ಕರ್ನಾಟಕ ಬಜೆಟ್​ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಚಾಂಪಿಯನ್ಸ್‌ ಟ್ರೋಫಿಗೂ ಮುನ್ನ ಭಾರತಕ್ಕೆ ಎಚ್ಚರಿಕೆ ನೀಡಿದ ಪಾಕ್‌ ಮಾಜಿ ವೇಗಿ

IND vs PAK: ಭಾರತ ಮತ್ತು ಪಾಕಿಸ್ತಾನ ನಡುವಣ ಹೈವೋಲ್ಟೇಜ್ ಪಂದ್ಯದ ಟಿಕೆಟ್‌ಗಳು ಈಗಾಗಲೇ ಸೋಲ್ಡ್‌ ಔಟ್‌ ಆಗಿದೆ. ಮಾರಾಟ ಆರಂಭಿಸಿದ ಒಂದೇ ಗಂಟೆಯಲ್ಲಿ ಖಾಲಿಯಾಗಿತ್ತು. ಫೆಬ್ರವರಿ 19ರಂದು ಹಾಲಿ ಚಾಂಪಿಯನ್​ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್​ ತಂಡಗಳು ಕರಾಚಿಯಲ್ಲಿ ಕಣಕ್ಕಿಳಿಯುವ ಮೂಲಕ ಪಂದ್ಯಾವಳಿಗೆ ಚಾಲನೆ ಸಿಗಲಿದೆ.

ಚಾಂಪಿಯನ್ಸ್‌ ಟ್ರೋಫಿಗೂ ಮುನ್ನ ಭಾರತಕ್ಕೆ ಪಾಕ್‌ ಮಾಜಿ ವೇಗಿ ಎಚ್ಚರಿಕೆ

shoaib akhtar

Profile Abhilash BC Feb 7, 2025 1:22 PM

ಕರಾಚಿ: ಕ್ರಿಕೆಟ್‌ ಅಭಿಮಾನಿಗಳು ಬಹುನಿರೀಕ್ಷೆಯಿಂದ ಕಾದು ಕುಳಿತಿರುವ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ(IND vs PAK) ನಡುವಣ ಚಾಂಪಿಯನ್ಸ್‌ ಟ್ರೋಫಿಯ(Champions Trophy) ಪಂದ್ಯ ಫೆ.23 ರಂದು ನಡೆಯಲಿದೆ. ಈ ಪಂದ್ಯ ಆರಂಭಕ್ಕೂ ಮುನ್ನವೇ ಪಾಕಿಸ್ತಾನದ ಮಾಜಿ ವೇಗಿ ಶೋಯೆಬ್ ಅಖ್ತರ್(Shoaib Akhtar) ಪಂದ್ಯದ ಭವಿಷ್ಯ ನುಡಿದಿದ್ದಾರೆ. ದುಬೈನಲ್ಲಿ ಪಾಕಿಸ್ತಾನ ತಂಡ ಭಾರತವನ್ನು ಸೋಲಿಸುವುದು ಖಚಿತ ಎಂದಿದ್ದಾರೆ. ಇದು ಮಾತ್ರವಲ್ಲದೆ ಇತ್ತಂಡಗಳು ಫೈನಲ್‌ನಲ್ಲಿಯೂ ಮುಖಾಮುಖಿಯಾಗಬೇಕೆಂದು ಇಚ್ಛಿಸುತ್ತೇನೆ ಎಂದಿದ್ದಾರೆ.

'ಭಾರತ ಮತ್ತು ಪಾಕಿಸ್ತಾನ ತಂಡಗಳು 2017ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್‌ನಲ್ಲಿ ಮುಖಾಮುಖಿಯಾಗಿತ್ತು. ಈ ವೇಳೆ ಪಾಕ್‌ ತಂಡ ಭಾರತ ವಿರುದ್ಧ 180 ರನ್‌ ಅಂತರದಿಂದ ಗೆದ್ದು ಚಾಂಪಿಯನ್‌ ಆಗಿತ್ತು. ಇದು ಮತ್ತೆ ಮರುಕಳಿಸಲಿದೆ' ಎಂದು ಅಖ್ತರ್‌ ಹೇಳಿದರು.

ಯಾವೆಲ್ಲ ತಂಡಗಳು ಸೆಮಿಫೈನಲ್‌ ಪ್ರವೇಶಿಸಲಿದೆ ಎಂಬ ಬಗ್ಗೆಯೂ ಅಭಿಪ್ರಾಯ ವ್ಯಕ್ತಪಡಿಸಿರುವ ಅಖ್ತರ್‌, 'ಎ' ಗುಂಪಿನಿಂದ ಭಾರತ ಮತ್ತು ಪಾಕಿಸ್ತಾನ, 'ಬಿ'ಗುಂಪಿನಿಂದ ಅಫ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ಸೆಮಿಫೈನಲ್‌ ಪ್ರವೇಶಿಸಲಿ ಎಂದಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ನಡುವಣ ಹೈವೋಲ್ಟೇಜ್ ಪಂದ್ಯದ ಟಿಕೆಟ್‌ಗಳು ಈಗಾಗಲೇ ಸೋಲ್ಡ್‌ ಔಟ್‌ ಆಗಿದೆ. ಮಾರಾಟ ಆರಂಭಿಸಿದ ಒಂದೇ ಗಂಟೆಯಲ್ಲಿ ಖಾಲಿಯಾಗಿತ್ತು. ಫೆಬ್ರವರಿ 19ರಂದು ಹಾಲಿ ಚಾಂಪಿಯನ್​ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್​ ತಂಡಗಳು ಕರಾಚಿಯಲ್ಲಿ ಕಣಕ್ಕಿಳಿಯುವ ಮೂಲಕ ಪಂದ್ಯಾವಳಿಗೆ ಚಾಲನೆ ಸಿಗಲಿದೆ. ಟೂರ್ನಿಯಲ್ಲಿ ಆಡುವ 8 ತಂಡಗಳನ್ನು ತಲಾ 4ರಂತೆ 2 ಗುಂಪುಗಳಲ್ಲಿ ವಿಂಗಡಿಸಲಾಗಿದ್ದು, ರೌಂಡ್​ ರಾಬಿನ್​ ಲೀಗ್​ ಬಳಿಕ ಪ್ರತಿ ಗುಂಪಿನ ಅಗ್ರ 2 ತಂಡಗಳು ಸೆಮಿಫೈನಲ್​ಗೇರಲಿವೆ.

ಇದನ್ನೂ ಓದಿ ಚಾಂಪಿಯನ್ಸ್‌ ಟ್ರೋಫಿಯಿಂದ ಹೊರಬಿದ್ದ ಕಮಿನ್ಸ್‌, ಹ್ಯಾಜಲ್‌ವುಡ್‌

ವೇಳಾಪಟ್ಟಿ

ಫೆ.19 ಪಾಕಿಸ್ತಾನ-ನ್ಯೂಜಿಲ್ಯಾಂಡ್‌, ಸ್ಥಳ: ಕರಾಚಿ

ಫೆ. 20 ಬಾಂಗ್ಲಾದೇಶ-ಭಾರತ, ಸ್ಥಳ: ದುಬೈ

ಫೆ. 21 ಅಫ್ಘಾನಿಸ್ತಾನ-ದ. ಆಫ್ರಿಕಾ, ಸ್ಥಳ: ಕರಾಚಿ

ಫೆ. 22 ಆಸ್ಟ್ರೆಲಿಯಾ-ಇಂಗ್ಲೆಂಡ್, ಸ್ಥಳ:​ ಲಾಹೋರ್

ಫೆ. 23 ಭಾರತ-ಪಾಕಿಸ್ತಾನ,ಸ್ಥಳ: ದುಬೈ

ಫೆ. 24 ಬಾಂಗ್ಲಾದೇಶ-ನ್ಯೂಜಿಲ್ಯಾಂಡ್‌, ಸ್ಥಳ:​ ರಾವಲ್ಪಿಂಡಿ

ಫೆ. 25 ಅಸ್ಟ್ರೆಲಿಯಾ-ದ. ಆಫ್ರಿಕಾ,ಸ್ಥಳ: ರಾವಲ್ಪಿಂಡಿ

ಫೆ. 26 ಅಫ್ಘಾನಿಸ್ತಾನ-ಇಂಗ್ಲೆಂಡ್,ಸ್ಥಳ:​ ಲಾಹೋರ್

ಫೆ. 27 ಪಾಕಿಸ್ತಾನ-ಬಾಂಗ್ಲಾದೇಶ,ಸ್ಥಳ: ರಾವಲ್ಪಿಂಡಿ

ಫೆ. 28 ಅಫ್ಘಾನಿಸ್ತಾನ-ಆಸ್ಟ್ರೆಲಿಯಾ,ಸ್ಥಳ: ಲಾಹೋರ್​

ಮಾ. 1 ದಕ್ಷಿಣ ಆಫ್ರಿಕಾ-ಇಂಗ್ಲೆಂಡ್,ಸ್ಥಳ:​ ಕರಾಚಿ

ಮಾ. 2 ಭಾರತ-ನ್ಯೂಜಿಲ್ಯಾಂಡ್‌, ಸ್ಥಳ:​ ದುಬೈ

ಮಾ. 4 ಸೆಮಿಫೈನಲ್-1, ಸ್ಥಳ: ದುಬೈ

ಮಾ. 5 ಸೆಮಿಫೈನಲ್​-2, ಸ್ಥಳ: ಲಾಹೋರ್​

ಮಾ. 9 ಫೈನಲ್​ -ಸ್ಥಳ: ದುಬೈ/ಲಾಹೋರ್