Thursday, 12th December 2024

ಭಾರತದ ಶೂಟರ್ ಶ್ರೇಯಸಿ ಸಿಂಗ್ ಬಿಜೆಪಿಗೆ ಸೇರ್ಪಡೆ

ಪಾಟ್ನಾ: ಭಾರತದ ಶೂಟರ್ ಶ್ರೇಯಸಿ ಸಿಂಗ್ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಇವರು ಅರ್ಜುನ ಪ್ರಶಸ್ತಿ ಪುರಸ್ಕೃತೆ.

ಬಿಹಾರ ಮೂಲದ ಅಂತಾರಾಷ್ಟ್ರೀಯ ಖ್ಯಾತಿಯ ಶೂಟರ್, ಅರ್ಜುನ ಖೇಲ್ ಪ್ರಶಸ್ತಿ ಪುರಸ್ಕೃತ ಶ್ರೇಯಾಸಿ ಸಿಂಗ್, ದೇಶವನ್ನು ಅಭಿವೃದ್ಧಿಯ ಹೊಸ ಎತ್ತರಕ್ಕೆ ಕೊಂಡೊಯ್ಯುವ ಸಂಕಲ್ಪ ದೊಂದಿಗೆ ಬಿಜೆಪಿಗೆ ಸೇರಿಕೊಂಡಿದ್ದಾರೆ.

ದಿವಂಗತ ಮಾಜಿ ಕೇಂದ್ರ ಸಚಿವ ದಿಗ್ವಿಜಯ್ ಸಿಂಗ್ ಮತ್ತು ಮಾಜಿ ಬಂಕಾ ಸಂಸದ ಪುತುಲ್ ಸಿಂಗ್ ಅವರ ಪುತ್ರಿ. ಅನೇಕ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕಾಗಿ ಹಲವಾರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಶಂಸೆ ಮತ್ತು ಪದಕ ಗಳನ್ನು ಗೆದ್ದಿದ್ದಾರೆ. ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಶೂಟಿಂಗ್‌ನಲ್ಲಿ ದೇಶವನ್ನು ಪ್ರತಿನಿಧಿಸಿದ್ದಾರೆ ಮತ್ತು 2014 ರಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ.

ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಮತ್ತು ರಾಜ್ಯ ಬಿಜೆಪಿ ಮುಖ್ಯಸ್ಥ ಸಂಜಯ್ ಜೈಸ್ವಾಲ್ ಬಿಜೆಪಿಯ ಹಿರಿಯ ನಾಯಕರ ಸಮ್ಮುಖದಲ್ಲಿ ಶ್ರೇಯಸಿ ಸಿಂಗ್ ಪಕ್ಷಕ್ಕೆ ಸೇರಿದರು.