RCB vs KKR: ಇಂದು ಆರ್‌ಸಿಬಿ-ಕೆಕೆಆರ್ ಸೆಣಸಾಟ; ಪಂದ್ಯಕ್ಕೆ ಮಳೆ ಭೀತಿ
ಪಂದ್ಯ ನಡೆಯುವ ಶನಿವಾರದಂದು ಸಂಜೆ ಬೆಂಗಳೂರಲ್ಲಿ ಭಾರೀ ಮಳೆ ಮುನ್ಸೂಚನೆ ಇದ್ದು, ಪಂದ್ಯಕ್ಕೆ ಅಡ್ಡಿಪಡಿಸುವ ಸಾಧ್ಯತೆ ಇದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಬ್-ಏರ್ ವ್ಯವಸ್ಥೆ ಇರುವ ಕಾರಣ, ಮಳೆ ನಿಂತ 20 ನಿಮಿಷದಲ್ಲಿ ಆಟ ಆರಂಭಿಸಬಹುದಾಗಿದೆ.


ಬೆಂಗಳೂರು: ಶನಿವಾರ ಇಲ್ಲಿನ ಚಿನ್ನಸ್ವಾಮಿ(M. Chinnaswamy) ಕ್ರೀಡಾಂಗಣದಲ್ಲಿ ಪ್ಲೇ ಆಫ್ ಸನಿಹದಲ್ಲಿ ನಿಂತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB vs KKR) ತಂಡ ಕೋಲ್ಕತಾ ನೈಟ್‌ರೈಡರ್ಸ್ ವಿರುದ್ಧ ಸೆಣಸಲಿದೆ. ಆದರೆ ಈ ಪಂದ್ಯ ಬಹುತೇಕ ನಡೆಯುವುದು ಅನುಮಾನ ಎನ್ನುವಂತಿದೆ. ಪಂದ್ಯಕ್ಕೆ ಹವಾಮಾನ ಇಲಾಖೆ ಭಾರೀ ಮಳೆ ಮುನ್ಸೂಚನೆ ನೀಡಿದೆ.
ಕೆಕೆಆರ್ ವಿರುದ್ಧ ಗೆದ್ದಿಲ್ಲ ಆರ್‌ಸಿಬಿ!
ತವರಿನಲ್ಲಿ ಕೆಕೆಆರ್ ವಿರುದ್ಧ ಆರ್‌ಸಿಬಿ ಕಳಪೆ ದಾಖಲೆ ಹೊಂದಿದೆ. ತಂಡ ಕೊನೆಯ ಬಾರಿಗೆ ಕೆಕೆಆರ್ ವಿರುದ್ಧ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗೆದ್ದಿದ್ದು 2015ರಲ್ಲಿ. ಆ ಬಳಿಕ 5 ಪಂದ್ಯಗಳಲ್ಲಿ ಸೋಲುಂಡಿದೆ.
ಪಂದ್ಯ ನಡೆಯುವ ಶನಿವಾರದಂದು ಸಂಜೆ ಬೆಂಗಳೂರಲ್ಲಿ ಭಾರೀ ಮಳೆ ಮುನ್ಸೂಚನೆ ಇದ್ದು, ಪಂದ್ಯಕ್ಕೆ ಅಡ್ಡಿಪಡಿಸುವ ಸಾಧ್ಯತೆ ಇದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಬ್-ಏರ್ ವ್ಯವಸ್ಥೆ ಇರುವ ಕಾರಣ, ಮಳೆ ನಿಂತ 20 ನಿಮಿಷದಲ್ಲಿ ಆಟ ಆರಂಭಿಸಬಹುದಾಗಿದೆ. ಆದರೆ ಮಳೆ ಪದೇಪದೆ ಅಡ್ಡಿಪಡಿಸುವ ಸಾಧ್ಯತೆ ಇದೆ. ಪಂದ್ಯ ರದ್ದಾದರೆ ಉಭಯ ತಂಡಗಳಿಗೂ ತಲಾ ಒಂದು ಅಂಕ ಸಿಗಲಿದೆ. ಈ ಒಂದು ಅಂಕದಿಂದ ಆರ್‌ಸಿಬಿ ನೇರವಾಗಿ ಪ್ಲೇಆಫ್ ಪ್ರವೇಶಿಸಲಿದೆ.
ಟೆಸ್ಟ್ ಕ್ರಿಕೆಟ್‌ಗೆ ಸೋಮವಾರ ದಿಢೀರ್ ನಿವೃತ್ತಿ ಘೋಷಿಸಿದ ಬಳಿಕ ವಿರಾಟ್ ಕೊಹ್ಲಿ ಇದೇ ಮೊದಲ ಬಾರಿಗೆ ಪಂದ್ಯವಾಡಲಿದ್ದು, ಅವರ ಆಟ ನೋಡಲು ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಮೈದಾನಕ್ಕೆ ಬರುವ ನಿರೀಕ್ಷೆ ಇದೆ. ಕೈಬೆರಳಿನ ಗಾಯಕ್ಕೆ ತುತ್ತಾಗಿದ್ದ ನಾಯಕ ರಜತ್ ಪಾಟೀದಾರ್ ಚೇತರಿಸಿಕೊಂಡಿದ್ದು, ಈ ಪಂದ್ಯದಲ್ಲಿ ಆಡುವುದು ಬಹುತೇಕ ಖಚಿತ.
ಇದನ್ನೂ ಓದಿ IPL 2025: ಐಪಿಎಲ್ ಉಳಿದ ಪಂದ್ಯ ಆಡದಂತೆ ವಿದೇಶಿ ಆಟಗಾರರಿಗೆ ಮನವಿ ಮಾಡಿದ ಆಸೀಸ್ ವೇಗಿ
ಸಂಭಾವ್ಯ ತಂಡಗಳು
ಆರ್‌ಸಿಬಿ: ಸಾಲ್ಟ್, ಕೊಹ್ಲಿ, ಮಯಾಂಕ್, ಪಾಟೀದಾರ್ (ನಾಯಕ), ಜಿತೇಶ್, ಶೆಫರ್ಡ್, ಡೇವಿಡ್, ಕೃನಾಲ್, ಭುವನೇಶ್ವರ್, ಯಶ್ ದಯಾಳ್, ಲುಂಗಿ ಎನ್‌ಗಿಡಿ, ಸುಯಶ್ ಶರ್ಮಾ.
ಕೆಕೆಆರ್: ನರೈನ್, ಗುರ್ಬಾಜ್, ರಹಾನೆ (ನಾಯಕ), ವೆಂಕಿ ಅಯ್ಯರ್, ರಘುವಂಶಿ/ಪಾಂಡೆ, ರಿಂಕು, ರಸೆಲ್, ರಮಣ್‌ದೀಪ್, ವೈಭವ್, ರಾಣಾ, ವರುಣ್, ನೋಕಿಯ/ಸ್ಪೆನ್ಸರ್.
ಪಂದ್ಯ ಆರಂಭ: ಸಂಜೆ 7.30ಕ್ಕೆ,
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಜಿಯೋ ಹಾಟ್‌ಸ್ಟಾರ್