ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

RR vs CSK: ರಾಜಸ್ಥಾನ್‌ vs ಚೆನ್ನೈ ಪಂದ್ಯದ ಸಂಭಾವ್ಯ ಆಡುವ ಬಳಗ, ಪಿಚ್‌ ರಿಪೋರ್ಟ್‌ ಹೀಗಿದೆ

IPL 2026: ಪಂದ್ಯದ ದಿನದಂದು ಬರ್ಸಾಪರದಲ್ಲಿ ಮೋಡ ಕವಿದ ವಾತಾವರಣವಿದ್ದು, ತಾಪಮಾನ 19 ರಿಂದ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರಲಿದೆ. ಗಂಟೆಗೆ 6-10 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು ಮಳೆ ಪಂದ್ಯಕ್ಕೆ ಅಡ್ಡಿಯಾಗುವ ನಿರೀಕ್ಷೆಯಿದೆ. ಒಂದೊಮ್ಮೆ ಮಳೆಯಿಂದ ಪಂದ್ಯ ರದ್ದಾದರೆ ಉಭಯ ತಂಡಗಳಿಗೂ ತಲಾ ಒಂದು ಅಂಕ ನೀಡಲಾಗುತ್ತದೆ.

barsapara pitch report

ಗುವಾಹಟಿ, ಮಾ.29: ಮಾಜಿ ಚಾಂಪಿಯನ್‌ಗಳಾದ ರಾಜಸ್ಥಾನ್‌ ರಾಯಲ್ಸ್‌(RR vs CSK) ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಗಳು 19ನೇ ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲಿ ತಮ್ಮ ಅಭಿಯಾನ ಆರಂಭಿಸಲು ಸಜ್ಜಾಗಿವೆ. ಇತ್ತಂಡಗಳ ಪಂದ್ಯ ಸೋಮವಾರ(ಮಾ.30) ಬರ್ಸಾಪರ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯದ ಪಿಚ್‌ ರಿಪೋರ್ಟ್‌(RR vs CSK Match Pitch Report), ಹವಾಮಾನ ವರದಿ ಮತ್ತು ಸಂಭಾವ್ಯ ಆಡುವ ಬಳಗದ ಮಾಹಿತಿ ಇಲ್ಲಿದೆ.

ಪಿಚ್‌ ರಿಪೋರ್ಟ್‌

ಬರ್ಸಾಪರ ಕ್ರಿಕೆಟ್ ಕ್ರೀಡಾಂಗಣದ ಪಿಚ್‌ ಬ್ಯಾಟಿಂಗ್‌ ಸ್ನೇಹಿಯಾಗಿದ್ದು ಚೇಸಿಂಗ್‌ ನಡೆಸುವ ತಂಡಕ್ಕೆ ಹೆಚ್ಚು ಸಹಕಾರಿ. ಇಲ್ಲಿ ರಾತ್ರಿಯ ವೇಳೆ ಇಬ್ಬನಿ ಸಮಸ್ಯೆ ಇರುವುದರಿಂದ ಚೇಸಿಂಗ್‌ ನಡೆಸಲು ಅನುಕೂಲಕರವಾಗಿದೆ. ಬೌಲರ್‌ಗಳು ಮೊದಲ ಇನಿಂಗ್ಸ್‌ನಲ್ಲಿ ಕೊಂಚ ಹಿಡಿತ ಸಾಧಿಸಿದ್ದರೂ ದ್ವಿತೀಯ ಇನಿಂಗ್ಸ್‌ನಲ್ಲಿ ಇಬ್ಬನಿ ಕಾಟದಿಂದ ದಂಡಿಸಿಕೊಳ್ಳಲಿದ್ದಾರೆ. 2023ರಲ್ಲಿ ಈ ಮೈದಾನದಲ್ಲಿ ಆಸ್ಟ್ರೇಲಿಯಾ ವಿರುದ್ಧದ ಟಿ20ಯಲ್ಲಿ ಋತುರಾಜ್‌ ಗಾಯಕ್ವಾಡ್‌ ಶತಕ ಬಾರಿಸಿ ಮಿಂಚಿದ್ದರು.

RR vs CSK: ರಾಜಸ್ಥಾನ್‌ ರಾಯಲ್ಸ್‌ಗೆ ಸವಾಲೊಡ್ಡಿತೇ ಚೆನ್ನೈ ಸೂಪರ್‌ ಕಿಂಗ್ಸ್‌?

ಹವಾಮಾನ ವರದಿ

ಪಂದ್ಯದ ದಿನದಂದು ಬರ್ಸಾಪರದಲ್ಲಿ ಮೋಡ ಕವಿದ ವಾತಾವರಣವಿದ್ದು, ತಾಪಮಾನ 19 ರಿಂದ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರಲಿದೆ. ಗಂಟೆಗೆ 6-10 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು ಮಳೆ ಪಂದ್ಯಕ್ಕೆ ಅಡ್ಡಿಯಾಗುವ ನಿರೀಕ್ಷೆಯಿದೆ. ಒಂದೊಮ್ಮೆ ಮಳೆಯಿಂದ ಪಂದ್ಯ ರದ್ದಾದರೆ ಉಭಯ ತಂಡಗಳಿಗೂ ತಲಾ ಒಂದು ಅಂಕ ನೀಡಲಾಗುತ್ತದೆ.

ಬಲಾಬಲ

ಉಭಯ ತಂಡಗಳ ಐಪಿಎಲ್‌ ಮುಖಾಮುಖಿ ದಾಖಲೆ ನೋಡುವುದಾದರೆ ಈವರೆಗೆ 32 ಬಾರಿ ಸೆಣೆಸಾಟ ನಡೆಸಿದ್ದು ಎರಡೂ ತಂಡಗಳೂ ತಲಾ 16 ಪಂದ್ಯಗಳನ್ನು ಜಯಿಸಿದೆ. ಹೀಗಾಗಿ ಈ ಬಾರಿಯ ಮುಖಾಮುಖಿಯೂ ತೀವ್ರ ಪೈಪೋಟಿಯಿಂದ ಕೂಡಿರುವ ನಿರೀಕ್ಷೆ ಅಭಿಮಾನಿಗಳದ್ದು.

ಸಂಭಾವ್ಯ ಆಡುವ ಬಳಗ

ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ವೈಭವ್ ಸೂರ್ಯವಂಶಿ, ರಿಯಾನ್ ಪರಾಗ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ಧ್ರುವ್ ಜುರೆಲ್ (ವಿ.ಕೀ.), ರವೀಂದ್ರ ಜಡೇಜಾ, ದಸುನ್ ಶನಕಾ, ಜೋಫ್ರಾ ಆರ್ಚರ್, ಸಂದೀಪ್ ಶರ್ಮಾ, ರವಿ ಬಿಷ್ಣೋಯ್, ಆಡಮ್ ಮಿಲ್ನೆ.

ಇಂಪ್ಯಾಕ್ಟ್‌ ಆಟಗಾರ: ಅಮನ್ ರಾವ್

ಚೆನ್ನೈ ಸೂಪರ್ ಕಿಂಗ್ಸ್

ಸಂಜು ಸ್ಯಾಮ್ಸನ್ (ವಿ.ಕೀ.), ರುತುರಾಜ್ ಗಾಯಕ್ವಾಡ್ (ನಾಯಕ), ಆಯುಷ್ ಮ್ಹಾತ್ರೆ, ಡೆವಾಲ್ಡ್ ಬ್ರೆವಿಸ್, ಶಿವಂ ದುಬೆ, ಪ್ರಶಾಂತ್ ವೀರ್, ಜೇಮಿ ಓವರ್ಟನ್, ಅನ್ಶುಲ್ ಕಾಂಬೋಜ್, ರಾಹುಲ್ ಚಾಹರ್, ನೂರ್ ಅಹ್ಮದ್, ಖಲೀಲ್ ಅಹ್ಮದ್.

ಇಂಪ್ಯಾಕ್ಟ್ ಆಟಗಾರ: ಕಾರ್ತಿಕ್ ಶರ್ಮಾ.