ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಇಂದಿನ ಏಕದಿನ ಪಂದ್ಯದಲ್ಲಿ ಮಹತ್ವದ ದಾಖಲೆ ಬರೆಯಲು ಸಜ್ಜಾದ ಶ್ರೇಯಸ್‌ ಅಯ್ಯರ್‌

IND vs AFG: ಭಾರತದ ಮಾಜಿ ನಾಯಕ ರೋಹಿತ್ ಶರ್ಮಾ ಕೂಡ ಧರ್ಮಶಾಲಾದಲ್ಲಿ ಆಡಲಿದ್ದಾರೆ. ಆಡುವ XI ನಲ್ಲಿ ಸ್ಥಾನ ಪಡೆಯುವ ಮೂಲಕ, ರೋಹಿತ್ ಏಕದಿನ ಪಂದ್ಯದಲ್ಲಿ ಭಾರತ ಪುರುಷರ ತಂಡವನ್ನು ಪ್ರತಿನಿಧಿಸಿದ ಅತ್ಯಂತ ಹಿರಿಯ ಆಟಗಾರನಾಗಲಿದ್ದಾರೆ.

ಏಕದಿನ ಕ್ರಿಕೆಟ್‌ನಲ್ಲಿ ಮಹತ್ವದ ದಾಖಲೆ ಬರೆಯುವ ಸನಿಹ ಅಯ್ಯರ್‌

Shreyas Iyer -

Abhilash BC
Abhilash BC Jun 13, 2026 9:10 AM

ಧರ್ಮಶಾಲಾ, ಜೂ.13: ಭಾರತ ಟಿ20ಐ ತಂಡದ ನೂತನ ನಾಯಕ ಶ್ರೇಯಸ್ ಅಯ್ಯರ್(Shreyas Iyer) ಶನಿವಾರ (ಜೂನ್ 13) ಅಫ್ಘಾನಿಸ್ತಾನ(IND vs AFG) ವಿರುದ್ಧದ ಏಕದಿನ ಪಂದ್ಯದಲ್ಲಿ ಮಹತ್ವದ ದಾಖೆಯೊಂದನ್ನು ಬರೆಯುವ ಸನಿಹದಲ್ಲಿದ್ದಾರೆ. ಭಾರತದ ಏಕದಿನ ತಂಡದ ಉಪನಾಯಕನಾಗಿರುವ ಮುಂಬೈ ಬ್ಯಾಟ್ಸ್‌ಮನ್ ಮೊದಲ ಏಕದಿನ ಪಂದ್ಯದಲ್ಲಿ 23 ರನ್ ಗಳಿಸಿದರೆ, ಅವರು ಅತ್ಯಂತ ವೇಗವಾಗಿ 3,000 ಏಕದಿನ ರನ್‌ಗಳನ್ನು ತಲುಪಿದ ಭಾರತೀಯ ಬ್ಯಾಟ್ಸ್‌ಮನ್ ಆಗಲಿದ್ದಾರೆ.

ಪ್ರಸ್ತುತ 3,000 ಏಕದಿನ ರನ್‌ಗಳನ್ನು ವೇಗವಾಗಿ ತಲುಪಿದ ಭಾರತೀಯ ದಾಖಲೆಯು ಮಾಜಿ ಆರಂಭಿಕ ಬ್ಯಾಟ್ಸ್‌ಮನ್ ಶಿಖರ್ ಧವನ್ ಅವರ ಹೆಸರಿನಲ್ಲಿದೆ. ಅವರು 72 ಇನ್ನಿಂಗ್ಸ್‌ಗಳಲ್ಲಿ ಈ ಮೈಲಿಗಲ್ಲು ತಲುಪಿದ್ದರು. ಸದ್ಯ ಶ್ರೇಯಸ್‌ ಅಯ್ಯರ್‌ 70 ಇನಿಂಗ್ಸ್‌ಗಳಿಂದ 2977* ರನ್‌ ಗಳಿಸಿದ್ದಾರೆ.

ಅಯ್ಯರ್ ಜೊತೆಗೆ, ಭಾರತದ ಏಕದಿನ ತಂಡದ ನಾಯಕ ಶುಭ್‌ಮನ್ ಗಿಲ್ ಕೂಡ ಶನಿವಾರ ಏಕದಿನದಲ್ಲಿ 3,000 ರನ್ ಗಳಿಸಿದ ಅತ್ಯಂತ ವೇಗದ ಭಾರತೀಯ ಆಟಗಾರನಾಗುವ ಅವಕಾಶವನ್ನು ಹೊಂದಿದ್ದಾರೆ. ಪಂಜಾಬ್‌ನ ಬಲಗೈ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್ ಈ ಮೈಲಿಗಲ್ಲು ತಲುಪಲು ಮೊದಲ ಏಕದಿನ ಪಂದ್ಯದಲ್ಲಿ 47 ರನ್‌ಗಳ ಅಗತ್ಯವಿದೆ. ಗಿಲ್ ಇದುವರೆಗೆ 61 ಏಕದಿನ ಪಂದ್ಯಗಳಿಂದ 61 ಇನ್ನಿಂಗ್ಸ್‌ಗಳಲ್ಲಿ 2,953 ರನ್ ಗಳಿಸಿದ್ದಾರೆ.

ಒಟ್ಟಾರೆ ದಾಖಲೆ ದಕ್ಷಿಣ ಆಫ್ರಿಕಾದ ಮಾಜಿ ಆರಂಭಿಕ ಆಟಗಾರ ಹಶೀಮ್ ಆಮ್ಲಾ ಅವರ ಹೆಸರಿನಲ್ಲಿದೆ. ಅವರು ತಮ್ಮ 59ನೇ ಏಕದಿನ ಪಂದ್ಯದಲ್ಲಿ ಕೇವಲ 57 ಇನ್ನಿಂಗ್ಸ್‌ಗಳಲ್ಲಿ 3,000 ಏಕದಿನ ರನ್‌ಗಳನ್ನು ಪೂರ್ಣಗೊಳಿಸಿದ್ದಾರೆ.

ಭಾರತದ ಮಾಜಿ ನಾಯಕ ರೋಹಿತ್ ಶರ್ಮಾ ಕೂಡ ಧರ್ಮಶಾಲಾದಲ್ಲಿ ಆಡಲಿದ್ದಾರೆ. ಆಡುವ XI ನಲ್ಲಿ ಸ್ಥಾನ ಪಡೆಯುವ ಮೂಲಕ, ರೋಹಿತ್ ಏಕದಿನ ಪಂದ್ಯದಲ್ಲಿ ಭಾರತ ಪುರುಷರ ತಂಡವನ್ನು ಪ್ರತಿನಿಧಿಸಿದ ಅತ್ಯಂತ ಹಿರಿಯ ಆಟಗಾರನಾಗಲಿದ್ದಾರೆ.

IND vs AFG: ಮೊಹಿಂದರ್‌ ಅಮರನಾಥ್‌ ದಾಖಲೆ ಮುರಿಯುವ ಸನಿಹದಲ್ಲಿ ರೋಹಿತ್‌ ಶರ್ಮಾ!

ಅಫ್ಘಾನಿಸ್ತಾನ ಏಕದಿನ ಕ್ರಿಕೆಟ್‌ನಲ್ಲಿ ಬಲಿಷ್ಠವಾಗಿದೆ. ಇತ್ತೀಚಿನ ದಿನಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿದೆ. ಕಳೆದ ಐದು ಏಕದಿನ ಪಂದ್ಯಗಳಲ್ಲಿ ಅವರು ಅಜೇಯರಾಗಿ ಉಳಿದಿದ್ದಾರೆ. ಹಶ್ಮತುಲ್ಲಾ ಶಾಹಿದಿ ನೇತೃತ್ವದ ತಂಡವು ಭಾರತೀಯ ನೆಲದಲ್ಲಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಲು ಮತ್ತು ಇಲ್ಲಿ ಆಡುವ ಪ್ರಾಯೋಗಿಕ ಅನುಭವವನ್ನು ಪಡೆಯಲು ಆಶಿಸುತ್ತಿದೆ. ಏಕೆಂದರೆ ಇದು ಮುಂದಿನ ಕೆಲವು ವರ್ಷಗಳ ಕಾಲ ಅವರ ತವರು ಆಗಲಿದೆ. ಹೌದು ಆಫ್ಘಾನ್‌ ತನ್ನ ದಿಪಕ್ಷೀಯ ಸರಣಿಯನ್ನು ಭಾರತದ ನೆಲದಲ್ಲಿ ಆಡಲಿದೆ.

ಸಂಭಾವ್ಯ ಆಡುವ ಬಳಗ

ಭಾರತ: ರೋಹಿತ್ ಶರ್ಮಾ, ಶುಭಮನ್ ಗಿಲ್ (ನಾಯಕ), ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್ (ವಿ.ಕೀ.), ನಿತೀಶ್ ಕುಮಾರ್ ರೆಡ್ಡಿ, ಹರ್ಷ್ ದುಬೆ, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್, ಅರ್ಷ್‌ದೀಪ್ ಸಿಂಗ್, ಕುಲದೀಪ್ ಯಾದವ್.

ಅಫ್ಘಾನಿಸ್ತಾನ: ರಹಮಾನುಲ್ಲಾ ಗುರ್ಬಾಜ್ (ವಿ.ಕೀ.), ಇಬ್ರಾಹಿಂ ಜದ್ರಾನ್, ಸೇದಿಕುಲ್ಲಾ ಅಟಲ್, ಹಶ್ಮತುಲ್ಲಾ ಶಾಹಿದಿ (ನಾಯಕ), ರಹಮತ್ ಶಾ, ಅಜ್ಮತುಲ್ಲಾ ಒಮರ್ಜಾಯ್, ಮೊಹಮ್ಮದ್ ನಬಿ, ರಶೀದ್ ಖಾನ್, ಮೊಹಮ್ಮದ್ ಸಲೀಮ್, ಎ.ಎಂ. ಗಜನ್ಫರ್, ಜಿಯಾವುರ್ ರೆಹಮಾನ್.