Sunday, 15th December 2024

2ನೇ ಟಿ20 ಪಂದ್ಯಕ್ಕೆ ವಿರಾಟ್‌ ಕೊಹ್ಲಿ

ಇಂಧೋರ್‌: ಆತಿಥೇಯ ಭಾರತ ಹಾಗೂ ಪ್ರವಾಸಿ ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ 2ನೇ ಪಂದ್ಯ ಜ.14ರಂದು ಇಂಧೋರ್‌ ನಲ್ಲಿ ನಡೆಯಲಿದೆ.

ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿರುವ ಭಾರತ, 2ನೇ ಪಂದ್ಯವನ್ನು ಗೆದ್ದು ಸರಣಿ ವಶಪಡಿಸಿಕೊಳ್ಳುವ ಲೆಕ್ಕಾಚಾರದಲ್ಲಿದೆ. ಮೊದಲ ಪಂದ್ಯದಿಂದ ಹೊರ ಗುಳಿದಿದ್ದ ಟೀಂ ಇಂಡಿಯಾದ ಬ್ಯಾಟರ್‌ ವಿರಾಟ್‌ ಕೊಹ್ಲಿ, 2ನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ.

ಇದಕ್ಕಾಗಿ ಈಗಾಗಲೇ ಇಂಧೋರ್‌ ತಲುಪಿರುವ ಕಿಂಗ್‌ ಕೊಹ್ಲಿ, ಕೆಲವು ಗಂಟೆಗಳ ಕಾಲ ನೆಟ್ಸ್‌ನಲ್ಲಿ ಅಭ್ಯಾಸ ಕೂಡ ನಡೆಸಿದ್ದಾರೆ. ಭಾರತ ತಂಡದ ಪ್ರಮುಖ ಬ್ಯಾಟಿಂಗ್‌ ಅಸ್ತ್ರ ಕೊಹ್ಲಿ, 14 ತಿಂಗಳ ಬಳಿಕ ಟಿ20 ಪಂದ್ಯದಲ್ಲಿ ಕಣಕ್ಕಿಳಿಯುತ್ತಿದ್ದಾರೆ.

ಭಾರತ ತಂಡ: ರೋಹಿತ್ ಶರ್ಮಾ(ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ಶಿವಂ ದುಬೆ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರಿಂಕು ಸಿಂಗ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಮುಕೇಶ್ ಕುಮಾರ್​​, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್, ಅವೇಶ್ ಖಾನ್, ಕುಲ್ದೀಪ್ ಯಾದವ್.