Friday, 22nd November 2024

ರೂಟ್‌ ದ್ವಿಶತಕ: ಬಳಲಿ ಬೆಂಡಾದ ಭಾರತ

ಚೆನ್ನೈ: ಚೆಪಾಕ್ ಮೈದಾನದಲ್ಲಿ ಭಾರತ ವಿರುದ್ಧ ನಡೆಯುತ್ತಿರುವ ಪ್ರಥಮ ಟೆಸ್ಟ್ ಪಂದ್ಯದಲ್ಲಿ ನಾಯಕ ಜೋ ರೂಟ್ (209*) ಅಮೋಘ ಬ್ಯಾಟಿಂಗ್ ನೆರವಿನಿಂದ ಇಂಗ್ಲೆಂಡ್ ತಂಡ ಎರಡನೇ ದಿನದಾಟದ ಟೀ ವಿರಾಮದ ಹೊತ್ತಿಗೆ 147 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 454 ರನ್ ಪೇರಿಸಿದೆ.

ರೂಟ್‌ಗೆ ಉತ್ತಮ ಬೆಂಬಲ ನೀಡಿದ ಆಲ್ರೌಂಡರ್‌ ಬೆನ್ ಸ್ಟೋಕ್ಸ್ (82) ಆಕರ್ಷಕ ಅರ್ಧಶತಕ ಬಾರಿಸಿದರು. ಬಳಿಕ ಬಂದ ಓಲಿ ಪೋಪ್‌ ಬ್ಯಾಟಿಂಗ್‌ ಮುಂದುವರಿಸಿದ್ದಾರೆ.

ಇದಕ್ಕೂ ಮುನ್ನ ಮೂರು ವಿಕೆಟ್ ನಷ್ಟಕ್ಕೆ 263 ರನ್‌ಗಳಿಂದ ಬ್ಯಾಟಿಂಗ್ ಮುಂದುವರಿಸಿದ ಇಂಗ್ಲೆಂಡ್ ಬ್ಯಾಟ್ಸ್‌ಮನ್‌ಗಳು ಎರಡನೇ ದಿನದಾಟದ ಮೊದಲ ಅವಧಿಯಲ್ಲೂ ಭಾರತೀಯ ಬೌಲರ್‌ಗಳನ್ನು ಕಾಡಿದರು.

100ನೇ ಟೆಸ್ಟ್ ಪಂದ್ಯದಲ್ಲೂ ಸ್ಮರಣೀಯ ಶತಕವನ್ನು ದ್ವಿಶತಕವನ್ನಾಗಿ ಪರಿವರ್ತಿಸಿಕೊಂಡರು. ರೂಟ್ ಕ್ರೀಸಿನಲ್ಲಿ ನೆಲೆಯೂ ರುವ ಮೂಲಕ ಇಂಗ್ಲೆಂಡ್ ತಂಡವನ್ನು ಬೃಹತ್ ಮೊತ್ತದತ್ತ ಮುನ್ನಡೆಸಿದ್ದಾರೆ. ಸ್ಟೋಕ್ಸ್‌ ಹೊಸಬ ನದೀಮ್‌ಗೆ ವಿಕೆಟ್‌ ಒಪ್ಪಿಸಿ ದರು.

ರೂಟ್, 100ನೇ ಪಂದ್ಯದಲ್ಲಿ 150 ರನ್‌ಗಳ ಗಡಿ ದಾಟಿದರು. ಈ ಮೂಲಕ ಸತತ ಮೂರನೇ ಪಂದ್ಯದಲ್ಲೂ 150ಕ್ಕೂ ಹೆಚ್ಚು ರನ್‌ಗಳ ಸಾಧನೆ ಮಾಡಿದರು. 98 ಹಾಗೂ 99ನೇ ಟೆಸ್ಟ್ ಪಂದ್ಯಗಳಲ್ಲೂ ಜೋ ರೂಟ್ ಶತಕೋತ್ತರ ಶತಕಾರ್ಧದ ಸಾಧನೆ ಮಾಡಿದರು.

ಒಂದೇ ಒಂದು ವಿಕೆಟ್ ಕಬಳಿಸುವಲ್ಲಿ ಭಾರತೀಯ ಬೌಲರ್‌ಗಳು ಯಶಸ್ವಿಯಾಗಲಿಲ್ಲ. ಅಲ್ಲದೆ ಈ ಅವಧಿಯಲ್ಲಿ 92 ರನ್‌ಗಳು ಹರಿದುಬಂದಿದ್ದವು.