ ಅರ್ಜುನ್ ನಾಯಕ್,ಖಜಾಂಚಿ ಅರುಣ್ ಕುಮಾರ್, ಸೈ ಗಾಯಸ್ ಸಂಘಟನೆಯ ಸತೀಶ್ ಚವಾನ್,ವಕೀಲರಾದ ಯಾಸಿನ್ ,ಕಬ್ಬಡಿ ತರಬೇತುದಾರ ಮಾರುತಿ ,ಅರುಣ್ ಮತ್ತು ಪೋಷಕರು ಉಪಸ್ಥಿತರಿದ್ದರು.