ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

JSCA: ಜಾರ್ಖಂಡ್‌ ಕ್ರಿಕೆಟ್‌ ಮಂಡಳಿಗೆ ಆಯ್ಕೆಯಾದ ತಿವಾರಿ, ನದೀಮ್

35 ವರ್ಷದ ತಿವಾರಿ 2010 ರಲ್ಲಿ ವಿಶಾಖಪಟ್ಟಣದಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದರು. ಭಾರತ ಪರ ಮೂರು ಏಕದಿನ ಪಂದ್ಯಗಳನ್ನು ಆಡಿದ್ದರೆ. 35 ವರ್ಷದ ನದೀಮ್ ಭಾರತ ಎರಡು ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ.

ಜಾರ್ಖಂಡ್‌ ಕ್ರಿಕೆಟ್‌ ಮಂಡಳಿಗೆ ಆಯ್ಕೆಯಾದ ತಿವಾರಿ, ನದೀಮ್

Profile Abhilash BC May 20, 2025 1:24 PM

ರಾಂಚಿ: ಭಾರತದ ಮಾಜಿ ಕ್ರಿಕೆಟಿಗರಾದ ಸೌರಭ್ ತಿವಾರಿ(Saurabh Tiwary) ಮತ್ತು ಶಹಬಾಜ್ ನದೀಮ್(Shahbaz Nadeem) ಜಾರ್ಖಂಡ್ ರಾಜ್ಯ ಕ್ರಿಕೆಟ್ ಸಂಸ್ಥೆಯ (JSCA) ಕಾರ್ಯದರ್ಶಿ ಮತ್ತು ಜಂಟಿ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಉಭಯ ಆಟಗಾರರು ಕಳೆದ ವರ್ಷ(2024) ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು.

ಹೊಸ ಸಮಿತಿಗೆ ನಡೆದ ಚುನಾವಣೆಯಲ್ಲಿ ತಿವಾರಿ ತಮ್ಮ ಎದುರಾಳಿ ಎಸ್‌ಬಿ ಸಿಂಗ್ ಅವರನ್ನು 438-194 ಅಂತರದಿಂದ ಸೋಲಿಸಿದರೆ, ನದೀಮ್ ಅವರು ರಾಜ್ ಕುಮಾರ್ ಶರ್ಮಾ ವಿರುದ್ಧ 409-199 ಅಂತರದಲ್ಲಿ ಗೆಲುವು ಸಾಧಿಸಿದರು. ಅಧ್ಯಕ್ಷ ಹುದ್ದೆಗೆ ನಡೆದ ಚುನಾವಣೆಯಲ್ಲಿ ಅಜಯ್ ನಾಥ್ ಶಹದೇವ್ ಅವರು ಎಸ್‌ಕೆ ಬೆಹ್ರಾ ಅವರನ್ನು 421-213 ಅಂತರದಿಂದ ಸೋಲಿಸಿದರು. ಉಪಾಧ್ಯಕ್ಷ ಹುದ್ದೆಗೆ ನಡೆದ ಚುನಾವಣೆಯಲ್ಲಿ ಸಂಜಯ್ ಪಾಂಡೆ ಅವರು ನಂದು ಪಟೇಲ್ ಅವರನ್ನು 381-235 ಅಂತರದಿಂದ ಮಣಿಸಿದರು.

35 ವರ್ಷದ ತಿವಾರಿ 2010 ರಲ್ಲಿ ವಿಶಾಖಪಟ್ಟಣದಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದರು. ಭಾರತ ಪರ ಮೂರು ಏಕದಿನ ಪಂದ್ಯಗಳನ್ನು ಆಡಿದ್ದರೆ. 35 ವರ್ಷದ ನದೀಮ್ ಭಾರತ ಎರಡು ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ.

ಇದನ್ನೂ ಓದಿ IPL 2025 Exit: ಪ್ಲೇ ಆಫ್‌ನಿಂದ 5 ತಂಡ ಔಟ್‌; ಉಳಿದ ಒಂದು ಸ್ಥಾನಕ್ಕೆ 2 ತಂಡಗಳ ಮಧ್ಯೆ ಫೈಟ್‌

ಏಷ್ಯಾ ಕಪ್‌ ಟೂರ್ನಿಯಿಂದ ಭಾರತ ಹಿಂದೆ ಸರಿದಿಲ್ಲ

ಮುಂಬರುವ ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾ ಕಪ್ ಮತ್ತು 2025ರ ಪುರುಷರ ಏಷ್ಯಾ ಕಪ್‌ ಟೂರ್ನಿಯಿಂದ ಭಾರತ ಹಿಂದೆ ಸರಿದಿದೆ(Asia Cup Participation) ಎಂಬ ವರದಿಗಳನ್ನು ಬಿಸಿಸಿಐ (ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ) ಕಾರ್ಯದರ್ಶಿ ದೇವಜಿತ್ ಸೈಕಿಯಾ(Devajit Saikia) ತಳ್ಳಿಹಾಕಿದ್ದಾರೆ. ಇಂತಹ ಯಾವುದೇ ವದಂತಿ ನಂಬಬೇಡಿ ಎಂದಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ, ಭಾರತ ಏಷ್ಯಾ ಕಪ್‌ನಿಂದ ಹಿಂದೆ ಸರಿದಿದೆ ಎನ್ನುವ ಸುದ್ದಿಗಳು ಸತ್ಯಕ್ಕೆ ದೂರವಾಗಿದೆ. ಮುಂಬರುವ ಕಾರ್ಯಕ್ರಮಗಳ ಕುರಿತು ಬಿಸಿಸಿಐ(BCCI) ಇನ್ನೂ ಎಸಿಸಿ (ಏಷ್ಯನ್ ಕ್ರಿಕೆಟ್ ಕೌನ್ಸಿಲ್) ಜತೆ ಯಾವುದೇ ಚರ್ಚೆ ನಡೆಸಿಲ್ಲ" ಎಂದು ಹೇಳಿದ್ದಾರೆ.