ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IPL 2025: ಐಪಿಎಲ್‌ನಲ್ಲಿ ನೂತನ ದಾಖಲೆ ಬರೆದ ಅಯ್ಯರ್‌; ಈ ಸಾಧನೆ ಮಾಡಿದ ಮೊದಲ ನಾಯಕ

ರಾಜಸ್ಥಾನ್‌ ವಿರುದ್ಧದ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್‌ 10 ರನ್‌ ಅಂತರದಿಂದ ಗೆಲುವು ಸಾಧಿಸಿತ್ತು. ಪಂದ್ಯದಲ್ಲಿ ಬ್ಯಾಟಿಂಗ್‌ ನಡೆಸಿದ ನಾಯಕ ಅಯ್ಯರ್‌ ಫೀಲ್ಡಿಂಗ್‌ ನಡೆಸಲಿಲ್ಲ. ಹೀಗಾಗಿ ಅಯ್ಯರ್‌ ಅನುಪಸ್ಥಿತಿಯಲ್ಲಿ ಶಶಾಂಕ್ ಸಿಂಗ್ ಉಸ್ತುವಾರಿ ನಾಯಕನಾಗಿ ತಂಡವನ್ನು ಮುನ್ನಡೆಸಿದ್ದರು.

ಜೈಪುರ: ಪಂಜಾಬ್ ಕಿಂಗ್ಸ್ (PBKS) ತಂಡದ ನಾಯಕ ಶ್ರೇಯಸ್ ಅಯ್ಯರ್(Shreyas Iyer) ಐಪಿಎಲ್(IPL 2025) ಇತಿಹಾಸದಲ್ಲಿ ನೂತನ ದಾಖಲೆಯೊಂದನ್ನು ಬರೆದಿದ್ದಾರೆ. ಪಂಜಾಬ್‌ ತಂಡ ಪ್ಲೇ ಆಫ್‌ ಪ್ರವೇಶ ಪಡೆಯುವ ಮೂಲಕ ಶ್ರೇಯಸ್ ಮೂರು ವಿಭಿನ್ನ ಫ್ರಾಂಚೈಸಿಗಳನ್ನು ಪ್ಲೇಆಫ್‌ಗೆ ಮುನ್ನಡೆಸಿದ ಮೊದಲ ನಾಯಕ ಎನಿಸಿಕೊಂಡರು. ಭಾನುವಾರ ಜೈಪುರದಲ್ಲಿ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ರಾಜಸ್ಥಾನ ರಾಯಲ್ಸ್ (RR) ವಿರುದ್ಧ 10 ರನ್‌ಗಳ ಜಯ ದಾಖಲಿಸಿತು. ರಾತ್ರಿ ನಡೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ತಂಡವು ಡೆಲ್ಲಿ ಕ್ಯಾಪಿಟಲ್ಸ್ (DC) ತಂಡವನ್ನು ಸೋಲಿಸಿದ ಪರಿಣಾಮ ಪಂಜಾಬ್ ತಂಡವು ಪ್ಲೇಆಫ್‌ಗೆ ಅರ್ಹತೆ ಪಡೆಯಿತು.

ಈ ಹಿಂದೆ ಡೆಲ್ಲಿ ಕ್ಯಾಪಿಟಲ್ಸ್ (2019, 2020) ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (2024) ತಂಡಗಳನ್ನು ನಾಕೌಟ್‌ಗಳಿಗೆ ಮುನ್ನಡೆಸಿದ್ದ ಅಯ್ಯರ್, ಇದೀಗ ಪಂಜಾಬ್ ಕಿಂಗ್ಸ್‌ ತಂಡವನ್ನು ತಮ್ಮ ಚೊಚ್ಚಲ ನಾಯಕತ್ವದಲ್ಲಿ 11 ವರ್ಷಗಳ ಬಳಿಕ ನಾಕೌಟ್‌ ಪ್ರವೇಶಿಸುವಂತೆ ಮಾಡಿದ್ದಾರೆ. ಅಯ್ಯರ್‌ ನಾಯಕತ್ವದಲ್ಲೇ ಪಂಜಾಬ್‌ ಚೊಚ್ಚಲ ಕಪ್‌ ಗೆಲ್ಲಲಿದೆಯಾ ಎಂದು ಕಾದು ನೋಡಬೇಕಿದೆ. ಕಳೆದ ಬಾರಿ ಕೆಕೆಆರ್‌ ತಂಡವನ್ನು ಅಯ್ಯರ್‌ ಚಾಂಪಿಯನ್‌ ಪಟ್ಟಕ್ಕೇರಿಸಿದ್ದರು.

10 ರನ್‌ ರೋಚಕ ಗೆಲುವು

ರಾಜಸ್ಥಾನ್‌ ವಿರುದ್ಧದ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್‌ 10 ರನ್‌ ಅಂತರದಿಂದ ಗೆಲುವು ಸಾಧಿಸಿತ್ತು. ಪಂದ್ಯದಲ್ಲಿ ಬ್ಯಾಟಿಂಗ್‌ ನಡೆಸಿದ ನಾಯಕ ಅಯ್ಯರ್‌ ಫೀಲ್ಡಿಂಗ್‌ ನಡೆಸಲಿಲ್ಲ. ಹೀಗಾಗಿ ಅಯ್ಯರ್‌ ಅನುಪಸ್ಥಿತಿಯಲ್ಲಿ ಶಶಾಂಕ್ ಸಿಂಗ್ ಉಸ್ತುವಾರಿ ನಾಯಕನಾಗಿ ತಂಡವನ್ನು ಮುನ್ನಡೆಸಿದ್ದರು.

ಇದನ್ನೂ ಓದಿ IPL 2025: ಐದನೇ ಶತಕ ಸಿಡಿಸಿ ಹಲವು ದಾಖಲೆಗಳನ್ನು ಮುರಿದ ಕೆಎಲ್‌ ರಾಹುಲ್‌!

ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಪಂಜಾಬ್ ಕಿಂಗ್ಸ್ ನೆಹಾಲ್ ವಧೇರಾ ಮತ್ತು ಶಶಾಂಕ್ ಸಿಂಗ್ ಬ್ಯಾಟಿಂಗ್ ನೆರವಿನಿಂದ 5 ವಿಕೆಟ್ ನಷ್ಟಕ್ಕೆ 219 ರನ್ ಕಲೆ ಹಾಕಿತು. ಗುರಿ ಬೆನ್ನಟ್ಟಿದ ರಾಜಸ್ಥಾನ್ 7 ವಿಕೆಟ್ ನಷ್ಟಕ್ಕೆ 209 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲೊಪ್ಪಿಕೊಂಡಿತು.