S Sreesanth Suspend: ಸುಳ್ಳು ಆರೋಪ, ಮಾಜಿ ವೇಗಿ ಶ್ರೀಶಾಂತ್ 3 ವರ್ಷ ಅಮಾನತು
ವಿಜಯ್ ಹಜಾರೆ ಟ್ರೋಫಿಗೆ ಕೇರಳ ತಂಡದಿಂದ ಸ್ಯಾಮ್ಸನ್ ಅವರನ್ನು ಕೈಬಿಟ್ಟ ಕಾರಣದಿಂದ ಸಂಜುಗೆ ಚಾಂಪಿಯನ್ಸ್ ಟ್ರೋಫಿ ಆಡುವ ಅವಕಾಶ ಸಿಗಲಿಲ್ಲ. ಕೆಸಿಎ ಇಲ್ಲಿನ ಕ್ರಿಕೆಟಿಗರಿಗೆ ಯಾವುದೇ ಬೆಂಬಲ ನೀಡುವುದಿಲ್ಲ ಎಂದು ಶ್ರೀಶಾಂತ್ ಹೇಳಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಕೆಸಿಎ ಇದೀಗ ಶ್ರೀಶಾಂತ್ ಅವರನ್ನು ಮೂರು ವರ್ಷಗಳ ಕಾಲ ಅಮಾನತುಗೊಳಿಸಿದೆ.


ತಿರುವನಂತಪುರಂ: ಸುಳ್ಳು ಮತ್ತು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಭಾರತ ಕ್ರಿಕೆಟ್ ತಂಡದ ಮಾಜಿ ವೇಗಿ ಎಸ್. ಶ್ರೀಶಾಂತ್( S Sreesanth) ಅವರನ್ನು ಕೇರಳ ಕ್ರಿಕೆಟ್ ಸಂಸ್ಥೆ (ಕೆಸಿಎ) ಮೂರು ವರ್ಷಗಳ ಕಾಲ ಅಮಾನತುಗೊಳಿಸಿದೆ(S Sreesanth Suspend). ಚಾಂಪಿಯನ್ಸ್ ಟ್ರೋಫಿ ವೇಳೆ ಭಾರತೀಯ ತಂಡದಿಂದ ಸಂಜು ಸ್ಯಾಮ್ಸನ್ ಅವರನ್ನು ಕೈಬಿಟ್ಟ ವಿವಾದಕ್ಕೆ ಸಂಬಂಧಿಸಿದಂತೆ ಈ ಕ್ರಮ ಕೈಗೊಳ್ಳಲಾಗಿದೆ. ಕೊಚ್ಚಿಯಲ್ಲಿ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೆಸಿಎ(KCA) ಹೇಳಿಕೆಯಲ್ಲಿ ತಿಳಿಸಿದೆ. ಶ್ರೀಶಾಂತ್ ಪ್ರಸ್ತುತ ಕೇರಳ ಕ್ರಿಕೆಟ್ ಲೀಗ್‌ನ ಫ್ರಾಂಚೈಸಿ ತಂಡವಾದ ಕೊಲ್ಲಂ ಏರೀಸ್‌ನ ಸಹ-ಮಾಲೀಕರಾಗಿದ್ದಾರೆ.
ಶ್ರೀಶಾಂತ್ ಅವರು ಕೇರಳದ ಸ್ಥಳೀಯ ಮಾಧ್ಯಮ ನಡೆಸಿದ್ದ ಸಂದರ್ಶನವೊಂದರಲ್ಲಿ ಮಾತನಾಡುವ ವೇಳೆ ಸಂಜು ಸ್ಯಾಮ್ಸನ್ ಅವರು ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಆಯ್ಕೆಯಾಗದಿರಲು ಕೆಸಿಎ ನೇರ ಕಾರಣ ಎಂದಿದ್ದರು. ವಿಜಯ್ ಹಜಾರೆ ಟ್ರೋಫಿಗೆ ಕೇರಳ ತಂಡದಿಂದ ಸ್ಯಾಮ್ಸನ್ ಅವರನ್ನು ಕೈಬಿಟ್ಟ ಕಾರಣದಿಂದ ಸಂಜುಗೆ ಚಾಂಪಿಯನ್ಸ್ ಟ್ರೋಫಿ ಆಡುವ ಅವಕಾಶ ಸಿಗಲಿಲ್ಲ. ಕೆಸಿಎ ಇಲ್ಲಿನ ಕ್ರಿಕೆಟಿಗರಿಗೆ ಯಾವುದೇ ಬೆಂಬಲ ನೀಡುವುದಿಲ್ಲ ಎಂದು ಶ್ರೀಶಾಂತ್ ಹೇಳಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಕೆಸಿಎ ಇದೀಗ ಶ್ರೀಶಾಂತ್ ಅವರನ್ನು ಮೂರು ವರ್ಷಗಳ ಕಾಲ ಅಮಾನತುಗೊಳಿಸಿದೆ.
ಇದನ್ನೂ ಓದಿ IPL 2025: ಆರ್‌ಸಿಬಿ, ಮುಂಬೈಗೆ ಒಂದೇ ಹೆಜ್ಜೆ ಬಾಕಿ-8 ತಂಡಗಳ ಐಪಿಎಲ್ ಪ್ಲೇಆಫ್ಸ್ ಲೆಕ್ಕಾಚಾರ!
ಈ ಹಿಂದೆ, ಶ್ರೀಶಾಂತ್ ವಿವಾದಾತ್ಮಕ ಹೇಳಿಕೆಗಳಿಗೆ ಸಂಬಂಧಿಸಿದಂತೆ, ಶ್ರೀಶಾಂತ್ ಜತೆಗೆ ಫ್ರಾಂಚೈಸ್ ತಂಡಗಳಾದ ಕೊಲ್ಲಂ ಏರೀಸ್, ಅಲಪ್ಪುಳ ಟೀಮ್ ಲೀಡ್ ಮತ್ತು ಅಲಪ್ಪುಳ ರಿಪ್ಪಲ್ಸ್‌ಗೆ ಶೋ-ಕಾಸ್ ನೋಟಿಸ್ ನೀಡಲಾಗಿತ್ತು.
"ಫ್ರಾಂಚೈಸ್ ತಂಡಗಳು ನೋಟಿಸ್‌ಗಳಿಗೆ ತೃಪ್ತಿದಾಯಕ ಪ್ರತಿಕ್ರಿಯೆಗಳನ್ನು ನೀಡಿರುವುದರಿಂದ, ಅವರ ವಿರುದ್ಧ ಯಾವುದೇ ಮುಂದಿನ ಕ್ರಮ ಕೈಗೊಳ್ಳಲಾಗುವುದಿಲ್ಲ. ಆದಾಗ್ಯೂ, ತಂಡದ ನಿರ್ವಹಣೆಗೆ ಸದಸ್ಯರನ್ನು ನೇಮಿಸುವಾಗ ಹೆಚ್ಚಿನ ಎಚ್ಚರಿಕೆ ವಹಿಸಲು ಸಲಹೆ ನೀಡಲು ಸಭೆ ನಿರ್ಧರಿಸಿದೆ" ಎಂದು ಹೇಳಿಕೆ ತಿಳಿಸಿದೆ.