ಬ್ರಿಸ್ಪೇನ್: ಮೊಹಮ್ಮದ್ ಸಿರಾಜ್ ಭಾರತದ ಪರ ಚೊಚ್ಚಲ ಟೆಸ್ಟ್ ಕ್ಯಾಪ್ ಧರಿಸಿದರು. ಮೆಲ್ಬರ್ನ್ನ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯ ದಲ್ಲಿ ರಾಷ್ಟ್ರಗೀತೆ ವೇಳೆ ಆನಂದಭಾಷ್ಪ ಸುರಿಸಿದರು. ಪದಾರ್ಪಣೆ ಪಂದ್ಯ ದಲ್ಲಿ ಐದು ವಿಕೆಟ್ ಕಬಳಿಸಿ ಭಾರತದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದರು.
ಸಿಡ್ನಿಯಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಜನಾಂಗೀಯ ನಿಂದನೆ ಎದುರಾಯಿತು. ಆದರೂ ಅಚಲ ಹೃದಯವನ್ನು ಹೊಂದಿರುವ ಸಿರಾಜ್ ಕದಲಲಿಲ್ಲ. ಎದುರಾಳಿಗೆ ತಮ್ಮ ಅದ್ಭುತ ಬೌಲಿಂಗ್ ಪ್ರದರ್ಶನದ ಮೂಲಕವೇ ಉತ್ತರ ನೀಡಿದ್ದಾರೆ.
ಆಸೀಸ್ ವಿರುದ್ಧ ಗಾಬಾದಲ್ಲಿ ನಡೆಯುತ್ತಿರುವ ಅಂತಿಮ ಟೆಸ್ಟ್ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್, ಚೊಚ್ಚಲ ಐದು ವಿಕೆಟ್ ಸಾಧನೆ ಮಾಡಿದ್ದಾರೆ. ದ್ವಿತೀಯ ಇನ್ನಿಂಗ್ಸ್ನಲ್ಲಿ ಬೃಹತ್ ಮೊತ್ತ ಪೇರಿಸುವ ಆಸೀಸ್ ಇರಾದೆಗೆ ಲಗಾಮು ಹಾಕಿದ ಸಿರಾಜ್ 19.5 ಓವರ್ಗಳಲ್ಲಿ 73 ರನ್ ತೆತ್ತು ಐದು ವಿಕೆಟ್ ಸಾಧನೆ ಮಾಡಿದರು.
ಸಿರಾಜ್ ವಿಕೆಟ್ ಬೇಟೆಯಲ್ಲಿ ಮೊದಲ ಇನ್ನಿಂಗ್ಸ್ ಶತಕ ವೀರ ಮಾರ್ನಸ್ ಲಾಬುಷೇನ್, ಸ್ಟೀವನ್ ಸ್ಮಿತ್, ಮ್ಯಾಥ್ಯೂ ವೇಡ್, ಮಿಚೆಲ್ ಸ್ಟಾರ್ಕ್ ಹಾಗೂ ಜೋಶ್ ಹ್ಯಾಜಲ್ವುಡ್ ಹೆಸರುಗಳು ಸೇರಿವೆ.