Friday, 22nd November 2024

ಟೀಮ್ ಇಂಡಿಯಾ ಜಿಂಬಾಬ್ವೆ ವಿರುದ್ದ ಸರಣಿ: ವೇಳಾಪಟ್ಟಿ ಪ್ರಕಟ

ಮುಂಬೈ: ಭಾರತ-ವೆಸ್ಟ್ ಇಂಡೀಸ್ ನಡುವಣ ಸೀಮಿತ ಓವರ್​ಗಳ ಸರಣಿ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ಜಿಂಬಾಬ್ವೆ ವಿರುದ್ದ ಸರಣಿ ಆಡಲಿದೆ.

ಏಷ್ಯಾಕಪ್​ ಗೂ ಮುನ್ನ ಟೀಮ್ ಇಂಡಿಯಾ ಜಿಂಬಾಬ್ವೆ ಪ್ರವಾಸ ಕೈಗೊಳ್ಳ ಲಿದ್ದು, ಈ ಸರಣಿಯ ವೇಳಾಪಟ್ಟಿ ಪ್ರಕಟವಾಗಿದೆ. ಭಾರತ ತಂಡವು 6 ವರ್ಷಗಳ ಬಳಿಕ ಜಿಂಬಾಬ್ವೆ ವಿರುದ್ದ ಸರಣಿ ಆಡಲು ತೆರಳುತ್ತಿದೆ. ಆದರೆ ಈ ಸರಣಿಯಿಂದ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ. ಹೀಗಾಗಿ ತಂಡವನ್ನು ಕೆಎಲ್ ರಾಹುಲ್ ಮುನ್ನಡೆಸುವ ನಿರೀಕ್ಷೆಯಿದೆ.

ಸರಣಿಯು ಐಸಿಸಿ ವಿಶ್ವಕಪ್ ಸೂಪರ್ ಲೀಗ್‌ನ ಭಾಗವಾಗಿದ್ದು, ಪಂದ್ಯಗಳು ಜಿಂಬಾಬ್ವೆ ಪಾಲಿಗೆ ಬಹಳ ಮಹತ್ವದ್ದಾಗಿದೆ. ಏಕೆಂದರೆ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಹೆಚ್ಚಿನ ಅಂಕಗಳನ್ನು ಪಡೆದರೆ, ಮುಂದಿನ ವರ್ಷ ಭಾರತದಲ್ಲಿ ನಡೆಯಲಿರುವ 50-ಓವರ್‌ಗಳ ವಿಶ್ವಕಪ್‌ಗೆ ನೇರ ಅರ್ಹತೆ ಪಡೆಯಬಹುದು.

ಮಹೇಂದ್ರ ಸಿಂಗ್ ಧೋನಿ ನೇತೃತ್ವದ ತಂಡವು 2016 ರಲ್ಲಿ ಮೂರು ಏಕದಿನ ಮತ್ತು 3 ಟಿ20 ಪಂದ್ಯಗಳನ್ನು ಆಡಿತ್ತು. ಈ ಎರಡೂ ಸರಣಿಯಲ್ಲಿ ಭಾರತ ತಂಡ ಭರ್ಜರಿ ಗೆಲುವು ದಾಖಲಿಸಿತ್ತು.

ಭಾರತ-ಜಿಂಬಾಬ್ವೆ ಸರಣಿ ವೇಳಾಪಟ್ಟಿ 

  • ಆಗಸ್ಟ್​ 18- ಮೊದಲ ಏಕದಿನ ಪಂದ್ಯ
  • ಆಗಸ್ಟ್ 20- ಎರಡನೇ ಏಕದಿನ ಪಂದ್ಯ
  • ಆಗಸ್ಟ್ 22- ಮೂರನೇ ಏಕದಿನ ಪಂದ್ಯ

ಎಲ್ಲಾ ಪಂದ್ಯಗಳು ಹರಾರೆಯ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ. ಸರಣಿಗೂ ಮುನ್ನ ಭಾರತ ತಂಡವು ವೆಸ್ಟ್ ಇಂಡೀಸ್ ವಿರುದ್ದ 3 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನು ಆಡಲಿದೆ.

ವೆಸ್ಟ್ ಇಂಡೀಸ್ ವಿರುದ್ದದ ಸರಣಿಯ ವೇಳಾಪಟ್ಟಿ ಹೀಗಿದೆ:

ಏಕದಿನ ಸರಣಿ ವೇಳಾಪಟ್ಟಿ:

  • ಜು.22- ಮೊದಲ ಏಕದಿನ ಪಂದ್ಯ (ಕ್ವೀನ್ಸ್ ಪಾರ್ಕ್​ ಓವಲ್)
  • ಜು.24- 2ನೇ ಏಕದಿನ ಪಂದ್ಯ (ಕ್ವೀನ್ಸ್ ಪಾರ್ಕ್​ ಓವಲ್)
  • ಜು.27- 3ನೇ ಏಕದಿನ ಪಂದ್ಯ (ಕ್ವೀನ್ಸ್ ಪಾರ್ಕ್​ ಓವಲ್)

ಟಿ20 ಸರಣಿ ವೇಳಾಪಟ್ಟಿ:

  • ಜು.29 – ಮೊದಲ ಟಿ20 ಪಂದ್ಯ (ಲಾರಾ ಕ್ರಿಕೆಟ್ ಸ್ಟೇಡಿಯಂ)
  • ಆಗಸ್ಟ್ 1​- 2ನೇ ಟಿ20 ಪಂದ್ಯ (ವಾರ್ನರ್ ಪಾರ್ಕ್ ಸ್ಟೇಡಿಯಂ)
  • ಆಗಸ್ಟ್​ 2- 3ನೇ ಟಿ20 ಪಂದ್ಯ (ವಾರ್ನರ್ ಪಾರ್ಕ್)
  • ಆಗಸ್ಟ್​ 6- 4ನೇ ಟಿ20 ಪಂದ್ಯ (ಕೌಂಟಿ ಕ್ರಿಕೆಟ್ ಸ್ಟೇಡಿಯಂ)
  • ಆಗಸ್ಟ್ 7- 5ನೇ ಟಿ20 ಪಂದ್ಯ (ಕೌಂಟಿ ಕ್ರಿಕೆಟ್ ಸ್ಟೇಡಿಯಂ)