ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Shreyas Iyer: ಭಾರತ ಏಕದಿನ ತಂಡಕ್ಕೆ ಶ್ರೇಯಸ್ ಅಯ್ಯರ್‌ ನಾಯಕ?

ಮುಂಬರುವ ಆಸ್ಟ್ರೇಲಿಯಾ ಎದುರಿನ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ಅವರು ನಾಯಕರಾಗಿ ತಂಡವನ್ನು ಮುನ್ನಡೆಸುವ ಸಾಧ್ಯತೆ ಇದೆ. ಅದರ ನಂತರದ ಸರಣಿಗಳಲ್ಲಿ ಶ್ರೇಯಸ್ ಅವರಿಗೆ ನಾಯಕತ್ವ ಸಿಗಲಿದೆ ಎನ್ನಲಾಗಿದೆ. ಅಲ್ಲದೆ 2027ರ ಏಕದಿನ ವಿಶ್ವಕಪ್‌ನಲ್ಲಿಯೂ ಶ್ರೇಯಸ್‌ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ನವದೆಹಲಿ: ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್(Shreyas Iyer) ಅವರನ್ನು ಭಾರತೀಯ ಏಕದಿನ ತಂಡದ(Team India’s ODI captain) ನಾಯಕರನ್ನಾಗಿ ಮಾಡಲು ಬಿಸಿಸಿಐ(BCCI)k ಚಿಂತನೆ ನಡೆಸುತ್ತಿದೆ ಎಂದು ವರದಿಯಾಗಿದೆ. ದೈನಿಕ್ ಜಾಗರಣ್ ವರದಿ ಪ್ರಕಾರ, ಏಕದಿನ ಕ್ರಿಕೆಟ್‌ನಲ್ಲಿ ನಾಯಕತ್ವದ ಪಾತ್ರಕ್ಕಾಗಿ ಅವರ ಹೆಸರು ಚರ್ಚೆಯಲ್ಲಿದೆ. ಏಷ್ಯಾ ಕಪ್ ಟಿ20 ತಂಡದಿಂದ ಶ್ರೇಯಸ್ ಅಯ್ಯರ್ ಅವರನ್ನು ಕೈಬಿಟ್ಟರೂ ಅವರಿಗೆ ಏಕದಿನ ನಾಯಕತ್ವ ನೀಡುವ ಕುರಿತು ಬಿಸಿಸಿಐನಲ್ಲಿ ಚಿಂತನೆ ನಡೆದಿದೆ ಎನ್ನಲಾಗಿದೆ.

ಟೆಸ್ಟ್‌ ತಂಡಕ್ಕೆ ಶುಭಮನ್‌ ಗಿಲ್‌ಗೆ ನಾಯಕತ್ವ ಮತ್ತು ಟಿ20ಯಲ್ಲಿ ಉಪನಾಯಕ ಸ್ಥಾನ ನೀಡಿದಾಗ ಗಿಲ್‌ ಭವಿಷ್ಯದಲ್ಲಿ ಮೂರು ಮಾದರಿಯ ಕ್ರಿಕೆಟ್‌ಗೂ ನಾಯಕನಾಗುತ್ತಾರೆ ಎನ್ನಲಾಗಿತ್ತು. ಆದರೆ ಏಕದಿನ ಕ್ರಿಕೆಟ್‌ನಲ್ಲಿ ಅಯ್ಯರ್‌ಗೆ ಮಣೆ ಹಾಕಲು ಬಿಸಿಸಿಐ ಮುಂದಾಗಿರುವುದು ಅಚ್ಚರಿಗೆ ಕಾರಣವಾಗಿದೆ.

ಅಯ್ಯರ್‌ಗೆ ನಾಯಕತ್ವ ನೀಡಿದರೆ ಅವರು ಅದಕ್ಕೆ ಅರ್ಹರಾಗಿದ್ದಾರೆ. ಈಗಾಗಲೇ ಐಪಿಎಲ್‌ ಸೇರಿ ದೇಶೀಯ ಕ್ರಿಕೆಟ್‌ನಲ್ಲಿ ತಮ್ಮ ನಾಯಕತ್ವವನ್ನು ಅವರು ಸಾಬೀತು ಪಡಿಸಿದ್ದಾರೆ. ಇದೇ ವರ್ಷ ನಡೆದಿದ್ದ ಚಾಂಪಿಯನ್ಸ್ ಟ್ರೋಫಿ ಜಯಿಸುವಲ್ಲಿ ಅವರು ಪ್ರಮುಖ ಪಾತ್ರವಹಿಸಿದ್ದರು. ಮುಂಬರುವ ಆಸ್ಟ್ರೇಲಿಯಾ ಎದುರಿನ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ಅವರು ನಾಯಕರಾಗಿ ತಂಡವನ್ನು ಮುನ್ನಡೆಸುವ ಸಾಧ್ಯತೆ ಇದೆ. ಅದರ ನಂತರದ ಸರಣಿಗಳಲ್ಲಿ ಶ್ರೇಯಸ್ ಅವರಿಗೆ ನಾಯಕತ್ವ ಸಿಗಲಿದೆ ಎನ್ನಲಾಗಿದೆ. ಅಲ್ಲದೆ 2027ರ ಏಕದಿನ ವಿಶ್ವಕಪ್‌ನಲ್ಲಿಯೂ ಶ್ರೇಯಸ್‌ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ. ರೋಹಿತ್‌ ಕೂಡ ಅಯ್ಯರ್‌ಗೆ ನಾಯಕತ್ವ ನೀಡುವಂತೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ವರದಿಗಳ ಪ್ರಕಾರ, ಆಸೀಸ್‌ ಸರಣಿಯೇ ಕೊಹ್ಲಿ ಹಾಗೂ ರೋಹಿತ್‌ಗೆ ವಿದಾಯದ ಸರಣಿಯಾಗುವ ಸಾಧ್ಯತೆಯಿದೆ. ಒಂದು ವೇಳೆ ಅವರು ಆಸೀಸ್‌ ಸರಣಿ ಬಳಿಕ ಏಕದಿನದಲ್ಲಿ ಮುಂದುವರಿಯಲು ನಿರ್ಧರಿಸಿದರೂ, ಬಿಸಿಸಿಐ ಅವರನ್ನು 2027ರ ಏಕದಿನ ವಿಶ್ವಕಪ್‌ವರೆಗೂ ಮುಂದುವರಿಸುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ.

ಇದನ್ನೂ ಓದಿ ರೋಹಿತ್‌ ಶರ್ಮಾರ ನಾಯಕತ್ವದ ಬಗ್ಗೆ ತಮ್ಮ ಅನಿಸಿಕೆ ಹಂಚಿಕೊಂಡ ರಾಹುಲ್‌ ದ್ರಾವಿಡ್!