IPL 2025: ಐಪಿಎಲ್ ನೀತಿ ಸಂಹಿತೆ ಉಲ್ಲಂಘನೆ; ಸಂಜು ಸ್ಯಾಮ್ಸನ್‌ಗೆ 24 ಲಕ್ಷ ರೂ. ದಂಡ
Sanju Samson: ಒಂದೊಮ್ಮೆ ರಾಜಸ್ಥಾನ್ ಮೂರನೇ ಬಾರಿಗೆ ಈ ತಪ್ಪನ್ನು ಮಾಡಿದರೆ ನಾಯಕರಿಗೆ ದಂಡ ವಿಧಿಸಿ, 1 ಡಿಮೆರಿಟ್ ಅಂಕ ನೀಡಲಾಗುತ್ತದೆ. ಡಿಮೆರಿಟ್ ಅಂಕದ ಅವಧಿ 3 ವರ್ಷ ಇರಲಿದ್ದು, ಈ ಅವಧಿಯಲ್ಲಿ 4 ಡಿಮೆರಿಟ್ ಅಂಕ ಪಡೆದರೆ ನಾಯಕನಿಗೆ ಪಂದ್ಯದ ಸಂಭಾವನೆಯ ಶೇ.100ರಷ್ಟು ದಂಡ ವಿಧಿಸಲಾಗುತ್ತದೆ.
 
                                -
 Abhilash BC
                            
                                Apr 10, 2025 10:11 AM
                                
                                Abhilash BC
                            
                                Apr 10, 2025 10:11 AM
                            ಅಹಮದಾಬಾದ್: ಐಪಿಎಲ್(IPL 2025)ನ 23ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್(Rajasthan Royals) ತಂಡ ಗುಜರಾತ್ ಟೈಟಾನ್ಸ್(Gujarat Titans) ವಿರುದ್ಧ 58 ರನ್‌ಗಳ ಹೀನಾಯ ಸೋಲು ಅನುಭವಿಸಿದ ಬೆನ್ನಲ್ಲೇ ನಿಧಾನಗತಿಯ ಬೌಲಿಂಗ್ ನಡೆಸಿದ್ದಕ್ಕಾಗಿ ರಾಜಸ್ಥಾನ್ ತಂಡದ ನಾಯಕ ಸಂಜು ಸ್ಯಾಮ್ಸನ್(Sanju Samson)ಗೆ ಬರೋಬ್ಬರಿ 24 ಲಕ್ಷ ರೂ. ದಂಡ ವಿಧಿಸಲಾಗಿದೆ. ಇದು ಪ್ರಸಕ್ತ ಋತುವಿನಲ್ಲಿ ರಾಜಸ್ಥಾನ್ ತಂಡದ ಎರಡನೇ ನಿಧಾನಗತಿಯ ಓವರ್ ಪ್ರಕರಣವಾಗಿದೆ. ಹೀಗಾಗಿ ದಂಡದ ಮೊತ್ತ ದ್ವಿಗುಣಗೊಂಡಿತು. ಜತೆಗೆ ತಂಡದ ಇನ್ನುಳಿದ ಆಟಗಾರರಿಗೆ ತಲಾ 6 ಲಕ್ಷ ರೂ. ಅಥವಾ ಪಂದ್ಯ ಶುಲ್ಕದ ಶೇ. 25ರಷ್ಟು ದಂಡವನ್ನು ವಿಧಿಸಲಾಗಿದೆ ಎಂದು ಐಪಿಎಲ್ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
ಇದಕ್ಕೂ ಮೊದಲು, ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ಪಂದ್ಯದಲ್ಲಿ ರಾಜಸ್ಥಾನ್ ನಿಧಾನಗತಿಯ ಬೌಲಿಂಗ್ ನಡೆಸಿದ್ದಕ್ಕಾಗಿ ಹಂಗಾಮಿ ನಾಯಕ ರಿಯಾನ್ ಪರಾಗ್‌ಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿತ್ತು.
ಇದನ್ನೂ ಓದಿ IPL 2025: ಕೊಹ್ಲಿ ಬಳಿಕ ಆರ್‌ಸಿಬಿ ಪರ ವಿಶೇಷ ದಾಖಲೆ ಬರೆಯಲು ಸಜ್ಜಾದ ಪಾಟೀದಾರ್
ಒಂದೊಮ್ಮೆ ರಾಜಸ್ಥಾನ್ ಮೂರನೇ ಬಾರಿಗೆ ಈ ತಪ್ಪನ್ನು ಮಾಡಿದರೆ ನಾಯಕರಿಗೆ ದಂಡ ವಿಧಿಸಿ, 1 ಡಿಮೆರಿಟ್ ಅಂಕ ನೀಡಲಾಗುತ್ತದೆ. ಡಿಮೆರಿಟ್ ಅಂಕದ ಅವಧಿ 3 ವರ್ಷ ಇರಲಿದ್ದು, ಈ ಅವಧಿಯಲ್ಲಿ 4 ಡಿಮೆರಿಟ್ ಅಂಕ ಪಡೆದರೆ ನಾಯಕನಿಗೆ ಪಂದ್ಯದ ಸಂಭಾವನೆಯ ಶೇ.100ರಷ್ಟು ದಂಡ ವಿಧಿಸಲಾಗುತ್ತದೆ.
Sanju Samson fined 24 Lakhs for maintaining slow overrate. #IPL2025 #SanjuSamson pic.twitter.com/7kmSwx5sTG
— Meer Ki Ghazal (@gazal_ki) April 10, 2025
ಬುಧವಾರ ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡ, ಸಾಯಿ ಸುದರ್ಶನ್ ( 82) ಅವರ ಸ್ಪೋಟಕ ಬ್ಯಾಟಿಂಗ್ ಬಲದಿಂದ 6 ವಿಕೆಟ್ ನಷ್ಟಕ್ಕೆ 217 ರನ್‌ಗಳನ್ನು ಕಲೆ ಹಾಕಿತು. ಗುರಿ ಬೆನ್ನಟಿದ ರಾಜಸ್ಥಾನ್ 19.2 ಓವರ್‌ಗಳಲ್ಲಿ 159 ರನ್‌ಗೆ ಆಲೌಟ್ ಆಯಿತು. ರಾಜಸ್ಥಾನ್ ಪರ ಸಂಜು 41, ಶಿಮ್ರಾನ್ ಹೆಟ್‌ಮೈರ್ 52 ಮತ್ತು ರಿಯಾನ್ ಪರಾಗ್ 26 ರನ್ ಗಳಿಸಿದರು.
 
            