RR vs GT: ಐಪಿಎಲ್‌ಗೆ ಪದಾರ್ಪಣೆ ಮಾಡಿ ದಾಖಲೆ ಬರೆದ ಕರೀಮ್ ಜನ್ನತ್
IPL 2025: 26 ವರ್ಷದ ಕರೀಮ್ ಜನ್ನತ್ ಇದುವರೆಗೆ 160 ಟಿ20 ಪಂದ್ಯಗಳಲ್ಲಿ, 22.67 ರ ಸರಾಸರಿಯಲ್ಲಿ 2494 ರನ್ ಗಳಿಸಿದ್ದಾರೆ. ಇದರಲ್ಲಿ ಎರಡು ಶತಕಗಳು ಮತ್ತು ಒಂಬತ್ತು ಅರ್ಧಶತಕಗಳಿವೆ. 7.82 ರ ಎಕಾನಮಿ ದರದಲ್ಲಿ ಬೌಲಿಂಗ್ ನಡೆಸಿ 118 ವಿಕೆಟ್‌ಗಳನ್ನು ಸಹ ಪಡೆದಿದ್ದಾರೆ.


ಜೈಪುರ: ರಾಜಸ್ಥಾನ್ ರಾಯಲ್ಸ್(RR vs GT) ವಿರುದ್ಧದ ಸೋಮವಾರದ ಐಪಿಎಲ್(IPL 2025) ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ಪರ ಆಡಲಿಳಿದ ಕರೀಮ್ ಜನ್ನತ್(Karim Janat) ಐಪಿಎಲ್‌ಗೆ ಪದಾರ್ಪಣೆ ಮಾಡಿದರು. ಈ ಮೂಲಕ ಐಪಿಎಲ್‌ನಲ್ಲಿ ಆಡಿದ ಅಫ್ಘಾನಿಸ್ತಾನದ 10 ನೇ ಕ್ರಿಕೆಟಿಗ ಎನಿಸಿಕೊಂಡರು. ಉಳಿದವರೆಂದರೆ ರಶೀದ್ ಖಾನ್, ಮುಜೀಬ್ ಉರ್ ರಹಮಾನ್, ಫಜಲ್ಹಕ್ ಫಾರೂಕಿ, ರಹಮಾನುಲ್ಲಾ ಗುರ್ಬಾಜ್, ಅಜ್ಮತುಲ್ಲಾ ಒಮರ್ಜಾಯ್, ಮೊಹಮ್ಮದ್ ನಬಿ, ನೂರ್ ಅಹ್ಮದ್, ಗುಲ್ಬದಿನ್ ನೈಬ್, ನವೀನ್-ಉಲ್-ಹಕ್.
ಕಳೆದ ವರ್ಷ ನವೆಂಬರ್‌ನಲ್ಲಿ ನಡೆದಿದ್ದ ಮೆಗಾ ಹರಾಜಿನಲ್ಲಿ ಟೈಟಾನ್ಸ್ ತಂಡ ಕರೀಮ್ ಜನ್ನತ್ ಅವರನ್ನು 75 ಲಕ್ಷ ರೂ.ಗೆ ಖರೀದಿಸಿತ್ತು. 26 ವರ್ಷದ ಕರೀಮ್ ಜನ್ನತ್ ಇದುವರೆಗೆ 160 ಟಿ20 ಪಂದ್ಯಗಳಲ್ಲಿ, 22.67 ರ ಸರಾಸರಿಯಲ್ಲಿ 2494 ರನ್ ಗಳಿಸಿದ್ದಾರೆ. ಇದರಲ್ಲಿ ಎರಡು ಶತಕಗಳು ಮತ್ತು ಒಂಬತ್ತು ಅರ್ಧಶತಕಗಳಿವೆ. 7.82 ರ ಎಕಾನಮಿ ದರದಲ್ಲಿ ಬೌಲಿಂಗ್ ನಡೆಸಿ 118 ವಿಕೆಟ್‌ಗಳನ್ನು ಸಹ ಪಡೆದಿದ್ದಾರೆ.
Received his debut cap from Rashid Bhai - a moment to cherish for Karim! 🥹🧢 pic.twitter.com/czknFJGqK9
— Gujarat Titans (@gujarat_titans) April 28, 2025
ಡಿಸೆಂಬರ್ 2016 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಜನ್ನತ್ ಅಫ್ಘಾನಿಸ್ತಾನದ ಪರ ಎರಡು ಟೆಸ್ಟ್, ಮೂರು ಏಕದಿನ ಮತ್ತು 67 ಟಿ20 ಪಂದ್ಯಗಳಲ್ಲಿ ಆಡಿದ್ದಾರೆ.
ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ಮೊದಲು ಬೌಲಿಂಗ್ ಆಯ್ದುಕೊಂಡಿತು. ಬ್ಯಾಟಿಂಗ್‌ಗೆ ಇಳಸಲ್ಪಟ್ಟ ಗುಜರಾತ್ ಉತ್ತಮ ರನ್ ಕಲೆ ಹಾಕುತ್ತಿದೆ. ಆರಂಭಿಕ ಆಟಗಾರ ಸಾಯಿ ಸುದರ್ಶನ್ 27 ರನ್ ಬಾರಿಸುತ್ತಿದ್ದಂತೆ ವಿರಾಟ್ ಕೊಹ್ಲಿ(443) ಯನ್ನು ಹಿಂದಿಕ್ಕಿ ಮತ್ತೆ ಆರೆಂಜ್ ಕ್ಯಾಪ್ ತಮ್ಮದಾಗಿಸಿಕೊಂಡರು.
ಇದನ್ನೂ ಓದಿ IPL 2025: ಗೆಲುವಿನೊಂದಿಗೆ ದಾಖಲೆ ಬರೆದ ರಜತ್ ಪಾಟೀದಾರ್
ಉಭಯ ಆಡುವ ಬಳಗ
ಗುಜರಾತ್ ಟೈಟಾನ್ಸ್: ಸಾಯಿ ಸುದರ್ಶನ್, ಶುಭಮನ್ ಗಿಲ್ (ನಾಯಕ), ಜೋಸ್ ಬಟ್ಲರ್ (ವಿ.ಕೀ), ವಾಷಿಂಗ್ಟನ್ ಸುಂದರ್, ಶಾರುಖ್ ಖಾನ್, ರಾಹುಲ್ ತೆವಾಟಿಯಾ, ಕರೀಂ ಜನತ್, ರಶೀದ್ ಖಾನ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.
ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ವೈಭವ್ ಸೂರ್ಯವಂಶಿ, ನಿತೀಶ್ ರಾಣಾ, ರಿಯಾನ್ ಪರಾಗ್(ನಾಯಕ), ಧ್ರುವ್ ಜುರೆಲ್(ವಿ.ಕೀ.), ಶಿಮ್ರಾನ್ ಹೆಟ್ಮೆಯರ್, ವನಿಂದು ಹಸರಂಗ, ಜೋಫ್ರಾ ಆರ್ಚರ್, ಮಹೇಶ್ ತೀಕ್ಷಣ, ಸಂದೀಪ್ ಶರ್ಮಾ, ಯುಧ್ವೀರ್ ಸಿಂಗ್ ಚರಕ್.