ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಟೆಸ್ಟ್‌ ರ‍್ಯಾಂಕಿಂಗ್‌; ಜಿಗಿತ ಕಂಡ ಜಡೇಜಾ, ಪಂತ್‌

ICC Test Rankings: ಟೆಸ್ಟ್ ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಭಾರತದ ರವೀಂದ್ರ ಜಡೇಜಾ ತಮ್ಮ ಅಗ್ರ ಸ್ಥಾನವನ್ನು ಬಲಪಡಿಸಿಕೊಂಡಿದ್ದಾರೆ. ಮ್ಯಾಂಚೆಸ್ಟರ್‌ನಲ್ಲಿ ಶತಕ ಮತ್ತು ನಾಲ್ಕು ವಿಕೆಟ್‌ಗಳನ್ನು ಪಡೆದಿದ್ದರು. ಬ್ಯಾಟಿಂಗ್‌ ಶ್ರೇಯಾಂಕದಲ್ಲಿಯೂ ಜಿಗಿತ ಕಂಡಿರುವ ಜಡೇಜಾ 34 ರಿಂದ 29 ಕ್ಕೆ ಏರಿದ್ದಾರೆ.

ದುಬೈ: ನೂತನ ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌(ICC Test Rankings) ಪ್ರಕಟವಾಗಿದ್ದು, ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅಮೋಘ ಬ್ಯಾಟಿಂಗ್‌ ಪ್ರದರ್ಶನ ತೋರುತ್ತಿರುವ ಭಾರತ ಟೆಸ್ಟ್‌ ತಂಡದ ನಾಯಕ ಶುಭಮನ್ ಗಿಲ್(Shubman Gill) ಬ್ಯಾಟಿಂಗ್‌ ಶ್ರೇಯಾಂಕದಲ್ಲಿ ಒಂಬತ್ತನೇ ಸ್ಥಾನ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ನಾಲ್ಕನೇ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಕಾಲು ನೋವಿನ ಮಧ್ಯೆಯೂ ಬ್ಯಾಟಿಂಗ್ ಮಾಡಿ 54 ರನ್ ಗಳಿಸಿದ್ದ ರಿಷಭ್ ಪಂತ್(Rishabh Pant) ಏಳನೇ ಸ್ಥಾನಕ್ಕೆ ಜಿಗಿದಿದ್ದಾರೆ.

ಮ್ಯಾಂಚೆಸ್ಟರ್ ಟೆಸ್ಟ್‌ನ ಎರಡನೇ ಇನ್ನಿಂಗ್ಸ್‌ನಲ್ಲಿ ಶೂನ್ಯಕ್ಕೆ ಔಟಾಗಿದ್ದ ಯಶಸ್ವಿ ಜೈಸ್ವಾಲ್ ಮೂರು ಸ್ಥಾನಗಳನ್ನು ಕಳೆದುಕೊಂಡು 769 ರೇಟಿಂಗ್ ಪಾಯಿಂಟ್‌ಗಳೊಂದಿಗೆ 8ನೇ ಸ್ಥಾನಕ್ಕೆ ಕುಸಿದ್ದಾರೆ. ಇಂಗ್ಲೆಂಡ್‌ನ ಮಾಜಿ ನಾಯಕ ಜೋ ರೂಟ್ ತಮ್ಮ ಅಗ್ರ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಶತಕ ವಂಚಿತರಾದ ಇಂಗ್ಲೆಂಡ್‌ನ ಆರಂಭಿಕ ಆಟಗಾರ ಬೆನ್ ಡಕೆಟ್ ಕೂಡ ಐದು ಸ್ಥಾನಗಳ ಜಿಗಿತದೊಂದಿಗೆ ಮತ್ತೆ ಅಗ್ರ 10 ರೊಳಗೆ ಪ್ರವೇಶಿಸಿದ್ದಾರೆ. ಅವರು 743 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಪ್ರಸ್ತುತ 10 ನೇ ಸ್ಥಾನದಲ್ಲಿದ್ದಾರೆ. ರೂಟ್ 904 ಪಾಯಿಂಟ್‌ಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ.

ಏತನ್ಮಧ್ಯೆ, ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಐದು ವಿಕೆಟ್ ಗೊಂಚಲು ಮತ್ತು ಮೊದಲ ಇನ್ನಿಂಗ್ಸ್‌ನಲ್ಲಿ ಶತಕ ಗಳಿಸಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಎಂಟು ಸ್ಥಾನಗಳ ಏರಿಕೆ ಕಂಡು 34 ನೇ ಸ್ಥಾನಕ್ಕೆ ತಲುಪಿದ್ದರೆ. ಆಲ್‌ರೌಂಡರ್‌ಗಳ ಪೈಕಿ ಸ್ಟೋಕ್ಸ್ ಈಗ 301 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

ಟೆಸ್ಟ್ ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಭಾರತದ ರವೀಂದ್ರ ಜಡೇಜಾ ತಮ್ಮ ಅಗ್ರ ಸ್ಥಾನವನ್ನು ಬಲಪಡಿಸಿಕೊಂಡಿದ್ದಾರೆ. ಮ್ಯಾಂಚೆಸ್ಟರ್‌ನಲ್ಲಿ ಶತಕ ಮತ್ತು ನಾಲ್ಕು ವಿಕೆಟ್‌ಗಳನ್ನು ಪಡೆದಿದ್ದರು. ಬ್ಯಾಟಿಂಗ್‌ ಶ್ರೇಯಾಂಕದಲ್ಲಿಯೂ ಜಿಗಿತ ಕಂಡಿರುವ ಜಡೇಜಾ 34 ರಿಂದ 29 ಕ್ಕೆ ಏರಿದ್ದಾರೆ.

ಇದನ್ನೂ ಓದಿ IND vs ENG: ಭಾರತಕ್ಕೆ ಓವಲ್‌ನಲ್ಲಿ ಗೆಲುವು ಒಲಿದರಷ್ಟೇ ಸರಣಿ ಸಮಬಲ