Shreyas Iyer: 'ಪ್ರತಿದಿನ ಉತ್ತಮಗೊಳ್ಳುತ್ತಿದೆ'; ಗಾಯದ ಬಗ್ಗೆ ಶ್ರೇಯಸ್ ಅಯ್ಯರ್ ಮೊದಲ ಪ್ರತಿಕ್ರಿಯೆ
Shreyas Iyer Injury Live Updates: ಸೂರ್ಯಕುಮಾರ್ ಯಾದವ್ ಅವರ ತಾಯಿ ಸ್ವಪ್ನ ಯಾದವ್, ಛಠ್ ಪೂಜೆ ಸಂದರ್ಭದಲ್ಲಿ ಅಯ್ಯರ್ ಅವರ ಶೀಘ್ರ ಚೇತರಿಕೆಗಾಗಿ ಪ್ರಾರ್ಥನೆ ಸಲ್ಲಿಸುತ್ತಿರುವ ವಿಡಿಯೊವೊಂದು ಎಲ್ಲೆಡೆ ಹರಿದಾಡುತ್ತಿದೆ. ಈ ವಿಡಿಯೊದಲ್ಲಿ "ಎಲ್ಲರೂ ಶ್ರೇಯಸ್ ಅಯ್ಯರ್ ಅವರ ಒಳಿತಿಗಾಗಿ ಪ್ರಾರ್ಥನೆ ಮಾಡಿ, ಏಕೆಂದರೆ, ಅವರ ಆರೋಗ್ಯ ಸರಿಯಾಗಿಲ್ಲ ಎಂದು ನಾನು ಕೇಳಿದ್ದೇನೆ. ನನಗೆ ಇದರಿಂದ ತುಂಬಾ ದುಃಖವಾಗಿದೆ,” ಎಂದು ಹೇಳಿದ್ದಾರೆ.
-
Abhilash BC
Oct 30, 2025 10:30 AM
ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಪಕ್ಕೆಲುಬಿನ ತೀವ್ರ ಗಾಯದಿಂದ ಸಿಡ್ನಿಯ ಆಸ್ಪತ್ರೆಗೆ ದಾಖಲಾಗಿದ್ದ ಶ್ರೇಯಸ್ ಅಯ್ಯರ್ ತಮ್ಮ ಆರೋಗ್ಯ ಸ್ಥಿತಿಯ ಬಗ್ಗೆ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ. ಘಟನೆಯ ನಂತರ ಐಸಿಯುಗೆ ದಾಖಲಾಗಿದ್ದ 29 ವರ್ಷದ ಬ್ಯಾಟ್ಸ್‌ಮನ್, ಅಭಿಮಾನಿಗಳ ಹಾರೈಕೆಗೆ ಸಾಮಾಜಿಕ ಮಾಧ್ಯಮದಲ್ಲಿ ಧನ್ಯವಾದ ಅರ್ಪಿಸಿದರು. ಜತೆಗೆ ಸ್ಥಿರವಾದ ಪ್ರಗತಿ ಸಾಧಿಸುತ್ತಿರುವುದಾಗಿ ತಿಳಿಸಿದರು.
"ನಾನು ಪ್ರಸ್ತುತ ಚೇತರಿಕೆಯ ಪ್ರಕ್ರಿಯೆಯಲ್ಲಿದ್ದೇನೆ ಮತ್ತು ದಿನ ಕಳೆದಂತೆ ಸುಧಾರಿಸುತ್ತಿದ್ದೇನೆ. ನನಗೆ ದೊರೆತ ಎಲ್ಲಾ ರೀತಿಯ ಶುಭಾಶಯಗಳು ಮತ್ತು ಬೆಂಬಲವನ್ನು ನೋಡಿ ನಾನು ತುಂಬಾ ಕೃತಜ್ಞನಾಗಿದ್ದೇನೆ. ಇದು ನಿಜವಾಗಿಯೂ ಬಹಳಷ್ಟು ಅರ್ಥಪೂರ್ಣವಾಗಿದೆ. ನನ್ನನ್ನು ನಿಮ್ಮ ಆಲೋಚನೆಗಳಲ್ಲಿ ಇರಿಸಿಕೊಂಡಿದ್ದಕ್ಕಾಗಿ ಧನ್ಯವಾದಗಳು" ಎಂದು ಅಯ್ಯರ್ ಸಾಮಾಜಿಕ ಮಾಧ್ಯಮದಲ್ಲಿ ಬರೆದಿದ್ದಾರೆ.
ಸಿಡ್ನಿ ಏಕದಿನ ಪಂದ್ಯದ 34 ನೇ ಓವರ್‌ನಲ್ಲಿ ಆಸ್ಟ್ರೇಲಿಯಾದ ಅಲೆಕ್ಸ್ ಕ್ಯಾರಿ ಹೊಡೆದ ಚೆಂಡನ್ನು ಹಿಂದಕ್ಕೆ ಓಡಿ ಬ್ಯಾಕ್‌ವರ್ಡ್ ಪಾಯಿಂಟ್‌ನಲ್ಲಿ ಅದ್ಭುತವಾಗಿ ಕ್ಯಾಚ್ ಪಡೆದು ಔಟ್ ಮಾಡಿದ್ದರು. ಆ ಸಂದರ್ಭದಲ್ಲಿ ಅಯ್ಯರ್ ಅವರ ಪಕ್ಕೆಲುಬು ನೆಲಕ್ಕೆ ಉಜ್ಜಿಹೋಗಿತ್ತು. ಆರಂಭದಲ್ಲಿ ಇದು ಸಣ್ಣ ಪರಿಣಾಮದ ಗಾಯ ಎಂದು ಭಾವಿಸಲಾಗಿತ್ತು. ಆದರೆ ಆ ಬಳಿಕ ಡ್ರೆಸಿಂಗ್‌ರೂಮ್‌ನಲ್ಲಿ ಅಯ್ಯರ್ ಪ್ರಜ್ಞೆತಪ್ಪಿದ್ದರು. ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಅವರ ಗುಲ್ಮಕ್ಕೆ (ಪ್ಲೀಹ ಸ್ಪ್ಲೀನ್) ಸೀಳು ಗಾಯವಾಗಿರುವುದು ಸ್ಕ್ಯಾನ್‌ಗಳಿಂದ ದೃಢಪಟ್ಟಿತ್ತು. ಹೀಗಾಗಿ ಅವರಿಗೆ ಸಿಡ್ನಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು.
ಇದನ್ನೂ ಓದಿ Shreyas Iyer: ಶ್ರೇಯಸ್ ಅಯ್ಯರ್ ಆರೋಗ್ಯ ಸ್ಥಿತಿ ಹೇಗಿದೆ?; ಬಿಸಿಸಿಐ ನೀಡಿದ ಅಪ್ಡೇಟ್ ಇಲ್ಲಿದೆ
ಸೂರ್ಯಕುಮಾರ್ ಯಾದವ್ ಅವರ ತಾಯಿ ಸ್ವಪ್ನ ಯಾದವ್, ಛಠ್ ಪೂಜೆ ಸಂದರ್ಭದಲ್ಲಿ ಅಯ್ಯರ್ ಅವರ ಶೀಘ್ರ ಚೇತರಿಕೆಗಾಗಿ ಪ್ರಾರ್ಥನೆ ಸಲ್ಲಿಸುತ್ತಿರುವ ವಿಡಿಯೊವೊಂದು ಎಲ್ಲೆಡೆ ಹರಿದಾಡುತ್ತಿದೆ. ಈ ವಿಡಿಯೊದಲ್ಲಿ "ಎಲ್ಲರೂ ಶ್ರೇಯಸ್ ಅಯ್ಯರ್ ಅವರ ಒಳಿತಿಗಾಗಿ ಪ್ರಾರ್ಥನೆ ಮಾಡಿ, ಏಕೆಂದರೆ, ಅವರ ಆರೋಗ್ಯ ಸರಿಯಾಗಿಲ್ಲ ಎಂದು ನಾನು ಕೇಳಿದ್ದೇನೆ. ನನಗೆ ಇದರಿಂದ ತುಂಬಾ ದುಃಖವಾಗಿದೆ,” ಎಂದು ಹೇಳಿದ್ದಾರೆ.
Suryakumar Yadav's Mother praying for Shreyas Iyer's speedy Recovery. 🥺❤️ pic.twitter.com/U6eHM2YOLS
— Johns. (@CricCrazyJohns) October 29, 2025