ಕರ್ನಾಟಕ ಬಜೆಟ್​ ಮಹಿಳಾ ದಿನಾಚರಣೆ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Champions Trophy 2025: ಭಾರತ ತಂಡವನ್ನು ಅಭಿನಂದಿಸಿದ ಪಾಕ್‌ ವೇಗಿ

Shoaib Akhtar: ಫೈನಲ್‌ ಪಂದ್ಯಕ್ಕೆ ಹಾಜರಾಗದ ಪಾಕಿಸ್ತಾನ ಕ್ರಿಕೆಟ್‌ ಮಂಡಳಿಯ ವಿರುದ್ಧ ಅಖ್ತರ್‌ ಆಕ್ರೋಶ ಹೊರ ಹಾಕಿದ್ದಾರೆ. ಟೂರ್ನಿಯ ಆತಿಥ್ಯ ವಹಿಸಿದ ಪಾಕಿಸ್ತಾನ ಕ್ರಿಕೆಟ್‌ ಮಂಡಳಿಯ ಒಬ್ಬರು ಸದಸ್ಯರಾದರೂ ನ್ಯೂಜಿಲೆಂಡ್ ತಂಡವನ್ನು ಸೋಲಿಸಿದ ಭಾರತಕ್ಕೆ ಟ್ರೋಫಿಯನ್ನು ಹಸ್ತಾಂತರಿಸುವ ವೇಳೆ ಪಿಸಿಬಿಯ ಪ್ರತಿನಿಧಿಯೊಬ್ಬರು ಹಾಜರಿರಬೇಕಿತ್ತು ಎಂದು ಅಖ್ತರ್ ಹೇಳಿದ್ದಾರೆ.

ಭಾರತ ತಂಡವನ್ನು ಅಭಿನಂದಿಸಿದ ಪಾಕ್‌ ಕ್ರಿಕೆಟಿಗ

Profile Abhilash BC Mar 10, 2025 11:15 AM

ನವದೆಹಲಿ: ನ್ಯೂಜಿಲೆಂಡ್ ತಂಡವನ್ನು ಮಣಿಸಿ ಚಾಂಪಿಯನ್ಸ್ ಟ್ರೋಫಿ(Champions Trophy 2025) ಎತ್ತಿಹಿಡಿದ ಭಾರತ(IND vs NZ Final) ತಂಡಕ್ಕೆ ಪ್ರಶಂಸೆಗಳ ಮಹಾಪೂರವೇ ಹರಿದುಬರುತ್ತಿವೆ. ಭಾರತದ ಬದ್ಧ ಎದುರಾಳಿ ಪಾಕಿಸ್ತಾನದ ಮಾಜಿ ವೇಗಿ ಶೋಯೆಬ್‌ ಅಖ್ತರ್‌(Shoaib Akhtar) ಕೂಡ ಭಾರತ ತಂಡದ ಸಾಧನೆಗೆ ಮೆಚ್ಚುಗೆ ಸೂಚಿಸಿದ್ದಾರೆ. ವಿಡಿಯೊ ಮೂಲಕ ಅಭಿನಂದಿಸಿದ ಅಖ್ತರ್‌, ಭಾರತಕ್ಕೆ ಅರ್ಹ ಗೆಲುವು ಸಿಕ್ಕಿದೆ ಎಂದಿದ್ದಾರೆ. ಅಖ್ತರ್‌ ಮಾತ್ರವಲ್ಲದೆ ಸಿನಿ ತಾರೆಯರು, ಮಾಜಿ ಕ್ರಿಕೆಟಿಗರು ಸೇರಿ ಹಲವರು ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಅಭಿನಂದಿದ್ದಾರೆ.

'ಭಾರತಕ್ಕೆ ಅರ್ಹ ಗೆಲುವು ಸಿಕ್ಕಿದೆ. ಕಳೆದ ವರ್ಷ ಟಿ20 ವಿಶ್ವಕಪ್, ಈ ವರ್ಷ ಚಾಂಪಿಯನ್ಸ್ ಟ್ರೋಫಿ ಗೆದ್ದು ಭಾರತ ತಂಡ ಕಮಾಲ್ ಮಾಡಿದೆ. ವಿರಾಟ್‌ ಕೊಹ್ಲಿ, ರೋಹಿತ್ ಶರ್ಮ ಫಾರ್ಮ್‌ಗೆ ಮರಳಿದ್ದು ತಂಡದ ಯಶಸ್ಸಿಗೆ ಮುಖ್ಯ ಕಾರಣ. ಟೂರ್ನಿಯುದ್ದಕ್ಕೂ ನೀವು ತಂಡ ತೋರಿದ ಪ್ರದರ್ಶನ ಅದ್ಭುತವಾಗಿತ್ತು' ಎಂದು ಅಖ್ತರ್‌ ಮೆಚ್ಚುಗೆ ಸೂಚಿಸಿದ್ದಾರೆ. ಪಾಕ್‌ ಆಟಗಾರನಾಗಿದ್ದರೂ ಕೂಡ ಅಖ್ತರ್‌ ಈ ಹಿಂದೆಯೂ ಭಾರತ ತಂಡ ಗೆದ್ದಾಗ ಅಭಿನಂದಿಸಿದ್ದಾರೆ. ಕಳೆದ ವರ್ಷ ಟಿ20 ವಿಶ್ವಕಪ್‌ ಗೆದ್ದಾಗಲೂ ಕೂಡ ಭಗವದ್ಗೀತೆಯ ಶ್ಲೋಕವೊಂದನ್ನು ಪೋಸ್ಟ್‌ ಮಾಡುವ ಮೂಲಕ ರೋಹಿತ್‌ ಪಡೆಗೆ ಪ್ರಶಂಸೆ ವ್ಯಕ್ತಪಡಿಸಿದ್ದರು.

ಅಖ್ತರ್‌ ಮೆಚ್ಚುಗೆಯ ವಿಡಿಯೊ ಇಲ್ಲಿದೆ



ಫೈನಲ್‌ ಪಂದ್ಯಕ್ಕೆ ಹಾಜರಾಗದ ಪಾಕಿಸ್ತಾನ ಕ್ರಿಕೆಟ್‌ ಮಂಡಳಿಯ ವಿರುದ್ಧ ಅಖ್ತರ್‌ ಆಕ್ರೋಶ ಹೊರ ಹಾಕಿದ್ದಾರೆ. ಟೂರ್ನಿಯ ಆತಿಥ್ಯ ವಹಿಸಿದ ಪಾಕಿಸ್ತಾನ ಕ್ರಿಕೆಟ್‌ ಮಂಡಳಿಯ ಒಬ್ಬರು ಸದಸ್ಯರಾದರೂ ನ್ಯೂಜಿಲೆಂಡ್ ತಂಡವನ್ನು ಸೋಲಿಸಿದ ಭಾರತಕ್ಕೆ ಟ್ರೋಫಿಯನ್ನು ಹಸ್ತಾಂತರಿಸುವ ವೇಳೆ ಪಿಸಿಬಿಯ ಪ್ರತಿನಿಧಿಯೊಬ್ಬರು ಹಾಜರಿರಬೇಕಿತ್ತು ಎಂದು ಅಖ್ತರ್ ಹೇಳಿದ್ದಾರೆ.

ಇದನ್ನೂ ಓದಿ IND vs NZ Final: ಚಾಂಪಿಯನ್‌ ಟ್ರೋಫಿ ಗೆದ್ದ ಭಾರತ ತಂಡವನ್ನು ಅಭಿನಂದಿಸಿದ ಮೋದಿ, ಸಿದ್ದರಾಮಯ್ಯ

ಭಾನುವಾರ ನಡೆದಿದ್ದ ಫೈನಲ್‌ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ನಡೆಸಿದ ನ್ಯೂಜಿಲೆಂಡ್, ಡೆರಿಲ್ ಮಿಚೆಲ್ (63 ರನ್, 101 ಎಸೆತ, 3 ಬೌಂಡರಿ) ಹಾಗೂ ಮಿಚೆಲ್ ಬ್ರೇಸ್‌ವೆಲ್ (53* ರನ್, 40 ಎಸೆತ, 3 ಬೌಂಡರಿ, 2 ಸಿಕ್ಸರ್) ಅರ್ಧಶತಕಗಳ ನೆರವಿನಿಂದ ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್‌ಗೆ 251 ರನ್‌ಗಳ ಮೊತ್ತ ಕಲೆಹಾಕಿತು. ಗುರಿ ಬೆನ್ನಟ್ಟಿದ ಭಾರತ ರೋಹಿತ್ ಶರ್ಮ(76) ಅವರ ಅರ್ಧಶತಕ ಮತ್ತು ಕೊನೆಯಲ್ಲಿ ಕನ್ನಡಿಗ ಕೆ.ಎಲ್ ರಾಹುಲ್ (34* ರನ್, 33 ಎಸೆತ, 1 ಬೌಂಡರಿ, 1 ಸಿಕ್ಸರ್) ಉಪಯುಕ್ತ ಆಟದ ನೆರವಿನಿಂದ 49 ಓವರ್‌ಗಳಲ್ಲಿ 6 ವಿಕೆಟ್‌ಗೆ 254 ಭಾರತಕ್ಕೆ ಗೆಲುವು ತಂದುಕೊಟ್ಟರು.