ಚೆನ್ನೈ: ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ ರಾಯಲ್ಸ್ ನಡುವಿನ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಹೈದರಾಬಾದ್ ತಂಡ ರಾಜಸ್ಥಾನಕ್ಕೆ 176 ರನ್‌ಗಳ ಗೆಲುವಿನ ಗುರಿ ನೀಡಿದೆ.
ಇಲ್ಲಿನ ಚಿಪಾಕ್ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದೆ. ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಸನ್‌ರೈಸರ್ಸ್ ಹೈದರಾಬಾದ್ ಮೊದಲು ಬ್ಯಾಟ್ ಮಾಡಿತು.
ಸನ್‌ರೈಸರ್ಸ್ ಹೈದರಾಬಾದ್ ತಂಡ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 175 ರನ್ ಪೇರಿಸಿತು. ರಾಜಸ್ಥಾನ ಈ ಪಂದ್ಯ ಗೆಲ್ಲಬೇಕಾದರೆ 176 ರನ್ ಹೊಡೆಯಬೇಕಿದೆ.
ಹೈದರಾಬಾದ್‌ನ ರಾಹುಲ್ ತ್ರಿಪಾಠಿ 37, ಹೆಡ್ 34, ಕ್ಲಾಸಿನ್ 50 ರನ್ ಹೊಡೆದು ಗಮನ ಸೆಳೆದರು. ರಾಜಸ್ಥಾನ ಪರ ಬೌಲ್ಟ್, ಅವೇಶ್ ಖಾನ್ ತಲಾ 3 ವಿಕೆಟ್ ಪಡೆದರು.